ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು
ನಗರದ ಸಂತೆ ಮೈದಾನದಲ್ಲಿ ಮಂಗಳವಾರ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಏರ್ಪಡಿಸಲಾಗಿದ್ದ ಸಾರ್ವಜನಿಕರಿಗೆ ಸ್ವಚ್ಛತಾ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.
ದೇವಸ್ಥಾನವನ್ನು ಸ್ವಚ್ಚತೆಯಾಗಿಡುವಂತೆ ನಾಗರಿಕರು ನಗರದ ಸ್ವಚ್ಚತೆಗೆ ಮುಂದಾಗಬೇಕೆಂದು ಮನವಿ ಮಾಡಿದ ಅವರು, ಸ್ವಚ್ಚತೆ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಕಾರ್ಯ ಸಮಾರೋಪಾದಿಯಲ್ಲಿ ನಡೆದಾಗ ಮಾತ್ರ ಭವಿಷ್ಯದ ಭಾರತ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಹೇಳಿದರು.ಪೌರಾಯುಕ್ತ ಬಿ.ಸಿ.ಬಸವರಾಜ್ ಮಾತನಾಡಿ, ಸ್ವಚ್ಚತೆ ಬಗ್ಗೆ ನಗರದ ನಾಗರಿಕರಿಗೆ ಅರಿವು ಮೂಡಿಸಿ ಪರಿಸರದ ಬಗ್ಗೆ ಕಾಳಜಿ ವಹಿಸುವಂತೆ ನಗರಸಭೆ ವತಿಯಿಂದ ಹಲವು ಕಾರ್ಯಕ್ರಮಗಳ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿದರು.
ಮುಂದಿನ ಪೀಳಿಗೆಗೆ ಪರಿಸರವನ್ನು ಉಳಿಸಬೇಕಾದರೆ ಗಿಡ-ಮರಗಳನ್ನು ಬೆಳೆಸುವುದು ಅಗತ್ಯವಾಗಿದೆ. ಜೊತೆಗೆ ನದಿ, ಕೆರೆ-ಕಟ್ಟೆಗಳಂತಹ ನದಿ ಮೂಲಗಳನ್ನು ರಕ್ಷಿಸುವ ಮೂಲಕ ಪರಿಸರ ಉಳಿಸಬೇಕಾಗಿದೆ ಎಂದು ಹೇಳಿದರು.
ಸುಪ್ರೀಂ ಕೋರ್ಟ್ ಆದೇಶದಂತೆ ದೇಶಾದ್ಯಂತ ಸ್ಥಳೀಯ ಸಂಸ್ಥೆಗಳು ಕಸ ವಿಲೇವಾರಿ ಸೇರಿದಂತೆ ಸ್ವಚ್ಚತೆಯ ಬಗ್ಗೆ ಕಟ್ಟುನಿಟ್ಟಿನ ಕ್ರಮ ವಹಿಸಬೇಕಾಗಿದೆ, ಪ್ರತಿ ಮನೆಯಲ್ಲಿ ೪ ಪ್ರತ್ಯೇಕ ಕಸದ ಬುಟ್ಟಿಗಳನ್ನಿಟ್ಟು, ಕಸ ವಿಂಗಡಣೆ ಮಾಡಿ ಗಂಟೆ ಗಾಡಿಗೆ ನೀಡಬೇಕೆಂದು ಹೇಳಿದರು.
ನಗರದಲ್ಲಿ ಸ್ವಚ್ಚತೆ ಕಾಪಾಡದ ವಾಣಿಜ್ಯ ಕಟ್ಟಡಗಳು, ಹಾಸ್ಟೆಲ್, ಕಲ್ಯಾಣ ಮಂಟಪಗಳು, ಸಮುದಾಯ ಭವನಗಳ ವಿರುದ್ಧ ಕ್ರಮ ಕೈಗೊಂಡು ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದು, ಸಂಬಂಧಪಟ್ಟ ಮಾಲೀಕರು ಸೂಕ್ತ ಕ್ರಮ ವಹಿಸಬೇಕೆಂದು ವಿನಂತಿಸಿದರು.
ಪರಿಸರ ನಿಯಂತ್ರಣಾಧಿಕಾರಿ ಡಾ.ಕೆ.ಎಂ.ರಾಜು ಮಾತನಾಡಿ ಪರಿಸರ ದಿನಾಚರಣೆ ಅಂಗವಾಗಿ ಪರಿಸರ ಮಾಲಿನ್ಯ ಇಲಾಖೆ ವತಿಯಿಂದ ವಿವಿಧ ಕಾರ್ಯಕ್ರಮಗಳನ್ನು ಹಾಕಿಕೊಳ್ಳಲಾಗಿದೆ, ಸಂತೆ ಮೈದಾನ ಸ್ವಚ್ಚತೆ, ಮಲ್ಲಂದೂರಿನ ಸರ್ಕಾರಿ ಫೌಡ ಶಾಲೆಯಲ್ಲಿ ಸುಮಾರು 100 ಸಸಿ ನೆಡುವ ಕಾರ್ಯಕ್ರಮ, ಜೂನ್ 3ರಂದು ಬಿಎಡ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಚಿತ್ರಕಲೆ, ಕ್ವಿಜ್, ಪ್ರಬಂಧ ಸ್ಪರ್ಧೆ ಕಾರ್ಯಕ್ರಮ, ಸಂತ ಜೋಸೆಫರ ಬಾಲಕರ ಪ್ರೌಢಶಾಲೆಯಲ್ಲಿ ಜೂ.೫ರಂದು ವಿಶ್ವ ಪರಿಸರ ದಿನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.