ಅಂಬೇಡ್ಕರ್‌ ಚಿಂತನೆ ಸಾಕಾರಕ್ಕೆ ಪ್ರತಿಯೊಬ್ಬರು ವಿದ್ಯಾವಂತರಾಗಬೇಕು: ಪ್ರೊ. ಆಲೂರ

KannadaprabhaNewsNetwork |  
Published : Oct 28, 2025, 12:37 AM IST
ಚಿತ್ರ :  25ಎಂಡಿಕೆ3 : ಕಾರ್ಯಕ್ರಮದಲ್ಲಿ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.  | Kannada Prabha

ಸಾರಾಂಶ

ಡಾ. ಅಂಬೇಡ್ಕರ್‌ ಅವರ ಚಿಂತನೆ ಸಾಕಾರಗೊಳ್ಳಲು ಪ್ರತಿಯೊಬ್ಬರೂ ವಿದ್ಯಾವಂತಾರಾಗಬೇಕು ಎಂದು ಗಣ್ಯರು ಹೇಳಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಬುದ್ಧ, ಬಸವ ಹಾಗೂ ಡಾ.ಅಂಬೇಡ್ಕರ್ ಅವರ ಚಿಂತನೆ ಸಾಕಾರಗೊಳ್ಳಲು ಮತ್ತು ಆದರ್ಶಗಳು ಅರ್ಥಪೂರ್ಣಗೊಳ್ಳಲು ಪ್ರತಿಯೊಬ್ಬರು ವಿದ್ಯಾವಂತರಾಗಬೇಕು ಎಂದು ಚಿಕ್ಕಅಳುವಾರು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರ ಕರೆ ನೀಡಿದ್ದಾರೆ.2024-25ನೇ ಸಾಲಿನಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ಪ್ರೊಫೆಸರ್ ಗಳಾಗಿ ಬಡ್ತಿ ಹೊಂದಿರುವ ಬೋಧಕ ಸಿಬ್ಬಂದಿಗಳಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಘಟಕದ ವತಿಯಿಂದ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಸಭಾಂಗಣದಲ್ಲಿ ನಡೆದ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಮಾತನಾಡಿ, ಇಂದಿನ ತಂತ್ರಜ್ಞಾನದ ಯುಗದಲ್ಲಿ ಬೆರಳ ತುದಿಯಲ್ಲಿ ಪ್ರಪಂಚದಲ್ಲಿ ನಡೆಯುವ ವಿಚಾರಗಳನ್ನು ತಿಳಿದುಕೊಳ್ಳಬಹುದು. ತಂತ್ರಜ್ಞಾನವನ್ನು ಉತ್ತಮ ರೀತಿಯಲ್ಲಿ ಉಪಯೋಗಿಸಿಕೊಳ್ಳುವಂತಾಗಬೇಕು. ಎಂದು ಸಲಹೆ ನೀಡಿದರು. ಇಂಡಿಯಾ ಪ್ರೈವೇಟ್ ಲಿಮಿಟೆಡ್ ಲೀಡಿಂಗ್ ಎಡ್ಜ್ ಅಡ್ವರ್‌ಟೈಸಿಂಗ್ ನಿರ್ದೇಶಕ ಪ್ರಸನ್ನ ಎಡಿಕೇರಿ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಹಂತದಲ್ಲೂ ಅಡೆತಡೆಗಳಿರುತ್ತದೆ. ಆದ್ದರಿಂದ ಶ್ರಮಪಟ್ಟಷ್ಟು ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ ದೊರೆಯುತ್ತದೆ. ಹೊಸ ತಂತ್ರಜ್ಞಾನವನ್ನು ಬಳಸಿಕೊಂಡು ಉದ್ಯೋಗವಕಾಶ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.

ಪ್ರತಿ ಸಮಸ್ಯೆಗೂ ಪರಿಹಾರ: ಪ್ರಗತಿಪರ ಚಿಂತಕ ಇಸಾಖ್ ಖಾನ್ ಮಾತನಾಡಿ, ಇಂದಿನ ವಿದ್ಯಾರ್ಥಿಗಳೇ ನಾಳಿನ ನಾಯಕರು, ವಿದ್ಯೆಯಿಂದ ಮಾತ್ರ ಪ್ರಬುದ್ಧ ಸಮಾಜ, ಪ್ರಗತಿಪರ ದೇಶ ನಿರ್ಮಾಣ ಮಾಡಲು ಸಾಧ್ಯ. ವಿದ್ಯೆಯಿಂದ ಪ್ರತಿ ಸಮಸ್ಯೆಗೂ ಪರಿಹಾರ ಸಿಗಲಿದೆ ಎಂದು ತಿಳಿಸಿದರು.ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ನ ಪ್ರಾಂಶುಪಾಲ ಮೇಜರ್ ಪ್ರೊ.ಬಿ.ರಾಘವ ಅವರು ಮಾತನಾಡಿ, ಸಂಘಟನೆಗಳು ಸಾಧಕರನ್ನು ಬೆನ್ನು ತಟ್ಟುವಂತಿರಬೇಕು. ಸಮಾಜಮುಖಿ ಕೆಲಸ ಮಾಡುವಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ಹೇಳಿದರು.ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಸರಕಾರಿ ಶಾಲೆಗಳು ಮುಚ್ಚುವ ಹಂತದಲ್ಲಿರುವುದು ವಿಪರ್ಯಾಸ. ಸರಕಾರಿ ಶಾಲೆಗಳು ನೀಡುವ ಶಿಕ್ಷಣವನ್ನು ಖಾಸಗಿ ಶಾಲೆಗಳು ನೀಡಲು ಸಾಧ್ಯವಿಲ್ಲ. ಆದ್ದರಿಂದ ವಿದ್ಯಾರ್ಥಿಗಳು ಸರಕಾರಿ ಶಾಲೆಗಳಲ್ಲಿ ಶಿಕ್ಷಣ ಪಡೆಯುವಂತಾಗಬೇಕು. ಶಿಕ್ಷಣ, ಸಂಘಟನೆ ಮತ್ತು ಹೋರಾಟದಲ್ಲಿ ನಾವು ಜಯ ಸಾಧಿಸಬೇಕಾದರೆ ಉತ್ತಮ ಶಿಕ್ಷಣ ಅಗತ್ಯ ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಮಡಿಕೇರಿ ತಾಲೂಕು ಸಂಚಾಲಕ ದೀಪಕ್ ಪೊನ್ನಪ್ಪ ಅವರು ಮಹಾನ್ ವ್ಯಕ್ತಿಗಳ ಪುಸ್ತಕಗಳನ್ನು ಓದುವುದರಿಂದ ಪ್ರತಿಯೊಬ್ಬರ ಜೀವನದಲ್ಲಿ ಬದಲಾವಣೆ ಸಾಧ್ಯವಾಗುತ್ತದೆ ಎಂದರು. ಸಮಾಜ ಸೇವಕ ಪ್ರದೀಪ್ ಕರ್ಕೇರ ಹಾಗೂ ದಸಂಸ ಪೊನ್ನಂಪೇಟೆ ತಾಲೂಕು ಸಂಚಾಲಕ ಹೆಚ್.ಆರ್.ಜಗದೀಶ್ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಸ್ವಪ್ನ ಪ್ರಾರ್ಥಿಸಿ, ಶ್ರುತಿ ನಿರೂಪಿಸಿ, ಉಪನ್ಯಾಸಕರಾದ ಶ್ರೀಧರ್ ಸ್ವಾಗತಿಸಿ ಮಹಾಲಕ್ಷ್ಮಿ ವಂದಿಸಿದರು. ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಬಿಎ, ಬಿಕಾಂ, ಬಿಸಿಎ, ಬಿಎಸ್‌ಸಿ, ಬಿಬಿಎ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ 15 ವಿದ್ಯಾರ್ಥಿಗಳನ್ನು ಹಾಗೂ ಪ್ರೊಫೆಸರ್‌ಗಳಾಗಿ ಬಡ್ತಿ ಹೊಂದಿರುವ ಪ್ರೊ.ಮೇಜರ್ ರಾಘವ ಬಿ, ಪ್ರೊ.ತಿಪ್ಪೇಸ್ವಾಮಿ ಇ, ಪ್ರೊ.ಗಾಯತ್ರಿ ದೇವಿ ಎ, ಪ್ರೊ.ಶ್ರೀಧರ್ ಹೆಗಡೆ, ಪ್ರೊ.ನಾಗರಾಜು ಕೆ.ಪಿ., ಪ್ರೊ.ಕೃಷ್ಣ ಎಂ.ಪಿ ಹಾಗೂ ಪ್ರೊ.ನಯನ ಕಶ್ಯಪ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ