ಚಾಮರಾಜನಗರ: ಒತ್ತಡದ ಬದುಕಿನಲ್ಲಿ ಹಾಗೂ ದೈನಂದಿನ ಕೆಲಸ ಕಾರ್ಯಗಳ ನಡುವೆ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕಾಗಿ ಪ್ರತಿಯೊಬ್ಬರೂ ಜಾಗರೂಕರಾಗಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಜಿ. ಪ್ರಭಾವತಿ ಅವರು ಹೇಳಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಈಶ್ವರ್ ಅವರು ಮಾತನಾಡಿ, ಆಯುಷ್ ಪದ್ಧತಿಯ ಸದುಪಯೋಗ ಪಡೆದುಕೊಂಡು ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ತಿಳಿಸಿ ಕಾರ್ಯಕ್ರಮಕ್ಕೆ ಶುಭಕೋರಿದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಪುಟ್ಟಸ್ವಾಮಿ ರಾಮಸಮುದ್ರ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂದಿನ ದಿನಗಳಲ್ಲಿ ನಾವು ಬಳಸುತ್ತಿರುವ ಆಹಾರ ಪದಾರ್ಥಗಳು ಕಲುಷಿತಗೊಂಡಿದ್ದು, ಆರೋಗ್ಯ ಕಾಪಾಡಿಕೊಳ್ಳಲು ಆಯುಷ್ ಪದ್ಧತಿಯ ಅಗತ್ಯತೆ ಬಗ್ಗೆ ತಿಳಿಸಿದರು.ಜಿಲ್ಲಾ ಆಯುಷ್ ಅಧಿಕಾರಿ ಡಾ. ಬಿ.ಪಿ. ಸತೀಶ್ ಕುಮಾರ್ ಅವರು, ಆಯುಷ್ ಇಲಾಖೆಯ ವಿವಿಧ ಕಾರ್ಯಕ್ರಮಗಳು ಹಾಗೂ ಲಭ್ಯವಿರುವ ಚಿಕಿತ್ಸೆಗಳ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಎಸ್.ಜೆ. ಕೃಷ್ಣ, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಮುಖ್ಯ ನ್ಯಾಯಿಕ ದಂಡನಾಧಿಕಾರಿಗಳಾದ ಸಿ.ಡಿ ಪ್ರಕಾಶ್, ಜೆ.ಎಂ.ಎಫ್.ಸಿ ನ್ಯಾಯಾಲಯದ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಆರ್. ಸುನೀಲ್, ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಸ್ಮಿತಾ ನಾಗಲಾಪುರ್, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಪ್ರತಿಭಾ, ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಎಂ. ಶಿವರಾಮು, ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿ ಜಿ.ಪಿ. ಸುರೇಶ್, ಇತರರು ಉಪಸ್ಥಿತರಿದ್ದರು.
9ಸಿಎಚ್‌ಎನ್53
-----------