ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಹಾಗೂ ಸಹಭಾಗಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಡಳಿತ ಭವನದ ಸರ್ ಎಂ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಯ ಕುರಿತ ಅರಿವು ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದರು.
ಮಹಿಳಾ ದೌರ್ಜನ್ಯ ತಡೆ ಕಾಯ್ದೆಮಹಿಳೆಯರ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯಗಳನ್ನು ತಡೆಗಟ್ಟಲು 2013ರ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ ಜಾರಿಗೆ ಬರುವವರೆಗೂ ವಿಶಾಖ ಪ್ರಕರಣದಲ್ಲಿ ಸರ್ವೋಚ್ಛ ನ್ಯಾಯಾಲಯ ನೀಡಿದ ತೀರ್ಪಿನ ಆಧಾರದ ಮೇಲೆ ಕಾನೂನು ಕ್ರಮ ಜರುಗಿಸಿ ತಪ್ಪಿತಸ್ಥರಿಗೆ ಶಿಕ್ಷೆ ನೀಡಲಾಗುತ್ತಿತ್ತು. ಈ ವಿಶಾಖ ಪ್ರಕರಣದ ತೀರ್ಪಿನ ಅಂಶಗಳನ್ನು ಸೇರ್ಪಡಿಸಿಕೊಂಡು 2013ರಲ್ಲಿ ಈ ಕಾಯ್ದೆಯು ಜಾರಿಗೆ ಬಂದಿತು ಎಂದು ಅರು ಹೇಳಿದರು.
ನಮ್ಮ ಸುತ್ತಮುತ್ತಲ ಸಮಾಜ, ದೇಶ ಹಾಗೂ ವಿಶ್ವದಾಧ್ಯಂತ ಒಂದಲ್ಲ ಒಂದು ರೀತಿ ಲೈಂಗಿಕ ದೌರ್ಜನ್ಯಗಳು ದಿನನಿತ್ಯ ನಡೆಯುತ್ತಿರುವುದು ಕಂಡುಬರುತ್ತಿದೆ. ಇಂತಹ ದೌರ್ಜನ್ಯಗಳನ್ನು ತಡೆಗಟ್ಟುವ ಸಕ್ಷಮ ಪ್ರಾಧಿಕಾರಗಳ ಕಾರ್ಯನಿರ್ವಹಣೆಯಿಂದ ಮಹಿಳೆಯರಿಗೆ ಸಾಕಷ್ಟು ಮಟ್ಟಿಗೆ ಉತ್ತಮ ವಾತಾವರಣವನ್ನು ಸೃಷ್ಠಿಯಾಗಿದೆ. ಈ ವಾತಾವರಣ ಹೀಗೆ ಮುಂದುವರೆಯಬೇಕಾದರೆ 2013ರ ಕಾಯ್ದೆಯನ್ನು ಪ್ರತಿಯೊಬ್ಬರು ಅರ್ಥ ಮಾಡಿಕೊಳ್ಳಬೇಕು. ದೌರ್ಜನ್ಯಕ್ಕೆ ಒಳಗಾದವರು ಖಂಡನೆ ಮಾಡಿ ದೂರು ದಾಖಲಿಸುವಂತಾಗಬೇಕು. ಈ ಕಾಯ್ದೆಯನ್ನು ಸಕ್ಷಮ ಪ್ರಾಧಿಕಾರಗಳು ಪರಿಣಾಮಕಾರಿಯಾಗಿ ಜಾರಿಗೆ ತರಬೇಕು ಆ ನಿಟ್ಟಿನಲ್ಲಿ ಈ ಕಾರ್ಯಾಗಾರ ಸಹಕಾರಿಯಾಗಲಿದೆ ಎಂದು ತಿಳಿಸಿದರು. ಸಮಿತಿ ರಚನೆ ಕಡ್ಡಾಯಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಮಾತನಾಡಿ, ಖಾಸಗಿ ಅಥವಾ ಸರ್ಕಾರಿ ಕಚೇರಿ ಅಥವಾ ಕೆಲಸದ ಸ್ಥಳಗಳಲ್ಲಿ 10 ಕ್ಕಿಂತ ಹೆಚ್ಚು ಮಹಿಳಾ ಉದ್ಯೋಗಿಗಳಿದ್ದರೆ, ಸದರಿ ಕಚೇರಿಯಲ್ಲಿ ಆಂತರಿಕ ದೂರು ನಿವಾರಣಾ ಸಮಿತಿಯನ್ನು ಕಡ್ಡಾಯವಾಗಿ ರಚಿಸಬೇಕು, 10 ಕ್ಕಿಂತ ಕಡಿಮೆ ಉದ್ಯೋಗಿಗಳಿರುವ ಸ್ಥಳದಲ್ಲಿ ಲೈಂಗಿಕ ದೌರ್ಜನ್ಯಗಳಾದರೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ತೆರೆದಿರುವ ಆಂತರಿಕ ದೂರು ನಿವಾರಣಾ ಸಮಿತಿಗಳಿಗೆ ಅಥವಾ ನೋಡಲ್ ಅಧಿಕಾರಿಗಳಿಗೆ ದೂರು ನೀಡುವ ಮೂಲಕ ದೌರ್ಜನ್ಯ ಎಸಗುವವರಿಗೆ ತಕ್ಕ ಶಿಕ್ಷೆ ನೀಡುವಂತೆ ಮಾಡಲು ಕ್ರಮವಹಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಜಿಪಂ ಸಿಇಒ ಡಾ.ವೈ.ನವೀನ್ ಭಟ್, ಎಸ್ಪಿ ಕುಶಲ್ ಚೌಕ್ಸೆ, ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಶಿಲ್ಪ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಕೆ.ವಿ.ಅಭಿಲಾಷ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಅತಿಕ್ ಪಾಷಾ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಸಿಬ್ಬಂದಿ ವರ್ಗದವರು ಇದ್ದರು.