ಕನ್ನಡಪ್ರಭ ವಾರ್ತೆ ಹಲಗೂರು
ಸಮೀಪದ ದಳವಾಯಿ ಕೋಡಿಹಳ್ಳಿ ಗ್ರಾಮ ಪಂಚಾಯ್ತಿ ಸಭಾಂಗಣದಲ್ಲಿ ಆಯೋಜಿಸಿದ್ದ ಅಶ್ಪೃಶತೆ ಆಚರಣೆ ನಿಷೇಧ ಕಾಯ್ದೆ ಬಗ್ಗೆ ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿ, ದೇಶದ ಸಂವಿಧಾನವು ಎಲ್ಲಾ ವರ್ಗದ ಜನರಿಗೂ ಸಮಾನ ಹಕ್ಕು ಅವಕಾಶಗಳನ್ನು ಒದಗಿಸಿಕೊಟ್ಟಿದೆ ಎಂದರು.
ಯಾರೇ ಆದರೂ ಜಾತಿ, ಧರ್ಮ, ಲಿಂಗ ಅಥವಾ ಬಣ್ಣದ ಆಧಾರದ ಮೇಲೆ ಯಾವುದೇ ತಾರತಮ್ಯ ಮಾಡಬಾರದು. ಸಮಾಜದಲ್ಲಿನ ಅಸಮಾನತೆ ತೊಡೆದು ಹಾಕಲು ಕಾಯ್ದೆಯ ಬಗ್ಗೆ ಅರಿವು ಮೂಡಿಸಿಕೊಳ್ಳಬೇಕು ಎಂದರು.ಪಿಎಸ್ಐ ಲೋಕೇಶ್ ಮಾತನಾಡಿ, ಭಾರತೀಯ ಸಂವಿಧಾನದ 17ನೇ ವಿಧಿಯು ಅಸ್ಪೃಶತೆಯನ್ನು ಶಿಕ್ಷಾರ್ಹ ಕಾಯಿದೆ ಎಂದು ಘೋಷಿಸಿದೆ. ಇದರ ಪ್ರಕಾರ ಸಮಾಜದ ಎಲ್ಲಾ ವರ್ಗದ ಜನರಿಗೂ ಸಾರ್ವಜನಿಕ ಸ್ಥಳಗಳಲ್ಲಿ ಮುಕ್ತ ಅವಕಾಶವಿದೆ. ಸಾರ್ವಜನಿಕ ಸೇವೆಗಳನ್ನು ಗೌರವ ಮತ್ತು ಘನತೆಯಿಂದ ಬಳಸಬಹುದು. ಒಂದು ವೇಳೆ ಅಸ್ಪೃಶತೆ ಆಚರಣೆ ಮಾಡಿರುವುದು ಕಂಡು ಬಂದಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಎಚ್ಚರಿಸಿದರು.
ಕಣಿವೆ ಯೋಗೇಶ್ ಕುಟುಂಬಕ್ಕೆ ಹೆಚ್ಚಿನ ಪರಿಹಾರ: ಸಿಎಸ್ಪಿ ಭರವಸೆಪಾಂಡವಪುರ: ರಸ್ತೆ ಅಪಘಾತದಲ್ಲಿ ಮೃತಪಟ್ಟ ವಕೀಲ ಕಣಿವೆ ಯೋಗೇಶ್ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರು ಸಾರಿಗೆ ಇಲಾಖೆಯಿಂದ ಇನ್ನೂ ಹೆಚ್ಚಿನ ಪರಿಹಾರ ದೊರಕಿಸಿಕೊಡುವುದಾಗಿ ಭರವಸೆ ನೀಡಿದರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಶವಗಾರದ ಬಳಿ ಆಗಮಿಸಿ ಮೃತ ಯೋಗೇಶ್ ಅವರ ಪತ್ನಿ, ಪುತ್ರ ಹಾಗೂ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.ಬಳಿಕ ಸ್ಥಳಕ್ಕೆ ಆಗಮಿಸಿದ ಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ತಾತ್ಕಾಲಿಕ ಪರಿಹಾರ ದೊರಕಿಸಿಕೊಟ್ಟರು. ಇಲಾಖೆಯೊಂದಿಗೆ ಚರ್ಚಿಸಿ ಇನ್ನೂ ಹೆಚ್ಚಿನ ಪರಿಹಾರ ದೊರಕಿಸಿಕೊಡಿವುದಾಗಿ ಭರವಸೆ ನೀಡಿದರು.