)
ಕನ್ನಡಪ್ರಭ ವಾರ್ತೆ, ಚಾಮರಾಜನಗರ
ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಸಭಾಂಗಣದಲ್ಲಿ ಯುಗಾದಿ ಹಾಗೂ ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ನಡೆದ ಸೌಹಾರ್ಧತೆಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು,
ಈ ಬಾರಿ ಯುಗಾದಿ ಹಾಗೂ ರಂಜಾನ್ ಹಬ್ಬಗಳು ಒಟ್ಟಿಗೆ ಬಂದಿವೆ. ಹಬ್ಬಗಳು ಒಟ್ಟಿಗೆ ಬರುವುದು ಸೌಹಾರ್ಧತೆಯ ಸಂಕೇತ ಈ ಹಿನ್ನೆಲೆಯಲ್ಲಿ ಹಿಂದು ಹಾಗೂ ಮುಸ್ಲಿಂ ಸಮುದಾಯದವರು ಯಾವುದೇ ಅನಾಹುತಗಳಿಗೆ ಎಡೆಮಾಡಿಕೊಡದೇ ಶಾಂತಿಯುತವಾಗಿ ಹಬ್ಬಗಳನ್ನು ಆಚರಣೆ ಮಾಡಬೇಕು ಎಂದರು.ನಗರ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಇದ್ದು ಎಲ್ಲೆಂದರಲ್ಲಿ ಕಸದ ರಾಶಿ ರಾರಾಜಿಸುತ್ತಿದೆ. ಸಮರ್ಪಕವಾಗಿ ಕಸ
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು ಮಾತನಾಡಿ, ಹಬ್ಬದ ದಿನಗಳ ವೇಳೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಇರುವುದರಿಂದ ಧ್ವನಿವರ್ಧಕಗಳನ್ನು ಹೆಚ್ಚಾಗಿ ಬಳಕೆ ಮಾಡಬಾರದು. ಹಿಂದೂ ಹಾಗೂ ಮುಸ್ಲಿಂ ಸಮುದಾಯವರು ಒಗ್ಗಟ್ಟಾಗಿ ಹಬ್ಬಗಳನ್ನು ಆಚರಣೆ ಮಾಡುವಂತೆ ಮನವಿ ಮಾಡಿದರು.
ಸಭೆಯಲ್ಲಿ ಡಿವೈಎಸ್ಪಿ ಸ್ನೇಹಾರಾಜ್, ನಗರಸಭೆ ಆಯುಕ್ತ ಪರಶುರಾಮ್ ಚಲವಾದಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಇದ್ದರು.--------------೧೬ಸಿಎಚ್‌ಎನ್೨ಚಾಮರಾಜನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಸಭಾಂಗಣದಲ್ಲಿಸೋಮವಾರ ನಡೆದ ಯುಗಾದಿ ಹಾಗೂ ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ನಡೆದ ಸೌಹಾರ್ಧತೆ ಸಭೆಯಲ್ಲಿ ಜಿಲ್ಲಾಧಿಕಾರಿಶ್ರೀರೂಪ ಮಾತನಾಡಿದರು.ಎಸ್ಪಿ ಮುತ್ತುರಾಜು, ಡಿವೈಎಸ್ಪಿ ಸ್ನೇಹಾರಾಜ್, ಇದ್ದಾರೆ.------------