ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ
ಬನಹಟ್ಟಿಯ ಸರ್ಕಾರಿ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಬನಹಟ್ಟಿ ವಲಯದಿಂದ ಹಮ್ಮಿಕೊಂಡ ಮಾದಕ ವಸ್ತುಗಳ ವಿರೋಧಿ ದಿನಾಚರಣೆ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ಮಾತನಾಡಿದರು.ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳನ್ನು ಸೇವಿಸುವುದರಿಂದ ಆಗುವ ದುಷ್ಪರಿಣಾಮಗಳನ್ನು ಸಾಕ್ಷ್ಯ ಚಿತ್ರಗಳ ಮೂಲಕ ವಿವರಿಸಿದರು. ಮಾದಕ ವಸ್ತುಗಳಿಗೆ ದಾಸರಾಗದೆ ಸಮಾಜದಲ್ಲಿ ಸದೃಢ ಜೀವನ ನಡೆಸಬೇಕು. ಪ್ರತಿಯೊಬ್ಬ ನಾಗರಿಕನೂ ಈ ಬಗ್ಗೆ ಜಾಗೃತಿ ಹೊಂದಿ ವಿಶ್ವವನ್ನು ಮಾದಕ ವಸ್ತುಗಳಿಂದ ಮುಕ್ತವಾಗಿಸುವ ಜವಾಬ್ದಾರಿ ತೆಗೆದುಕೊಳ್ಳಬೇಕಿದೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಸರ್ಕಾರಿ ಪದವಿಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯೆ ಚಂದ್ರಪ್ರಭಾ ಬಾಗಲಕೋಟ ಮಾತನಾಡಿ, ವಿದ್ಯಾರ್ಥಿಗಳ ಮನಸ್ಸು ತುಂಬಾ ಚಂಚಲವಾದದ್ದು, ಯಾರು ಕೂಡ ಮಾದಕ ವಸ್ತುಗಳಿಗೆ ಆಕರ್ಷಿತರಾಗದೇ ದುಷ್ಟ ವ್ಯಸನಗಳಿಂದ ದೂರುವಿದ್ದು, ಒಳ್ಳೆಯ ಭವಿಷ್ಯರೂಪಿಸಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಬನಹಟ್ಟಿ ವಲಯ ಮೇಲ್ವಿಚಾರಕ ಶಿವಾನಂದ ಎಂ.ವೈ., ಸೇವಾ ಪ್ರತಿನಿಧಿ ಗಾಯತ್ರಿ ಪೂಜಾರಿ, ಕಾಡೇಶ ನಾವಿ, ಎಸ್. ಆರ್. ಮಹಾಜನ ಸೇರಿದಂತೆ ಅನೇಕರು ಇದ್ದರು.