ಪ್ರತಿಯೊಬ್ಬರು ಗ್ರಾಹಕ ಹಕ್ಕುಗಳ ಬಗ್ಗೆ ಅರಿಯಿರಿ

KannadaprabhaNewsNetwork |  
Published : Mar 22, 2025, 02:05 AM IST
21-ಬಾದಾಮಿ-1: | Kannada Prabha

ಸಾರಾಂಶ

ಬಾದಾಮಿಯಲ್ಲಿ ನಡೆದ ವಿಶ್ವ ಗ್ರಾಹಕರ ಹಕ್ಕುಗಳ ದಿನಾಚರಣೆ-2025ನ್ನು ಜಿಲ್ಲಾ ಹಿರಿಯ ನ್ಯಾಯಾಧೀಶರಾದ ಚಂದ್ರಶೇಖರ ದಿಡ್ಡಿ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಬಾದಾಮಿ

ಗ್ರಾಹಕರಿಗೆ ಸಂವಿಧಾನ ಬದ್ಧವಾಗಿ ನೀಡಿರುವ ಹಕ್ಕುಗಳ ಬಗ್ಗೆ ಪ್ರತಿಯೊಬ್ಬರಿಗೆ ಅರಿವು ಇರಬೇಕು. ಇದಕ್ಕೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಜಿಲ್ಲಾ ಕೇಂದ್ರದಲ್ಲಿ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ದೂರು ಸಲ್ಲಿಸಿ ಸೂಕ್ತ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಜಿಲ್ಲಾ ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಬಾಗಲಕೋಟೆ ಚಂದ್ರಶೇಖರ.ಪಿ.ದಿಡ್ಡಿ ಹೇಳಿದರು.

ನಗರದ ತಾಪಂ ಸಭಾಭವನದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕಾಡಳಿತ, ವಕೀಲರ ಸಂಘ, ತಾಪಂ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಮತ್ತು ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ಶುಕ್ರವಾರ ವಿಶ್ವ ಗ್ರಾಹಕರ ಹಕ್ಕುಗಳ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಹಿರಿಯ ದಿವಾಣಿ ನ್ಯಾಯಾಧೀಶ ಚಂದ್ರಶೇಖರ ಬಣಕಾರ ಮಾತನಾಡಿ, ಕೆಲ ಜಾಹೀರಾತುಗಳಿಗೆ ಮಾರು ಹೋಗುತ್ತಿರುವ ಗ್ರಾಹಕರು ಬೇಕಾಬಿಟ್ಟಿಯಾಗಿ ವಸ್ತುಗಳ ಖರೀದಿಯಲ್ಲಿ ತೊಡಗುತ್ತಿರುವುದು ಸರಿಯಲ್ಲ. ವಸ್ತುಗಳ ಗುಣಮಟ್ಟ ಪರೀಕ್ಷಿಸಿ ಖರೀದಿಸಬೇಕು. ಪ್ರತಿಯೊಂದು ವಸ್ತುವನ್ನು ಖರೀದಿಸುವಾಗ ಹಣ ಪಾವತಿಸಿರುವ ಬಗ್ಗೆ ರಸೀದಿ ಕಡ್ಡಾಯವಾಗಿ ಪಡೆದುಕೊಳ್ಳಬೇಕು ಅಂದಾಗ ಮಾತ್ರ ಗ್ರಾಹಕರ ನ್ಯಾಯಾಲಯದಲ್ಲಿ ಪರಿಹಾರ ಪಡೆದುಕೊಳ್ಳಲು ಸಾಧ್ಯವಿದೆ ಎಂದು ಹೇಳಿದರು.

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ್ ಕಂಕನವಾಡಿ ಮಾತನಾಡಿ, ಗ್ರಾಹಕರು ವಸ್ತುವನ್ನು ಖರೀದಿಸುವಾಗ ಅವುಗಳ ಮೌಲ್ಯ, ಗುಣಮಟ್ಟ ಮತ್ತು ಐಎಸ್ಐ ಗುರುತಿನ ಜೊತೆಗೆ ಉತ್ಪಾದನೆ ಮತ್ತು ಅವಧಿ ಮೀರಿದ್ದರ ಬಗ್ಗೆ ಕಡ್ಡಾಯವಾಗಿ ಪರಿಶೀಲಿಸಬೇಕು. ಇದರಲ್ಲಿ ಏನಾದರು ವ್ಯತ್ಯಾಸ ಕಂಡು ಬಂದಿಲ್ಲ ತಕ್ಷಣವೇ ಪ್ರಶ್ನಿಸಿ ಪರಿಹಾರ ಕಂಡುಕೊಳ್ಳಬೇಕೆಂದು ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ತಹಸೀಲ್ದಾರ್‌ ಮಧುರಾಜ ಕೆ. ಮಾತನಾಡಿ, ಗ್ರಾಹಕರಿಗೆ ವಂಚನೆ, ಅನ್ಯಾಯ ಆಗುತ್ತಿರುವ ಸಂಗತಿಗಳು ಗಮನಕ್ಕೆ ಬಂದಾಗ ಇದಕ್ಕೆ ಸೂಕ್ತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ 1986ರಲ್ಲಿ ಗ್ರಾಹಕರ ಕಾಯ್ದೆ ಜಾರಿಗೆ ತರಲಾಯಿತು. ಗ್ರಾಹಕರು ಮೋಸ ಹೋದಾಗ ಗ್ರಾಹಕರ ಆಯೋಗಕ್ಕೆ ಅರ್ಜಿ ಸಲ್ಲಿಸಿ ಪರಿಹಾರ ಪಡೆದುಕೊಳ್ಳಬೇಕೆಂದು ತಿಳಿಸಿದರು. ವಕೀಲ ಎಸ್.ವೈ.ಹೊಸಮನಿ ಉಪನ್ಯಾಸ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಕಾನೂನು ಸಲಹೆಗಾರ, ನಿವೃತ್ತ ನ್ಯಾಯಾಧೀಶ ಡಿ.ವೈ.ಬಸಾಪೂರ ಹಾಗೂ ತಾಲೂಕು ವಕೀಲರ ಸಂಘದ ಅಧ್ಯಕ್ಷ ಪ್ರಕಾಶ ಕಲಾಲ ಮಾತನಾಡಿದರು. ಐ.ಕೆ.ಮುಲ್ಲಾ ಸ್ವಾಗತಿಸಿ, ನಿರೂಪಿಸಿದರು, ಆಹಾರ ನಿರೀಕ್ಷಕ ಮಂಜುನಾಥ ರೊಟ್ಟಿ ವಂದಿಸಿದರು. ಕಾರ್ಯಕ್ರಮದಲ್ಲಿ ನೂರಾರು ಸಂಖ್ಯೆಯಲ್ಲಿ ಗ್ರಾಹಕರು, ವಿದ್ಯಾರ್ಥಿಗಳು, ಇತರರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತಂದೆಗೆ ಕಿರುಕುಳ ನೀಡದಂತೆ ಚೈತ್ರಾ ಕುಂದಾಪುರಗೆ ಆದೇಶ
ಕಸಕ್ಕೆ ಬೆಂಕಿ: ಹೊಗೆಯಿಂದ ಮನೆಯಲ್ಲಿ ಉಸಿರಾಡಲು ಆಗುತ್ತಿಲ್ಲ:ನಟಿ ಐಂದ್ರಿತಾ