ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೌಲಭ್ಯ ಪ್ರತಿಯೊಬ್ಬರು ಸದ್ಭಳಕೆ ಮಾಡಿಕೊಳ್ಳಿ

KannadaprabhaNewsNetwork |  
Published : Sep 11, 2026, 01:15 AM IST
ಪೋಟೋ ವಿವರಣೆ ತಾಲೂಕಿನ ದೇವಸಮುದ್ರ ಹುಚ್ಚು ಮಲ್ಲಪ್ಪನ ದೇವಸ್ಥಾನದಲ್ಲಿಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಆಯೋಜಿಸಲಾಗಿದ್ದ ಸಾಮೂಹಿಕ ವರ ಮಹಾಲಕ್ಷ್ಮಿ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಶಾಸಕ ಎನ್.ವೈ.ಗೋಪಾಲಕೃಷ್ಣ ಉದ್ಘಾಟಿಸಿದರು. | Kannada Prabha

ಸಾರಾಂಶ

ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಪ್ರವೀಣ್ ಕುಮಾರ್ ಸಲಹೆ

ಕನ್ನಡಪ್ರಭ ವಾರ್ತೆ ಮೊಳಕಾಲ್ಮುರು

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಸ್ವಸಹಾಯ ಸಂಘಗಳ ಸದಸ್ಯರಿಗೆ ಸಾಲ ಸೌಲಭ್ಯ ಕಲ್ಪಿಸಿ ಲಕ್ಷಾಂತರ ಕುಟುಂಬಗಳಿಗೆ ಆರ್ಥಿಕವಾಗಿ ಆಸರೆಯಾಗಿದೆ. ಸಂಘದಿಂದ ಪಡೆದ ಸಾಲವನ್ನು ದುಂದು ವೆಚ್ಚಕ್ಕೆ ಬಳಸದೆ ಸ್ವ ಉದ್ಯೋಗ, ಮಕ್ಕಳ ಶಿಕ್ಷಣ ಹಾಗೂ ಕುಟುಂಬದ ಅಗತ್ಯಗಳಿಗೆ ಸದುಪಯೋಗಪಡಿಸಿಕೊಳ್ಳಬೇಕು ಎಂದು ಯೋಜನೆಯ ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್ ಹೇಳಿದರು.

ತಾಲೂಕಿನ ದೇವಸಮುದ್ರ ಹುಚ್ಚು ಮಲ್ಲಪ್ಪನ ದೇವಸ್ಥಾನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಆಯೋಜಿಸಲಾಗಿದ್ದ ಸಾಮೂಹಿಕ ವರ ಮಹಾಲಕ್ಷ್ಮಿ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ತಾಯಿಯೇ ಮಗುವಿನ ಮೊದಲ ಗುರುವಾಗಿದ್ದು ಮಕ್ಕಳಲ್ಲಿ ಪ್ರಾಮಾಣಿಕತೆ, ಶಿಸ್ತು, ನ್ಯಾಯ-ನೀತಿ ಹಾಗೂ ಮೌಲ್ಯಾಧಾರಿತ ಬದುಕಿನ ಗುಣಗಳನ್ನು ಬೆಳೆಸಬೇಕು. ಆಡಂಬರದ ಬದುಕಿಗೆ ಹಣವನ್ನು ಖರ್ಚು ಮಾಡುವ ಬದಲು ಉಳಿತಾಯ ಮಾಡಿಕೊಂಡು ಸ್ವಯಂ ಉದ್ಯೋಗ ಮತ್ತು ಮಕ್ಕಳ ಶಿಕ್ಷಣಕ್ಕೆ ಸದ್ಭಳಕೆ ಮಾಡಿಕೊಳ್ಳಬೇಕು. ಇದರಿಂದ ಪ್ರತಿಯೊಬ್ಬರು ಆರ್ಥಿಕವಾಗಿ ಸ್ವಾವಲಂಬಿಗಳಾಗಬಹುದು ಎಂದರು.

ಕಾರ್ಯಕ್ರಮದಲ್ಲಿ ಸ್ಕಾಲರ್ ಶಿಪ್ ಮುಂಜೂರಾತಿಯಾದ ಮಕ್ಕಳಿಗೆ ಯೋಜನೆಯಿಂದ ಮುಂಜೂರಾತಿ ಪತ್ರ ನೀಡಿದರು.

ಈ ಸಂದರ್ಭದಲ್ಲಿ ಶಾಸಕ ಎನ್.ವೈ.ಗೋಪಾಲಕೃಷ್ಣ, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯೆ ವಿಜಯಲಕ್ಷ್ಮಿ, ರಾಂಪುರ ಮುದುಕೇಶ್ವರ ಮಠದ ಗುರು ಪ್ರಸಾದ್ ಸ್ವಾಮೀಜಿ, ಯೋಜನಾಧಿಕಾರಿ ರಾಘವೇಂದ್ರ ನಾಯ್ಕ, ಪೂಜಾ ಸಮಿತಿ ಅಧ್ಯಕ್ಷ ಜಡೇರು ನಾಗರಾಜು, ಕೃಷಿ ಮೇಲ್ವಿಚಾರಕ ಬೋರಯ್ಯ, ವಲಯ ಮೇಲ್ವಿಚಾರಕಿ ಶೀಲಾ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಲಚ್ಚಪ್ಪ ಜಮಾದಾರ ನಿಂದನೆ ಖಂಡಿಸಿ ಪ್ರತಿಭಟನೆ
ಭವಿಷ್ಯದ ಸವಾಲುಗಳಿಗೆ ವಿದ್ಯಾರ್ಥಿಗಳನ್ನು ಸಿದ್ಧಗೊಳಿಸಿ: ಸಂಸದ ರಾಧಾಕೃಷ್ಣ ದೊಡ್ಡಮನಿ