ಪ್ರತಿಯೊಬ್ಬರೂ ಕ್ರೀಡಾಸ್ಫೂರ್ತಿ ಬೆಳೆಸಿಕೊಳ್ಳಿ: ಕೆ.ಎಂ.ಉದಯ್

KannadaprabhaNewsNetwork |  
Published : Dec 13, 2025, 02:00 AM IST
12ಕೆಎಂಎನ್ ಡಿ18 | Kannada Prabha

ಸಾರಾಂಶ

ಗ್ರಾಮೀಣ ಭಾಗದಲ್ಲಿ ಕ್ರಿಕೆಟ್ ಆಟ ಜನಪ್ರಿಯತೆ ಪಡೆದಿದೆ. ಯುವ ಜನಾಂಗ ಹೆಚ್ಚಾಗಿ ಕ್ರಿಕೆಟ್ ಅಟಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಗಳನ್ನು ಸಾಬೀತು ಮಾಡುತ್ತಿದ್ದಾರೆ. ಅದೇ ರೀತಿ ಇತರ ಕ್ರೀಡೆಗಳಲ್ಲೂ ಭಾಗವಹಿಸಿ ಉತ್ತಮ ಕ್ರೀಡಾಪಟುಗಳಾಗಿ ಹೊರಹೊಮ್ಮಬೇಕು.

ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ

ಕ್ರೀಡೆಯಲ್ಲಿ ಸೋಲು ಗೆಲುವು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಕ್ರೀಡಾಪಟುಗಳು ಎರಡನ್ನೂ ಸಮಾನವಾಗಿ ಸ್ವೀಕರಿಸಿದಾಗ ಮಾತ್ರ ಭವಿಷ್ಯದಲ್ಲಿ ಉತ್ತಮ ಆಟಗಾರರಾಗಿ ರೂಪುಗೊಳ್ಳಲು ಸಾಧ್ಯ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.ಇಲ್ಲಿನ ಚಾಮುಂಡೇಶ್ವರಿ ಸಕ್ಕರೆ ಕಾರ್ಖಾನೆ ಬಳಿ ಅಣ್ಣೂರು ಗ್ರಾಮದ ಸರ್.ಎಂ ವಿಶ್ವೇಶ್ವರಯ್ಯ ಕ್ರೀಡಾ ಬಳಗದಿಂದ ಆಯೋಜಿಸಿದ್ದ ಸರ್.ಎಂ ವಿಶ್ವೇಶ್ವರಯ್ಯ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದರು.

ಯಾವುದೇ ಕ್ರೀಡಾ ಪಂದ್ಯಾವಳಿಗಳಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಸೋತಾಗ ಕುಗ್ಗದೆ, ಗೆದ್ದಾಗ ಬೀಗದೇ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಕ್ರೀಡಾಸ್ಫೂರ್ತಿ ಬೆಳೆಸಿಕೊಂಡು ಮುನ್ನಡೆಯಬೇಕು ಎಂದರು.

ಗ್ರಾಮೀಣ ಭಾಗದಲ್ಲಿ ಕ್ರಿಕೆಟ್ ಆಟ ಜನಪ್ರಿಯತೆ ಪಡೆದಿದೆ. ಯುವ ಜನಾಂಗ ಹೆಚ್ಚಾಗಿ ಕ್ರಿಕೆಟ್ ಅಟಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಗಳನ್ನು ಸಾಬೀತು ಮಾಡುತ್ತಿದ್ದಾರೆ. ಅದೇ ರೀತಿ ಇತರ ಕ್ರೀಡೆಗಳಲ್ಲೂ ಭಾಗವಹಿಸಿ ಉತ್ತಮ ಕ್ರೀಡಾಪಟುಗಳಾಗಿ ಹೊರಹೊಮ್ಮಬೇಕು ಎಂದರು.

ಗ್ರಾಮೀಣ ಭಾಗಗಳಲ್ಲಿ ಇಂತಹ ಪಂದ್ಯಾವಳಿಗಳನ್ನು ಆಯೋಜಿಸುವುದರಿಂದ ಸಾಕಷ್ಟು ಯುವ ಪ್ರತಿಭೆಗಳಿಗೆ ಅವಕಾಶ ಕಲ್ಪಿಸಿದಂತಾಗುತ್ತದೆ. ಹೊಸ ಹೊಸ ಪ್ರತಿಭೆಗಳು ಬೆಳಕಿಗೆ ಬಂದು ಸಾಮರ್ಥ್ಯ ಪ್ರದರ್ಶಿಸಿದಾಗ ಭವಿಷ್ಯದಲ್ಲಿ ಇನ್ನು ಹೆಚ್ಚಿನ ಅವಕಾಶ ಸಿಕ್ಕಿ ದೊಡ್ಡ ಯಶಸ್ಸು ಪಡೆಯಲು ಸಾಧ್ಯವಾಗುತ್ತದೆ ಎಂದರು.

ಪ್ರಸ್ತುತ ದಿನಗಳಲ್ಲಿ ಬಹುತೇಕ ಯುವಕರು ದುಶ್ಚಟಗಳಿಗೆ ದಾಸರಾಗಿ ತಮ್ಮ ಭವಿಷ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ. ದುಶ್ಚಟಗಳಿಂದ ಹೊರಬರಬೇಕಾದರೆ ಇಂತಹ ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುವಿಕೆ ಅತಿ ಮುಖ್ಯವಾಗಿದೆ ಎಂದರು.

ನಂತರ ಪಂದ್ಯಾವಳಿ ಆಯೋಜಕರಿಗೆ ಪ್ರೋತ್ಸಾಹಪೂರ್ವಕವಾಗಿ ಕದಲೂರು ಉದಯ ಚಾರಿಟಬಲ್ ಟ್ರಸ್ಟ್ ವತಿಯಿಂದ ಧನಸಹಾಯ ನೀಡಲಾಯಿತು.

ಈ ಸಂದರ್ಭದಲ್ಲಿ ಚಾಂಶುಗರ್ಸ್ ನ ಡಿಜಿಎಂ ರವಿ, ಭಾರತಿನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಣ್ಣೂರು ರಾಜೀವ್, ಮುಖಂಡ ಆಟೋ ಪಾಟ್ಸ್೯ ವರದರಾಜು. ಆಯೋಜಕರಾದ ಸಚ್ಚಿನ್, ಗಿರೀಶ್, ಸಂಜಯ್, ವರ, ಮಲ್ಲೇಶ್, ಪವನ್, ಕಿಶನ್, ಪ್ರಜ್ವಲ್, ದೀಕ್ಷಿತ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಲ್ಲಮಾವಟಿ ಭಗವತಿ ದೇವಸ್ಥಾನದಲ್ಲಿ ಶಡಾಧರ ಪೂಜಾ ಸಂಪನ್ನ
ಕಡಿಮೆ ಬೆಳೆ ವಿಮಾ ಮೊತ್ತ ಸರಿಪಡಿಸಿ ಮರು ಪಾವತಿಗೆ ಆಗ್ರಹ