ಹಿರಿಯೂರು: ನಗರದ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಅವರ ಜನ್ಮದಿನವನ್ನು ಸೇವಾ ಪಾಕ್ಷಿಕವನ್ನಾಗಿಸಲು ತಾಲೂಕು ಬಿಜೆಪಿಯಿಂದ ವಿಶೇಷ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಹಿರಿಯೂರು ಮಂಡಲ ಅಧ್ಯಕ್ಷ ಅಭಿನಂದನ್ ಮಾತನಾಡಿ, ಸ್ವಚ್ಛ ಭಾರತ್ ಅಭಿಯಾನವನ್ನು ಯಶಸ್ವಿಗೊಳಿಸುವುದು ಪ್ರತಿಯೊಬ್ಬ ಕಾರ್ಯಕರ್ತನ ಹೊಣೆಗಾರಿಕೆಯಾಗಿದೆ ಎಂದರು.
ಕಾಲೇಜು ಆವರಣದಲ್ಲಿ ಹಾಗೂ ಸುತ್ತಮುತ್ತ ಬಿಜೆಪಿ ಕಾರ್ಯಕರ್ತರು ಜನರೊಂದಿಗೆ ಸೇರಿ ಸ್ವಚ್ಛತಾ ಕಾರ್ಯ ನಡೆಸಿದರು.ಈ ಸಂದರ್ಭದಲ್ಲಿ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಮುರುಳಿ, ಮಾಜಿ ಮಂಡಲ ಅಧ್ಯಕ್ಷ ಎ.ವಿಶ್ವನಾಥ್ ಬಿಜೆಪಿ ಹಿರಿಯ ಮುಖಂಡರುಗಳಾದ ರಾಘವೇಂದ್ರ, ಜೆ.ಬಿ.ರಾಜು, ಬಸವರಾಜ್ ನಾಯಕ್, ಸೋಮಣ್ಣ, ಪ್ರಧಾನ ಕಾರ್ಯದರ್ಶಿಗಳಾದ ಯೋಗೇಶ್, ನಿತಿನ್ ಗೌಡ, ವಿವಿಧ ಮೋರ್ಚಾದ ಅಧ್ಯಕ್ಷರುಗಳಾದ ಮುರುಳಿ, ಕೆ.ಟಿ.ಹನುಮಂತು, ಮಂಜುನಾಥ್, ಪ್ರಜ್ವಲ್, ದ್ಯಾಮಣ್ಣ ಹಾಗೂ ಪಕ್ಷದ ಎಲ್ಲಾ ಪ್ರಧಾನ ಕಾರ್ಯದರ್ಶಿಗಳು, ಪದಾಧಿಕಾರಿಗಳು, ಕಾರ್ಯಕರ್ತರು, ನಗರ ಸಭೆ ಯವರು,ವಿದ್ಯಾರ್ಥಿಗಳು ಹಾಜರಿದ್ದರು.