ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪರಿಸರ ಜಾಗೃತಿ ಕಾರ್ಯಕ್ರಮ
ಮುಂದಿನ ಪೀಳಿಗೆಗೆ ಉತ್ತಮ ಪರಿಸರ ನೀಡಲು ಎಲ್ಲರೂ ಕೈಜೋಡಿಸಬೇಕೆಂದು ಎಂ.ಸಿ.ಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಎಸ್.ಡಿಎಂಸಿ ಅಧ್ಯಕ್ಷ ಮಹೇಶ್ ಹೇಳಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ ತರೀಕೆರೆ ಸಮೀಪದ ಎಂ.ಸಿ.ಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪರಿಸರ ಜಾಗೃತಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ. ಮರಗಳನ್ನು ನೆಟ್ಟು ಬೆಳೆಸುವ ಮೂಲಕ ಪ್ರಕೃತಿಯನ್ನು ಉಳಿಸಬೇಕು. ಪರಿಸರ ಮಾಲಿನ್ಯ ತಡೆಗಟ್ಟಬೇಕು ಎಂದು ಹೇಳಿದರು.
ಈ ವೇಳೆ ಸಸಿ ನೆಡುವ ಕಾರ್ಯಕ್ರಮ ನಡೆಯಿತು. ಗ್ರಾಪಂ ಮಾಜಿ ಅಧ್ಯಕ್ಷೆ ಅಲಮೇಲು, ವಲಯದ ಮೇಲ್ವಿಚಾರಕಿ ಭಾರತಿ ಶೆಟ್ಟಿ, ಕೃಷಿ ಮೇಲ್ವಿಚಾರಕ ಸಂತೋಷ, ಸೇವಾಪ್ರತಿನಿಧಿ ದಿವ್ಯ, ಶಾಲೆ ಶಿಕ್ಷಕರಾದ ಮಂಜುಳಾ, ನಾಗರಾಜ್, ಲತಾ, ರಾಜೇಶ್ವರಿ, ವಿದ್ಯಾರ್ಥಿಗಳು, ಸಂಘದ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ತರೀಕೆರೆ ಸಮೀಪದ ಎಂ.ಸಿ.ಹಳ್ಳಿ ಸ.ಹಿ.ಪ್ರಾ.ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಡೆದ ಪರಿಸರ ಜಾಗೃತಿ ಕಾರ್ಯಕ್ರಮದಲ್ಲಿ ಶಾಲೆ ಎಸ್.ಡಿ.ಎಂ.ಸಿ.ಅಧ್ಯಕ್ಷ ಮಹೇಶ್, ಶಿಕ್ಷಕ ಹರ್ಷ,ವಲಯದ ಮೇಲ್ವಿಚಾರಕಿ ಭಾರತಿ ಶೆಟ್ಟಿ,ಕೃಷಿ ಮೇಲ್ವಿಚಾರಕ ಸಂತೋಷ ಮತ್ತಿತರರು ಇದ್ದರು.