ಪ್ರತಿಯೊಬ್ಬರು ನಿತ್ಯ ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು: ಕೆ.ಎಸ್.ಸುನೀಲ್ ಕುಮಾರ್

KannadaprabhaNewsNetwork |  
Published : Jul 21, 2026, 01:45 AM IST
20ಕೆಎಂಎನ್ ಡಿ13 | Kannada Prabha

ಸಾರಾಂಶ

ಕ್ರೀಡೆ ಎಂದರೆ ಕೇವಲ ಗೆಲುವು-ಸೋಲಿನ ಸ್ಪರ್ಧೆಯಲ್ಲ. ಅದು ದೈಹಿಕ ಆರೋಗ್ಯ, ಮಾನಸಿಕ ದೃಢತೆ, ಶಿಸ್ತು, ಸಮಯಪ್ರಜ್ಞೆ, ಸಹಕಾರ ಮನೋಭಾವ ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸುವ ಅತ್ಯುತ್ತಮ ಸಾಧನವಾಗಿದೆ.

ಕನ್ನಡಪ್ರಭ ವಾರ್ತೆ ಮದ್ದೂರು

ಆರೋಗ್ಯವೇ ಭಾಗ್ಯ ಎಂಬ ನಾಣ್ಣುಡಿಯಂತೆ ಪ್ರತಿಯೊಬ್ಬರೂ ನಿತ್ಯ ಯಾವುದಾದರೂ ಒಂದು ಕ್ರೀಡೆಯಲ್ಲಿ ತೊಡಗಿಕೊಂಡರೆ ದೇಹ ಸದೃಢವಾಗುವ ಜೊತೆಗೆ ಮನಸ್ಸು ಉಲ್ಲಾಸದಿಂದಿರುತ್ತದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್.ಸುನೀಲ್ ಕುಮಾರ್ ಹೇಳಿದರು.

ನಗರದ ಎಚ್.ಕೆ.ವೀರಣ್ಣಗೌಡ ಕಾಲೇಜು ಆವರಣದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಪತ್ರಕರ್ತರ ಕುಟುಂಬ ಸದಸ್ಯರಿಗಾಗಿ ಆಯೋಜಿಸಿದ್ದ ವಿವಿಧ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಮಾತನಾಡಿದರು.

ಕ್ರೀಡೆ ಎಂದರೆ ಕೇವಲ ಗೆಲುವು-ಸೋಲಿನ ಸ್ಪರ್ಧೆಯಲ್ಲ. ಅದು ದೈಹಿಕ ಆರೋಗ್ಯ, ಮಾನಸಿಕ ದೃಢತೆ, ಶಿಸ್ತು, ಸಮಯಪ್ರಜ್ಞೆ, ಸಹಕಾರ ಮನೋಭಾವ ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸುವ ಅತ್ಯುತ್ತಮ ಸಾಧನವಾಗಿದೆ ಎಂದರು.

ಪತ್ರಕರ್ತರು ಪ್ರತಿನಿತ್ಯ ಸಮಾಜಮುಖಿ ಸುದ್ದಿಗಳನ್ನು ಸಂಗ್ರಹಿಸಿ, ತಿದ್ದಿ-ತಿದ್ದು ಬರೆಯುವ ಕೆಲಸದಲ್ಲಿ ನಿರಂತರವಾಗಿ ತೊಡಗಿರುವುದರಿಂದ ಸದಾ ಬ್ಯುಸಿಯಾಗಿರುತ್ತಾರೆ. ಈ ಸಂದರ್ಭಗಳಲ್ಲಿ ಕುಟುಂಬ ಸದಸ್ಯರೊಂದಿಗೆ ಸಮಯ ಕಳೆಯುವುದು ಮತ್ತು ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದು ಮಾನಸಿಕ ನೆಮ್ಮದಿಗೆ ಸಹಕಾರಿಯಾಗುತ್ತದೆ ಎಂದರು.

ಈ ವೇಳೆ ಜಿಲ್ಲಾ ನಿರ್ದೇಶಕ ಎಸ್.ಪುಟ್ಟಸ್ವಾಮಿ, ತಾಲೂಕು ಅಧ್ಯಕ್ಷ ಶಿವನಂಜಪ್ಪ, ಉಪಾಧ್ಯಕ್ಷ ಸಿ.ಹರೀಶ್, ಪ್ರಧಾನ ಕಾರ್ಯದರ್ಶಿ ಎಂ.ಆರ್.ಚಕ್ರಪಾಣಿ, ಕಾರ್ಯದರ್ಶಿ ಎಂ.ಪಿ.ವೆಂಕಟೇಶ್, ಖಜಾಂಚಿ ನಂದೀಶ್ ಪಿ., ಸದಸ್ಯರಾದ ರವಿಕುಮಾರ್, ಅಣ್ಣೂರು ಸತೀಶ್, ಅಶೋಕ್, ಶಿವಕುಮಾರ್, ಸುಂದರ್ ರಾಜ್, ಪ್ರಭು, ಅಂಬರಳ್ಳಿ ಸ್ವಾಮಿ, ಕೃಷ್ಣ, ಸುನಿಲ್, ನಾಗಣ್ಣ, ಮಧು, ನಾಗಮ್ಮ, ಚಾಮನಹಳ್ಳಿ ಮಂಜು ಹಾಗೂ ಪತ್ರಕರ್ತರ ಕುಟುಂಬ ಸದಸ್ಯರು ಉಪಸ್ಥಿತರಿದ್ದರು.

ವಿದ್ಯುತ್ ಸಮಸ್ಯೆ: ಇಂದು ಶಾಸಕರಿಂದ ಅಹವಾಲು ಸ್ವೀಕಾರ

ಮದ್ದೂರು: ನಗರದ ಕೆಇಬಿ ಕಚೇರಿ ಆವರಣದಲ್ಲಿ ಜು.21ರಂದು ಮಧ್ಯಾಹ್ನ 2.30 ಗಂಟೆಗೆ ಶಾಸಕ ಕೆ.ಎಂ.ಉದಯ್ ಅವರು ವಿದ್ಯುತ್ ಸಮಸ್ಯೆ ಕುರಿತು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಚಾಮುಂಡೇಶ್ಶರಿ ವಿದ್ಯುತ್ ನಿಗಮ (ಸೆಸ್ಕ್)ದ ಮದ್ದೂರು ವಿಭಾಗ ವ್ಯಾಪ್ತಿಯ ಕ್ಷೇತ್ರದ ಸಾರ್ವಜನಿಕರು ಕೆಇಬಿಗೆ ಸಂಬಂಧಿಸಿದ ವಿದ್ಯುತ್ ಸಂಪರ್ಕ, ಹೊಸ ಮೀಟರ್, ಬಿಲ್, ಟ್ರಾನ್ಸ್‌ಫಾರ್ಮರ್, ವಿದ್ಯುತ್ ವ್ಯತ್ಯಯ, ಲೈನ್ ಸಮಸ್ಯೆ ಸೇರಿದಂತೆ ವಿವಿಧ ಸಾರ್ವಜನಿಕ ಸಮಸ್ಯೆಗಳು, ದೂರುಗಳು, ಮನವಿಗಳು ಹಾಗೂ ಅಹವಾಲುಗಳನ್ನು ಶಾಸಕರಿಗೆ ನೇರವಾಗಿ ನೀಡಬಹುದು. ನಂತರ ಶಾಸಕರು ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದು ಶೀಘ್ರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ನಗರದ ಸೆಸ್ಕ್ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಸಮಸ್ಯೆ ಬಗೆಹರಿಸಲು ಕ್ರಮ ವಹಿಸಲಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಸೆಸ್ಕ್ ಅಧಿಕಾರಿಗಳು ಕೋರಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸೋನಮ್ ವಾಂಗ್ಚೂಕ್ ಸತ್ಯಾಗ್ರಹಕ್ಕೆ ಸಿಪಿಐ(ಎಂ) ಬೆಂಬಲ
ವಿದ್ಯಾರ್ಥಿಗಳ ಪಾಠಕ್ಕೆ ಕುತ್ತು ತಂದ ಎಸ್ಐಆರ್