ಗುಡಿಬಂಡೆ: ಪಟ್ಟಣದ ಜೆ.ಎಂ.ಎಫ್.ಸಿ ನ್ಯಾಯಾಲಯ ಸೇರಿದಂತೆ ತಾಲೂಕಿನ ವಿವಿಧ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಅಂತಾರಾಷ್ಟ್ರೀಯ ಯೋಗಾ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಇಂದಿನ ಆಹಾರ ಪದ್ದತಿಗಳಿಂದ ನಾವೆಲ್ಲರೂ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದೇವೆ. ಹಿಂದಿನ ಕಾಲದಲ್ಲಿ ನಮ್ಮ ಪೂರ್ವಜರು ಕೆಲಸ ಮಾಡುವ ಪದ್ದತಿ ಯೋಗಕ್ಕೆ ಸಮಾನವಾಗಿತ್ತು. ಆದರೆ ಇಂದಿನ ದಿನಗಳಲ್ಲಿ ನಾವು ಆಧುನಿಕತೆ ಎಂಬ ಹೆಸರಿನಲ್ಲಿ ಯೋಗಾ ಮಾಡುವುದನ್ನೆ ಮರೆತಿದ್ದೇವೆ. ಯೋಗಾಭ್ಯಾಸದಿಂದ ಮಾನಸಿಕ ನೆಮ್ಮದಿ ಸೇರಿದಂತೆ ಹಲವು ಪ್ರಯೋಜನಗಳಿವೆ ಎಂದರು.
ತಾಲೂಕಿನ ತಿರುಮಣಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲೂ ಸಹ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಿದ್ದು, ಈ ವೇಳೆ ಶಾಲೆಯ ಮುಖ್ಯಶಿಕ್ಷಕ ಮಂಜುನಾಥ್ ವಿದ್ಯಾರ್ಥಿಗಳಿಗೆ ಯೋಗಾಸನಗಳ ಮಹತ್ವದ ಬಗ್ಗೆ ಅರಿವು ಮೂಡಿಸಿದರು. ವಿದ್ಯಾರ್ಥಿಗಳು ಬಾಲ್ಯದಿಂದಲೇ ಸೂಕ್ತ ತರಬೇತಿಯೊಂದಿಗೆ ಯೋಗಾ ಕಲಿಯಬೇಕು. ಪ್ರತಿನಿತ್ಯ ಕೆಲವೊಂದು ಯೋಗಾಸನಗಳನ್ನು ಮಾಡುವುದರಿಂದ ಆಸ್ಪತ್ರೆಗೆ ಹೋಗುವ ಅವಶ್ಯಕತೆಯೇ ಇರುವುದಿಲ್ಲ. ಆರೋಗ್ಯ ವಂತರಾಗಿ ಜೀವನ ಸಾಗಿಸಬಹುದು. ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿ ಯೋಗಾದ ಬಗ್ಗೆ ಆಸಕ್ತಿ ಬೆಳೆಸಿಕೊಳ್ಳಬೇಕೆಂದರು.ಈ ಸಮಯದಲ್ಲಿ ತಹಸೀಲ್ದಾರ್ ಸಿಗ್ಬತ್ತುಲ್ಲಾ, ಬಿಇಒ ಕೃಷ್ಣಕುಮಾರಿ, ಪಪಂ ಮುಖ್ಯಾಧಿಕಾರಿ ಸಭಾ ಶರೀನ್, ತಾಲೂಕು ಆರೋಗ್ಯಾಧಿಕಾರಿ ಡಾ.ಅಕ್ಷಯ್, ಟಿಪಿಒ ಮುರಳಿ, ದೈಹಿಕ ಶಿಕ್ಷಕ ಮನೋಹರ್, ವಕೀಲರಾದ ಬಾಬಾಜಾನ್, ನ್ಯಾಯಾಲಯದ ಸಿಬ್ಬಂದಿಯಾದ ನಟರಾಜ್, ಸತೀಶ್, ಸುರೇಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಖಾರಿಗಳು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.