ಕನ್ನಡಪ್ರಭ ವಾರ್ತೆ ಪಾಂಡವಪುರ
ತಾಲೂಕಿನ ಚಿಕ್ಕಾಯರಹಳ್ಳಿ ಮಹಿಳಾ ಡೇರಿ ನೂತನ ಕಟ್ಟಡ ಉದ್ಘಾಟನೆ ವೇಳೆ ಪಶು ಆಹಾರ ಮಳಿಗೆ ಉದ್ಘಾಟಿಸಿ ಮಾತನಾಡಿ, ಕೃಷಿ ಪ್ರಧಾನ ಮಂಡ್ಯ ಜಿಲ್ಲೆಯಲ್ಲಿ ಹೈನುಗಾರಿಕೆ ಪ್ರಮುಖ ಪಾತ್ರವಹಿಸುತ್ತಿದೆ. ಲಕ್ಷಾಂತರ ರೈತರು ಕೃಷಿಯೊಟ್ಟಿಗೆ ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡು ಆರ್ಥಿಕವಾಗಿ ಸದೃಢರಾಗುತ್ತಿದ್ದಾರೆ ಎಂದರು.
ಸಹಕಾರ ಸಂಘಗಳು ಅಭಿವೃದ್ಧಿ ಹೊಂದರೆ ಮಾತ್ರ ರೈತರ ಅಭಿವೃದ್ಧಿ ಸಾಧ್ಯವಾಗುತ್ತವೆ. ಹಾಗಾಗಿ ಡೇರಿಯಲ್ಲಿ ಪಾರದರ್ಶಕವಾಗಿ ಆಡಳಿತ ನಡೆಸಿ ಸಂಘವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಬೇಕಾಗಿದೆ ಎಂದರು.ಮನ್ಮುಲ್ ನಿರ್ದೇಶಕ ಸಿ.ಶಿವಕುಮಾರ್ ಮಾತನಾಡಿ, ಹೈನುಗಾರಿಕೆಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಸಾಕಷ್ಟು ಆರ್ಥಿಕ ಸಹಕಾರ ನೀಡುತ್ತಿದ್ದು, ರೈತರು ಸದ್ಬಳಕೆ ಮಾಡಿಕೊಂಡು ಹೆಚ್ಚಿನ ಮಟ್ಟದಲ್ಲಿ ಹೈನುಗಾರಿಕೆಯಲ್ಲಿ ತೊಡಗಿಸಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ಸಂಘಕ್ಕೆ ಒಕ್ಕೂಟದಿಂದ ಎಲ್ಲಾ ಸೌಲಭ್ಯ ದೊರಕಿಸಿಕೊಡುವ ಪ್ರಾಮಾಣಿಕ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಎನ್.ಎಸ್.ಇಂದ್ರೇಶ್ ಮಾತನಾಡಿ, ಮಂಡ್ಯ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡು ಕೆಲಸ ಮಾಡುತ್ತಿದ್ದಾರೆ. ಇದರಿಂದ ಕುಟುಂಬಗಳ ನಿರ್ವಹಣೆಯಾಗುತ್ತಿದೆ. ಹಾಲಿಗೆ ಪ್ರೋತ್ಸಾಹ ಧನ ನೀಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ರೈತರು ಸದಾ ಸ್ಮರಿಸಬೇಕು ಎಂದರು.ಸಮಾರಂಭದಲ್ಲಿ ಡೇರಿ ಅಧ್ಯಕ್ಷೆ ನಮಿತಾ ಚಂದ್ರಶೇಖರ್ ಅಧ್ಯಕ್ಷತೆ ವಹಿಸಿದ್ದರು. ಮನ್ಮುಲ್ ಉಪ ವ್ಯವಸ್ಥಾಪಕ ಆರ್.ಪ್ರಸಾದ್ ಮಾತನಾಡಿದರು. ಡೇರಿ ಉಪಾಧ್ಯಕ್ಷೆ ಸಿ.ಟಿ.ರತ್ನಮ್ಮ, ನಿರ್ದೇಶಕರಾದ ಮಹದೇವಮ್ಮ, ಗೌರಮ್ಮ, ಪ್ರಭಾವತಿ, ಭಾಗ್ಯ, ಸುಶೀಲಮ್ಮ, ಶೋಭ, ಮಹದೇವಮ್ಮ, ರಾಜಮ್ಮ, ಮಾರ್ಗವಿಸ್ತರ್ಣಾಧಿಕಾರಿ ಉಷಾ, ಕಾರ್ಯದರ್ಶಿ ರುದ್ರಾಂಬಿಕೆ, ಸಂಧ್ಯಾ, ಮುಖಂಡರಾದ ರಾಜೇಂದ್ರ, ರಘು, ವಿರೂಪಕ್ಷ, ಗೋವಿಂದಯ್ಯ, ಪ್ರಭುದೇವ, ರಜಿನಿ, ನಿರಂಜನ್, ಚಂದ್ರಶೇಖರ್, ಇಂದ್ರೇಶ್, ನಾಗಣ್ಣ, ಪ್ರಸಾದ್, ಲೋಕೇಶ್, ಆನಂದ್ ಸೇರಿದಂತೆ ಹಲವರು ಇದ್ದರು.