ಕಾರಿಂಜ ಸಮಗ್ರ ಅಭಿವೃದ್ಧಿಗೆ ಎಲ್ಲರ ಸಹಕಾರ ಅಗತ್ಯ: ಚೌಟ

KannadaprabhaNewsNetwork |  
Published : Aug 11, 2026, 03:30 AM IST
ಕಾರಿಂಜ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಎಲ್ಲರ ಸಹಕಾರ ಅಗತ್ಯ: ಸಂಸದ ಬ್ರಿಜೇಶ್ ಚೌಟಭಕ್ತರ ಅನುಕೂಲಕ್ಕಾಗಿ ಸಿಎಸ್‌ಆರ್ ಅನುದಾನದಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಾಣ | Kannada Prabha

ಸಾರಾಂಶ

ಐತಿಹಾಸಿಕ ಹಾಗೂ ಧಾರ್ಮಿಕ ಮಹತ್ವ ಹೊಂದಿರುವ ಶ್ರೀ ಕ್ಷೇತ್ರ ಕಾರಿಂಜದ ಸಮಗ್ರ ಅಭಿವೃದ್ಧಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಜತೆಗೆ ಸಾರ್ವಜನಿಕರು, ಸ್ಥಳೀಯ ಸಂಸ್ಥೆಗಳು, ಕೈಗಾರಿಕಾ ಸಂಸ್ಥೆಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಕಾರವೂ ಅಗತ್ಯವಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದರು.

ಕನ್ನಡಪ್ರಭ ವಾರ್ತೆ ಬಂಟ್ವಾಳ

ಐತಿಹಾಸಿಕ ಹಾಗೂ ಧಾರ್ಮಿಕ ಮಹತ್ವ ಹೊಂದಿರುವ ಶ್ರೀ ಕ್ಷೇತ್ರ ಕಾರಿಂಜದ ಸಮಗ್ರ ಅಭಿವೃದ್ಧಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಜತೆಗೆ ಸಾರ್ವಜನಿಕರು, ಸ್ಥಳೀಯ ಸಂಸ್ಥೆಗಳು, ಕೈಗಾರಿಕಾ ಸಂಸ್ಥೆಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಕಾರವೂ ಅಗತ್ಯವಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದರು.

ಕಾವಳಮೂಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಥಬೀದಿ ಶ್ರೀ ಕ್ಷೇತ್ರ ಕಾರಿಂಜದಲ್ಲಿ ಪ್ಯಾರಡೀಪ್ ಫಾಸ್ಫೇಟ್ಸ್ ಲಿಮಿಟೆಡ್ (ಪಿಪಿಎಲ್), ಪಣಂಬೂರು, ಮಂಗಳೂರು ಸಂಸ್ಥೆಯ ಸಿಎಸ್‌ಆರ್ ಯೋಜನೆಯಡಿ ಹಾಗೂ ಸಂಸದ ಕ್ಯಾ| ಬ್ರಿಜೇಶ್ ಚೌಟ ಅವರ ಸಹಕಾರದಿಂದ ನಿರ್ಮಿಸಲಾದ ಸಾರ್ವಜನಿಕ ಶೌಚಾಲಯವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಮಾತನಾಡಿ, ಬಂಟ್ವಾಳ ಕ್ಷೇತ್ರದಲ್ಲಿ ಧಾರ್ಮಿಕ ಹಾಗೂ ಐತಿಹಾಸಿಕ ಮಹತ್ವ ಹೊಂದಿರುವ ದೇವಾಲಯಗಳ ಅಭಿವೃದ್ಧಿಗೆ ಅಗತ್ಯ ಸಹಕಾರ ನೀಡಲಾಗುತ್ತಿದೆ ಎಂದರು.

ಸಾರ್ವಜನಿಕ ಶೌಚಾಲಯದಂತಹ ಸೌಲಭ್ಯಗಳು ಸಣ್ಣ ಕಾಮಗಾರಿಗಳಂತೆ ಕಂಡರೂ, ಭಕ್ತರು ಹಾಗೂ ಪ್ರವಾಸಿಗರ ದೃಷ್ಟಿಯಿಂದ ಅವು ಅತ್ಯಂತ ಮಹತ್ವದ್ದಾಗಿವೆ. ಮುಂದಿನ ದಿನಗಳಲ್ಲಿಯೂ ಕ್ಷೇತ್ರದ ಅಗತ್ಯಗಳಿಗೆ ಅನುಗುಣವಾಗಿ ಅಭಿವೃದ್ಧಿ ಕಾರ್ಯಗಳಿಗೆ ಸಹಕಾರ ನೀಡಲಾಗುವುದು ಎಂದರು.

ಪಿಪಿಎಲ್ ಪಣಂಬೂರಿನ ಎಂಸಿಎಂ ಷಣ್ಮುಗಂ, ಕಾವಳಮೂಡೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಚನ್ ಕುಮಾರ್, ಶ್ರೀ ಕ್ಷೇತ್ರ ಕಾರಿಂಜದ ಮಾಜಿ ಆಡಳಿತ ಮೊಕ್ತೇಸರ ಪಿ. ಜಿನರಾಜ ಆರಿಗ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ವೀರೇಂದ್ರ ಅಮೀನ್, ಕಾವಳಪಡೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಮೋದ್ ಕುಮಾರ್ ರೈ, ಕಾವಳಮೂಡೂರು ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷರಾದ ಲಕ್ಷ್ಮಿನಾರಾಯಣ ಶರ್ಮ, ಜಯಲಕ್ಷ್ಮಿ ದೇವಾಡಿಗ ಹಾಗೂ ಅಜಿತ್ ಶೆಟ್ಟಿ ಕಾರಿಂಜ, ಕುಲಾಲ ಸಮಾಜ ಸೇವಾ ಸಂಘ ವಗ್ಗದ ಅಧ್ಯಕ್ಷ ಪುರುಷೋತ್ತಮ ಕುಲಾಲ್ ಹೆರೊಟ್ಟು, ಬಂಟ್ವಾಳ ಮಂಡಲದ ಕಾರ್ಯದರ್ಶಿ ಸುದರ್ಶನ್ ಬಜ, ಉದ್ಯಮಿ ಶ್ರುತಾಂಜನ್ ಜೈನ್ ಅಲಂಪುರಿಗುತ್ತು, ವ್ಯವಸ್ಥಾಪನ ಸಮಿತಿ ಸದಸ್ಯರಾದ ಪ್ರೇಮನಾಥ ಪೂಜಾರಿ, ಉದಯ್ ಕುಮಾರ್ ಹಾಗೂ ಜನಾರ್ದನ ಭಟ್, ಪಿಪಿಎಲ್‌ನ ಷಣ್ಮುಗಂ ಎಂ.ಸಿ.ಎಂ.ಒ., ಕಾವಳಮೂಡೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಚನ್ ಕುಮಾರ್, ಶಕ್ತಿ ಕೇಂದ್ರದ ಪ್ರಮುಖರಾದ ಸತೀಶ್ ಶೆಟ್ಟಿ ಮಧ್ವ, ಜಯಪ್ರಸನ್ನ ನಿಡ್ವಾಳ್ ಹಾಗೂ ಚಂದಪ್ಪ ಮೂಲ್ಯ ಕಾಡಬೆಟ್ಟು, ಮಾಜಿ ಪಂಚಾಯತ್ ಸದಸ್ಯರಾದ ಮೋಹನ್ ಆಚಾರ್ಯ ಕೊಡಂಬೆಟ್ಟು ಹಾಗೂ ಉಮೇಶ್ ಅಜ್ಜಿಬಾಕಿಮಾರು, ಅನುಪ್ ರಾಜ್ ಮಯ್ಯ, ಶರ್ಮಿತ್ ಜೈನ್, ಶಿವರಾಮ ಕುಲಾಲ್, ಪುರುಷೋತ್ತಮ ಕುಲಾಲ್ ಸೇರಿದಂತೆ ಎಲ್ಲಾ ಬೂತ್ ಅಧ್ಯಕ್ಷರು, ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕನ್ನಡಪ್ರಭ ಪ್ರಶಸ್ತಿ ಪುರಸ್ಕೃತ ಡಾ.ಪ್ರಸಾದ ಸಾಸನೂರಗೆ ಸನ್ಮಾನ
ರೈತರ ನೆರವಿಗೆ ಧಾವಿಸಲು ಸಿಎಂಗೆ ಮನವರಿಕೆ: ಸಚಿವ ಎಂ.ಬಿ.ಪಾಟೀಲ