ಕನ್ನಡಪ್ರಭ ವಾರ್ತೆ ಮಳವಳ್ಳಿ
ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ಜ್ಞಾನವಿಕಾಸ ಕಾರ್ಯಕ್ರಮದಡಿ ನಡೆದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದರು.
ಮಹಿಳೆಯರು ಸಂಬಂಧಗಳ ಮೌಲ್ಯವನ್ನು ಉಳಿಸಿ ದೇಶದ ಸಂಸ್ಕಾರ ಸಂಸ್ಕೃತಿಯನ್ನು ಬೆಳೆಸುವ ಮೂಲಕ ಮಾದರಿಯಾಗಿ ಬದುಕಬೇಕು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕೊಡಿಸಿ ಸರಿಯಾದ ಮಾರ್ಗ ತೋರಿಸಿದರೇ ಭವಿಷ್ಯದಲ್ಲಿ ಮಕ್ಕಳೇ ಆಸ್ತಿಯಾಗಿ ತಂದೆ ತಾಯಿಗಳನ್ನು ಸಾಕುತ್ತಾರೆ ಎಂದು ಸಲಹೆ ನೀಡಿದರು.ಕಳೆದ 12 ವರ್ಷಗಳಿಂದ ಸಂಸ್ಥೆ ಸೇವೆ ಸಲ್ಲಿಸುತ್ತಾ ಬರುತ್ತಿದೆ. 2566 ಸಂಘಗಳು, 22199 ಮಂದಿ ಸದಸ್ಯರಿದ್ದು, ಗ್ರಾಮಗಳ ಅಭಿವೃದ್ದಿಗಾಗಿ 5 ಕೆರೆಗಳ ರಚನೆ, ಸರ್ಕಾರಿ ಶಾಲೆಗಳಿಗೆ ಡೆಸ್ಕ್, ಬೆಂಜ್ ವಿತರಣೆ, ಜ್ಞಾನದೀಪದಡಿ ಅತಿಥಿ ಶಿಕ್ಷಕರಿಂದ ಮಕ್ಕಳಿಗೆ ತರಬೇತಿ, ವೃದ್ದರಿಗೆ ಕಿಟ್ ವಿತರಣೆ, ವಿಕಲಚೇತನರಿಗೆ ಮಾಸಾಶನ ಸೇರಿದಂತೆ ಹಲವು ಕೊಡುಗೆಗಳನ್ನು ನೀಡುತ್ತಿದೆ ಎಂದರು.
ಬಂಡೂರು ಸರ್ಕಾರಿ ಆಯುರ್ವೇದ ಚಿಕಿತ್ಸಾಲಯ ಮುಖ್ಯ ವೈದ್ಯಾಧಿಕಾರಿ ಡಾ. ಆರ್.ಜೆ.ಶೋಭಾ ದೈನಂದಿನ ದಿನಗಳಲ್ಲಿ ಮಹಿಳೆಯರ ಆರೋಗ್ಯ ಅರಿವು ಕುರಿತು ಮಾತನಾಡಿ, ಕುಟುಂಬದ ನಿರ್ವಹಣೆಯಲ್ಲಿ ಮಹಿಳೆಯರ ಪಾತ್ರ ಪ್ರಮುಖ. ರೋಗ ಬರುವುದಕ್ಕಿಂತ ಮುಂಚಿತವಾಗಿ ಮಹಿಳೆಯರು ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಪ್ರತಿದಿನ ಯೋಗವನ್ನು ಅಳವಡಿಸಿಕೊಂಡು ಒತ್ತಡವನ್ನು ಕಡಿಮೆ ಮಾಡಿಕೊಳ್ಳಬೇಕು ಆಯುರ್ವೇದದಲ್ಲಿ ಎಲ್ಲಾ ಸಮಸ್ಯೆಗಳಿಗೂ ಪರಿಹಾರವಿದೆ ಎಂದು ಸಲಹೆ ನೀಡಿದರು.
ಪುರಸಭೆ ಮುಖ್ಯಾಧಿಕಾರಿ ನಾಗರತ್ನ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಸಾಮಾಜಿಕ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.ಈ ವೇಳೆ ಸ್ಪಂದನ ಆಸ್ಪತ್ರೆ ಆಡಳಿತಾಧಿಕಾರಿ ಡಾ.ಆದಿತ್ಯಗೌಡ, ತಾಲೂಕು ಯೋಜನಾಧಿಕಾರಿ ಎನ್.ಲೊಕೇಶ್ ಸೇರಿದಂತೆ ಜ್ಞಾನವಿಕಾಸ ಸಮನ್ವಯಾಧಿಕಾರಿಗಳು, ಮೇಲ್ವಿಚಾರಕು ಇದ್ದರು.