ಪ್ರತಿಯೊಬ್ಬರೂ ಕನ್ನಡ ಅಭಿಮಾನ ಬೆಳೆಸಿಕೊಳ್ಳಬೇಕು: ಮೀನಾಕ್ಷಿ ಕಾಂತರಾಜ್

KannadaprabhaNewsNetwork |  
Published : Nov 24, 2024, 01:49 AM IST
ನರಸಿಂಹರಾಜಪುರ ತಾಲೂಕು ಸಿರಿಗನ್ನಡ ವೇದಿಕೆಯು ಹೊನ್ನೇಕೊಡಿಗೆ ಗ್ರಾಮ ಪಂಚಾಯಿತಿಯಲ್ಲಿ  ಆಯೋಜನೆ ಮಾಡಿದ್ದ  ನುಡಿ ನಿತ್ಯೋತ್ಸವ ಕಾರ್ಯಕ್ರಮದಲ್ಲಿ ಸಿರಿಗನ್ನಡ ವೇದಿಕೆ ಅಧ್ಯಕ್ಷೆ ಮೀನಾಕ್ಷಿ ಕಾಂತರಾಜ್ ಮಾತನಾಡಿದರು. | Kannada Prabha

ಸಾರಾಂಶ

ನರಸಿಂಹರಾಜಪುರ, ಕನ್ನಡ ನಾಡಿನಲ್ಲಿರುವ ಪ್ರತಿಯೊಬ್ಬರೂ ಕನ್ನಡ ಭಾಷೆ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಬೇಕು ಎಂದು ತಾಲೂಕು ಸಿರಿಗನ್ನಡ ವೇದಿಕೆ ಅಧ್ಯಕ್ಷೆ ಮೀನಾಕ್ಷಿ ಕಾಂತರಾಜ್‌ ತಿಳಿಸಿದರು.

ಹೊನ್ನೇಕೊಡಿಗೆ ಗ್ರಾಪಂನಲ್ಲಿ ಸಿರಿಗನ್ನಡ ವೇದಿಕೆಯಿಂದ ನುಡಿ ನಿತ್ಯೋತ್ಸವ

ಕನ್ನಡಪ್ರಭ ವಾರ್ತೆ, ನರಸಿಂಹರಾಜಪುರ

ಕನ್ನಡ ನಾಡಿನಲ್ಲಿರುವ ಪ್ರತಿಯೊಬ್ಬರೂ ಕನ್ನಡ ಭಾಷೆ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಬೇಕು ಎಂದು ತಾಲೂಕು ಸಿರಿಗನ್ನಡ ವೇದಿಕೆ ಅಧ್ಯಕ್ಷೆ ಮೀನಾಕ್ಷಿ ಕಾಂತರಾಜ್‌ ತಿಳಿಸಿದರು.

ಶನಿವಾರ ಹೊನ್ನೇಕೊಡಿಗೆ ಗ್ರಾಪಂ ಕಚೇರಿ ಆವರಣದಲ್ಲಿ ತಾಲೂಕು ಸಿರಿಗನ್ನಡ ವೇದಿಕೆ ಆಯೋಜಿಸಿದ್ದ ನುಡಿ ನಿತ್ಯೋತ್ಸವ -ಕನ್ನಡ ರಾಜ್ಯೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಕನ್ನಡ ಭಾಷೆ, ನೆಲ, ಜಲದ ಸಮಸ್ಯೆ ಎದುರಾದಾಗ ಕನ್ನಡಿಗರು ಒಗ್ಗಟ್ಟಾಗಿ ಹೋರಾಟ ಮಾಡಬೇಕು. ಮಹಿಳೆಯರು ಸಾಮಾಜಿಕ ಕಾರ್ಯಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಸಮಾಜದ ಆಗುಹೋಗುಗಳ ಬಗ್ಗೆ ತಿಳಿದುಕೊಳ್ಳಬೇಕು. ಪ್ರಚಲಿತ ವಿದ್ಯಮಾನ ಗಮನಿಸುತ್ತಿರಬೇಕು. ಕಷ್ಟದಲ್ಲಿರುವವರಿಗೆ ಸಹಾಯಹಸ್ತ ಚಾಚಬೇಕು. ಸಿರಿಗನ್ನಡ ವೇದಿಕೆ ಕನ್ನಡಕ್ಕಾಗಿ ಸದಾ ಚಟುವಟಿಕೆಯಿಂದ ಕೆಲಸ ಮಾಡುತ್ತದೆ ಎಂದರು.

ಮುಖ್ಯ ಅತಿಥಿಯಾಗಿದ್ದ ಹೊನ್ನೇಕೊಡಿಗೆ ಲೇಖಕ ಎಲ್ದೋ ಸ್ವಾತಂತ್ರ್ಯ ಹೋರಾಟದಲ್ಲಿ ಮಹಿಳೆಯರ ಪಾತ್ರ ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಿ, ಸಮಾಜದಲ್ಲಿರುವ ಅನ್ಯಾಯ, ಅಸಮಾನತೆ, ದೌರ್ಜನ್ಯಗಳ ವಿರುದ್ಧ ದ್ವನಿ ಎತ್ತುವುದು ನಾಗರಿಕ ಸಮಾಜದ ಕರ್ತವ್ಯ. ಅಸಹಾಯಕರಿಗೆ, ಬಡವರಿಗೆ ಸಹಾಯ ಹಸ್ತ ಚಾಚಬೇಕು. ಸುಂದರ ಸಮಾಜ ನಿರ್ಮಾಣಕ್ಕೆ ಎಲ್ಲರೂ ಒಟ್ಟಾಗಿ ಶ್ರಮಿಸೋಣ. ಸಮಾಜದ ಎಲ್ಲಾ ಮಹಿಳೆಯರನ್ನು ಗೌರವಿಸೋಣ ಎಂದರು.

ಅತಿಥಿಗಳು ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಹೊನ್ನೇಕೊಡಿಗೆ ಗ್ರಾಪಂ ಅಧ್ಯಕ್ಷೆ ವೀಣಾ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಹಂತುವಾನಿಯ ಅಂಚೆ ಪಾಲಕ ಕೆ.ಟಿ.ಶೇಷಣ್ಣ ಗೌಡ, ಆರೋಗ್ಯ ಇಲಾಖೆಯ ಸೋನಿ, ಸದಸ್ಯ ಮಂಜುನಾಥ್‌ , ಗ್ರಾಮದ ಹಿರಿಯರಾದ ವಿಜಯ, ನೂತನ, ಆಶಾ ಕಾರ್ಯಕರ್ತೆ ಪವಿತ್ರ , ಅನ್ನಮ್ಮ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಹಿಳೆಯರಿಗೆ ಆತ್ಮವಿಶ್ವಾಸ, ಸಾಮಾಜಿಕ ಬೆಂಬಲ ಅಗತ್ಯ
ಕ್ಷುಲ್ಲಕ ಕಾರಣಕ್ಕೆ ಥಳಿಸಿ ದಲಿತ ಯುವಕನ ಹತ್ಯೆ