ಕನ್ನಡಪ್ರಭ ವಾರ್ತೆ ವಿರಾಜಪೇಟೆ
ಬೇಟೋಳಿ ರಾಮನಗರದ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ಸಭಾಂಗಣದಲ್ಲಿ ಜರುಗಿದ ಕೊಡಗು ಬಾಲವಲೀಕಾರ್ ರಾಜಾಪುರ ಸಾರಸ್ವತ ಬ್ರಾಹ್ಮಣ ಸಮಾಜದ ಮಕ್ಕಳ ವೈದಿಕ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು.
ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ಏನನ್ನಾದರೂ ಕಲಿಯಬೇಕಾದರೆ ಮೊದಲು ಆತನಲ್ಲಿ ಶ್ರದ್ಧೆ ಹಾಗೂ ಕಲಿಯುವ ಆಸಕ್ತಿ ಇರಬೇಕು. ಇದರೊಂದಿಗೆ ಕಲಿಯುವ ಸಂದರ್ಭ ದಲ್ಲಿ ಏಕಾಗ್ರತೆಯು ಅತಿ ಮುಖ್ಯವಾಗಿದ್ದು. ಗುರುಗಳು ಬೋಧಿಸಿದ್ದನ್ನು ಉತ್ತಮ ರೀತಿಯಲ್ಲಿ ಶ್ರವಣ ಮಾಡಿಕೊಳ್ಳಬೇಕು ಎಂದರು.ಭಗವದ್ಗೀತೆ ಪಠಣದಿಂದ ಮನಃಶಾಂತಿ:
ಕಾರ್ಯಕ್ರಮದ ಮತ್ತೋರ್ವ ಅತಿಥಿಗಳಾದ ಪ್ರವೀಣ್ ಭಟ್ ಮಾತನಾಡಿ ಶಿಬಿರದಲ್ಲಿ ಪಾಲ್ಗೊಂಡಂತಹ ಶಿಬಿರಾರ್ಥಿಗಳು ಶಿಬಿರದಲ್ಲಿ ಕಲಿತಂತಹ ವಿಚಾರಗಳನ್ನು ತಮ್ಮ ಜೀವನದಲ್ಲಿ ಹೇಗೆ ಅಳವಡಿಸಿಕೊಳ್ಳಬೇಕು ಹಾಗೂ ಶಿಬಿರದಲ್ಲಿ ಕಲಿತ ವಿಚಾರ ಶಿಬಿರಕ್ಕೆ ಮಾತ್ರ ಸೀಮಿತವಾಗದೆ ಜೀವನದ ಉದ್ದಕ್ಕೂ ಪಾಲಿಸಬೇಕೆಂದರು.
15 ವಟುಗಳು ಭಾಗಿ:ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಪುದುಪಾಡಿ ಅಯ್ಯಪ್ಪ ದೇವಸ್ಥಾನದ ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ಶೈಲೇಶ್ ಕಾಮತ್ ಕೊಡಗಿನಲ್ಲಿ ಇದೇ ಮೊದಲ ಬಾರಿ ಕೊಡಗು ಬಾಲವಳಿಕಾರ್ ರಾಜಪುರ ಸಾರಸ್ವತ ಬ್ರಾಹ್ಮಣರ ವೈದಿಕ ಶಿಬಿರವನ್ನು ನಡೆಸಲಾಗಿದ್ದು ಇದರಲ್ಲಿ ಒಟ್ಟು 15 ವಟುಗಳು ಪಾಲ್ಗೊಂಡಿದ್ದರು. ಮೂರು ದಿನಗಳ ಕಾಲ ನಡೆದ ಈ ಶಿಬಿರದಲ್ಲಿ ರಾಜೇಶ್ ಭಟ್ ಹಾಗೂ ಶ್ರೇಯಸ್ ಭಟ್ ನೇತೃತ್ವದಲ್ಲಿ ಶಿಬಿರಾರ್ಥಿಗಳಿಗೆ ಕುಲದೇವರ ಪೂಜೆ, ಸಂಧ್ಯಾವಂದನೆ, ಯೋಗ, ಭೋಜನ ವಿಧಿ , ಜನಿವಾರ ದಾರಣೆ ಹಾಗೂ ಭಗವತ್ ಗೀತೆ ಪಠಣ ವನ್ನು ಕಲಿಸಲಾಗಿದ್ದು ಮುಂದಿನ ವರ್ಷ ಇನ್ನು ಹೆಚ್ಚಿನ ವಟುಗಳೊಂದಿಗೆ 7 ದಿನಗಳ ಶಿಬಿರ ನಡೆಸುವ ಕುರಿತು ಚಿಂತನೆ ನಡೆಸಲಾಗುವುದು ಎಂದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಶ್ರೇಯಸ್ ಭಟ್, ವೇಣುಗೋಪಾಲ್ ಭಟ್ ಹಾಜರಿದ್ದರು. ಕಾರ್ಯಕ್ರಮದ ನಂತರ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಸಂಗೀತ , ರಾಮಶರ್ಮ , ಜ್ಯೋತಿ , ಸುಮನ ಹಾಗೂ ಪೋಷಕರು ಹಾಜರಿದ್ದರು.