ದೊಡ್ಡಬಳ್ಳಾಪುರ: ಖಾಸಗಿ ಶಾಲೆಗಳ ಪ್ರಭಾವದಿಂದ ಸರ್ಕಾರಿ ಶಾಲೆಗಳು ಕಾಲಕ್ರಮೇಣ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುವ ಪರಿಸ್ಥಿತಿ ಎದುರಾಗುತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳ ಉನ್ನತಿಗೆ ಸಮುದಾಯ ಕೈಜೋಡಿಸಿದರೆ ಶಿಕ್ಷಣದ ಗುಣಮಟ್ಟನ್ನು ಹೆಚ್ಚಿಸಬಹುದಾಗಿದೆ ಎಂದು ದೊಡ್ಡತುಮಕೂರು ಗ್ರಾಪಂ ಮಾಜಿ ಅಧ್ಯಕ್ಷ ಟಿ.ಜಿ.ಮಂಜುನಾಥ್ ಹೇಳಿದರು.
ದೊಡ್ಡತುಮಕೂರು ಪಂಚಾಯತಿ ವ್ಯಾಪ್ತಿಯ ಸರ್ಕಾರಿ ಶಾಲೆಗಳ 110 ಮಕ್ಕಳಿಗೆ ಕಲಿಕಾ ಪರಿಕರಗಳು ಹಾಗೂ ಟ್ಯಾಕ್ ಸೂಟ್‌ಗಳ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಸುಮಾರು ನೂರು ವರ್ಷಗಳ ಇತಿಹಾಸವಿರುವ ದೊಡ್ಡತುಮಕೂರು ಸರ್ಕಾರಿ ಶಾಲೆಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಾಗೂ ಶಾಲಾ ಮಕ್ಕಳನ್ನು ಉತ್ತೇಜಿಸುವ ಸಲುವಾಗಿ ಈ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸರ್ಕಾರಿ ಶಾಲೆಗಳನ್ನು ಉಳಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದ್ದು, ದಾನಿಗಳ ನೆರವು ಪಡೆದು ಶಾಲೆಯನ್ನು ನವೀಕರಣಗೊಳಿಸಲಾಗುವುದು. 35 ವರ್ಷಗಳಿಂದ ನಿರಂತರವಾಗಿ ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಣೆ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ಸಿದ್ದಪಡಿಸಿದ ಶಾಲಾ ಸಮವಸ್ತ್ರಗಳನ್ನು ನೀಡಲಾಗುವುದು ಎಂದು ಹೇಳಿದರು.
ಪಿಕೆಬಿ ಪ.ಪೂ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಕರಗಪ್ಪ ಮಾತನಾಡಿ, ಪ್ರಸ್ತುತ ಸಮಾಜದಲ್ಲಿ ಉತ್ತಮ ಸೇವೆ ಸಲ್ಲಿಸಿರುವ ಹಾಗೂ ಸಲ್ಲಿಸುತ್ತಿರುವ ಪ್ರತಿಯೊಬ್ಬರು ಸರ್ಕಾರಿ ಶಾಲೆಗಳಲ್ಲಿ ಕಲಿತವರೇ ಎಂಬುದು ಗಮನಿಸಬೇಕಾದ ಅಂಶವಾಗಿದೆ. ಸರ್ಕಾರಿ ಶಾಲೆ ಎಂದರೆ ಅಸಡ್ಡೆ ಬೇಡ. ಕೇವಲ ಇಂಗ್ಲಿಷ್ ವ್ಯಾಮೋಹಕ್ಕೆ ಬಿದ್ದು, ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸುವ ಎಲ್ಲಾ ಪೋಷಕರು ಸರ್ಕಾರಿ ಶಾಲೆ ಸಿಗುವ ಶೈಕ್ಷಣಿಕ ಸೌಲಭ್ಯಗಳ ಬಗ್ಗೆ ಅರಿಯಬೇಕಿದೆ ಎಂದು ತಿಳಿಸಿದರು.ಶ್ರೀರಾಮ ಆಸ್ಪತ್ರೆಯ ನಿರ್ದೇಶಕ ಡಾ.ಎಚ್.ಜಿ.ವಿಜಯ ಕುಮಾರ್, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ರಾಜಶೇಖರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ರವಿ ಕುಮಾರ್, ಕಾರ್ಯಕ್ರಮದ ಆಯೋಜಕ ಟಿ.ಜಿ.ಮಂಜನಾಥ್ ದೀಪು, ಶ್ರೀರಾಮ್, ರಘು, ಚಂದ್ರಶೇಖರ್, ಚಿಕ್ಕಣ್ಣ ಎಲೆಕ್ಟಿಕ್ ಆನಂದ್, ಗ್ರಾಪಂ ಸದಸ್ಯ ಲೋಕೇಶ್, ಲಕ್ಷ್ಮಣ್, ದೊಡ್ಡತುಮಕೂರು ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕಿಯಾದ ಸತ್ಯವತಿ, ವಿಎಸ್ಎಸ್‌ಎನ್ ಅಧ್ಯಕ್ಷ ಟಿ.ಎ.ಪ್ರಕಾಶ್, ಮಾಜಿ ಅಧ್ಯಕ್ಷ ನಾಗರಾಜ್ ಹಾಜರಿದ್ದರು.
5ಕೆಡಿಬಿಪಿ8- ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡತುಮಕೂರಿನ ಸರ್ಕಾರಿ ಶಾಲೆಯ ಮಕ್ಕಳಿಗೆ ಟ್ಯಾಕ್ ಸೂಟ್‌ಗಳನ್ನು ವಿತರಿಸಲಾಯಿತು.