ಸೇವಾಲಾಲರ ಜಯಂತಿಗೆ ಎಲ್ಲರ ಸಹಕಾರ ಅಗತ್ಯ

KannadaprabhaNewsNetwork |  
Published : Feb 11, 2026, 03:15 AM IST
ದೇವರಹಿಪ್ಪರಗಿ | Kannada Prabha

ಸಾರಾಂಶ

ಪಟ್ಟಣದಲ್ಲಿ ಸಂತ ಸೇವಾಲಾಲರ 287ನೇ ಜಯಂತ್ಯುತ್ಸವ ಸಮಾರಂಭವನ್ನು ಫೆ.28ಕ್ಕೆ ಸಮುದಾಯದ ಆಯೋಜಿಸಲು ತೀರ್ಮಾನಿಸಿದ್ದಾರೆ. ಕಾರ್ಯಕ್ರಮದ ಯಶಸ್ಸಿಗೆ ಎಲ್ಲರೂ ಸಹಕಾರ ನೀಡಬೇಕು ಎಂದು ತಾಲೂಕು ಘಟಕದ ಉಪಾಧ್ಯಕ್ಷ ಸುರೇಶ ಚವ್ಹಾಣ ಮನವಿ ಮಾಡಿದರು.

ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ

ಪಟ್ಟಣದಲ್ಲಿ ಸಂತ ಸೇವಾಲಾಲರ 287ನೇ ಜಯಂತ್ಯುತ್ಸವ ಸಮಾರಂಭವನ್ನು ಫೆ.28ಕ್ಕೆ ಸಮುದಾಯದ ಆಯೋಜಿಸಲು ತೀರ್ಮಾನಿಸಿದ್ದಾರೆ. ಕಾರ್ಯಕ್ರಮದ ಯಶಸ್ಸಿಗೆ ಎಲ್ಲರೂ ಸಹಕಾರ ನೀಡಬೇಕು ಎಂದು ತಾಲೂಕು ಘಟಕದ ಉಪಾಧ್ಯಕ್ಷ ಸುರೇಶ ಚವ್ಹಾಣ ಮನವಿ ಮಾಡಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಪಟ್ಟಣ ಸೇರಿದಂತೆ 30 ಗ್ರಾಮಗಳ ತಾಂಡಾದ ಸಕಲ ಪದಾಧಿಕಾರಿಗಳು ಹಾಗೂ ಮುಖಂಡರು ಸೇರಿ ಫೆಬ್ರುವರಿ 28ರಂದು ಜಯಂತಿ ಆಚರಣೆಗೆ ನಿರ್ಧರಿಸಲಾಯಿತು. ಸ್ವಾಮೀಜಿಗಳಿಗೆ, ರಾಜಕೀಯ ಮುಖಂಡರಿಗೆ ಆಹ್ವಾನ ನೀಡುವುದು, ಶಾಸಕರು ಸೇರಿದಂತೆ ಎಲ್ಲ ರಾಜಕೀಯ ಮುಖಂಡರನ್ನು ಆಮಂತ್ರಿಸುವಪದು ಸೇರಿದಂತೆ ಕಾರ್ಯಕ್ರಮದ ಯಶಸ್ಸಿಗೆ ಎಲ್ಲ ವಿಷಯಗಳ ಕುರಿತು ಚರ್ಚಿಸಲಾಯಿತು. ಸರ್ವ ಸಮುದಾಯದ ಮುಖಂಡರ ಸಹಕಾರದೊಂದಿಗೆ ಜಯಂತ್ಯುತ್ಸವದಂದು ಪಟ್ಟಣದ ಟಿಪ್ಪು ಸುಲ್ತಾನ್ ವೃತ್ತದಿಂದ ಸೇವಾಲಾಲ್ ವೃತ್ತದವರೆಗೆ ಮೆರವಣಿಗೆ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.ತಾಲೂಕು ಘಟಕದ ಅಧ್ಯಕ್ಷ ಈಶ್ವರ ಚವ್ಹಾಣ ಮಾತನಾಡಿ, ಕಾರ್ಯಕ್ರಮ ಯಶಸ್ವಿಗೆ ಎಲ್ಲರ ಸಹಕಾರ ಮುಖ್ಯ. ಈ ಬಾರಿ ಜಯಂತ್ಯುತ್ಸವವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡೋಣ ಎಂದರು. ಸಭೆಯಲ್ಲಿ ನಿವೃತ್ತ ಅಧಿಕಾರಿಗಳಾದ ಮುದುಕಪ್ಪ ಚವ್ಹಾಣ, ಮುಖಂಡರಾದ ದೀಪಕ ಸೇಠ, ಅಶೋಕ ಪವಾರ, ವಿನೋದ, ನವೀನ, ಜಗದೀಶ, ಗೋಪಾಲ, ಕಾಮ ಸಿಂಗ್, ಶಾಂತು, ದಿಲೀಪ, ದೀಪಕ್ಕ, ಧರ್ಮು, ರಾಮಜಿ, ಗೋಪಾಲ, ಗೋಪಿಚಂದ್, ಸಂಜು, ಮಾರುತಿ, ಭೀಮ್ ಸಿಂಗ್, ಮೋಹನ್, ಕೆ.ಪಿ.ರಾಠೋಡ, ಶಂಕರ, ರಾಮು, ಪರಮಣ್ಣ, ಅಶೋಕ ಸೇರಿದಂತೆ ತಾಲೂಕಿನ 30 ತಾಂಡಾ ಗ್ರಾಮಗಳ ಪದಾಧಿಕಾರಿಗಳು, ಸಮುದಾಯದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶ್ರೀಶಾ ಸೌಹಾರ್ದ ಸೊಸೈಟಿಯಿಂದ ಸ್ವಚ್ಛತಾ ಅಭಿಯಾನ
ಧರ್ಮ ಉಳಿಯ ಹಿಂದೂಗಳು ಸಂಘಟಿತರಾಗಿ