ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆಯಿಂದ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಗಾಂಧಿ ಸ್ಮರಣೆ ಮತ್ತು ದುಶ್ಚಟಗಳ ವಿರುದ್ಧ ಜಾಗೃತಿ ಜಾಥಾಕ್ಕೆ ಅಂಬೇಡ್ಕರ್ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಿ ಪಾರಿವಾಳ ಹಾರಿ ಬಿಟ್ಟು, ಹಸಿರು ಬಾವುಟ ಪ್ರದರ್ಶಿಸುವ ಮೂಲಕ ಚಾಲನೆ ನೀಡಿದ ಮಾತನಾಡಿದರು.
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ಗಾಂಧಿ ಸ್ಮರಣೆ ಮತ್ತು ದುಶ್ಚಟಗಳ ವಿರುದ್ಧದ ಸದ್ಬಾವನೆಯುಳ್ಳ ಜಾಥಾವನ್ನು ಹಮ್ಮಿಕೊಂಡಿದೆ. ಅಲ್ಲದೇ, ಹಲವು ಜನಪರ ಯೋಜನೆ ಹಮ್ಮಿಕೊಳ್ಳುವ ಮೂಲಕ ಸಮಾಜದ ಏಳಿಗೆಗಾಗಿ ಶ್ರಮಿಸುತ್ತಿದೆ ಎಂದು ಶ್ಲಾಘಿಸಿದರು.ನಂತರ ಅಂಬೇಡ್ಕರ್ ವೃತ್ತದಿಂದ ಆರಂಭವಾದ ಜಾಥಾ ಪಟ್ಟಣದ ಮುಖ್ಯ ರಸ್ತೆ ಮೂಲಕ ಟಿಎಪಿಸಿಎಂಎಸ್ ಕಲ್ಯಾಣ ಮಂಟಪದ ವರೆಗೆ ಸಾಗಿತು. ಜಾಥಾದಲ್ಲಿ ಧರ್ಮಸ್ಥಳ ಮಹಿಳಾ ಸಂಘಗಳು ಹಾಗೂ ಜನಜಾಗೃತಿ ವೇದಿಕೆಯ ನೂರಾರು ಮಹಿಳೆಯರು ಹಾಗೂ ಪುರುಷರು ಭಾಗವಹಿಸಿದ್ದರು.
ಪ್ರಸ್ತುತ ಯುವಕರು ಹಲವು ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ. ಇದರಿಂದ ಎಷ್ಟೋ ಕುಟುಂಬಗಳು ಸಹ ಸಮಸ್ಯೆಗಳಿಗೆ ಸಿಲುಕುವಂತಾಗುತ್ತಿದೆ. ಯುವಕರ ದುಶ್ಚಟಗಳ ಬಿಡಿಸಲು ಸಂಸ್ಥೆ ವಿವಿಧ ಶಿಬಿರಗಳ ನಡೆಸುವ ಮೂಲಕ ಅವರ ಜೀವನವನ್ನು ಉತ್ತಮಗೊಳಿಸುವ ನಿರಂತರವಾಗಿ ಸೇವೆ ಮಾಡುತ್ತಿದೆ ಎಂದು ಸಂಸ್ಥೆಯನ್ನು ಪ್ರಶಂಸಿದರು.
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಾರ್ಯದರ್ಶಿ ಹಾಗೂ ಸಂಪನ್ಮೂಲ ವ್ಯಕ್ತಿ ವಿವೇಕ್ ವಿನ್ಸೆಂಟ್ ಪಾಯಿಸ್ ಮಾತನಾಡಿದರು. ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಎಚ್.ಸಿ. ಧನಂಜಯ ಅಧ್ಯಕ್ಷತೆ ವಹಿಸಿದ್ದರು. ಉಪವಿಭಾಗಾಧಿಕಾರಿ ಶ್ರೀನಿವಾಸ್, ರೈತ ಹೋರಾಟಗಾರ ಕೆ.ಎಸ್.ನಂಜುಂಡೇಗೌಡ, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಸಂಘಟನಾಧ್ಯಕ್ಷ ನಟರಾಜು ಸಿ. ಬಾದಾಮಿ, ಪ್ರಾದೇಶಿಕ ನಿರ್ದೇಶಕ ಯೋಗೇಶ್, ಜನಜಾಗೃತಿ ವೇದಿಕೆ ಅಧ್ಯಕ್ಷ ಹಂದನಳ್ಳಿ ಸೊಮಶೇಖರ್, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಎಂ.ಎಲ್.ದಿನೇಶ್, ಪುರಸಭೆ ಮುಖ್ಯಾಧಿಕಾರಿ ಎಂ.ರಾಜಣ್ಣ, ಡಾ.ಸುಜಯ್ ಕುಮಾರ್, ಆಶಾಲತಾ ಪುಟ್ಟೇಗೌಡ, ಸಿಪಿಐ ಬಿ.ಜಿ.ಕುಮಾರ್, ಪುರಸಭೆ ಮಾಜಿ ಉಪಾಧ್ಯಕ್ಷ ಕೃಷ್ಣಪ್ಪ, ಟಿಎಪಿಸಿಎಂಎಸ್ ಅಧ್ಯಕ್ಷ ಎಸ್.ಎಂ. ನಾಗರಾಜು, ಎಂ.ನಂದೀಶ್ ಸೇರಿದಂತೆ ಇತರರು ಉಪಸ್ಥಿತಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು.