ಆರೋಗ್ಯ ರಕ್ಷಣೆಗೆ ಪ್ರತಿಯೊಬ್ಬಕೂ ಆದ್ಯತೆ ನೀಡಿ-ಬಳಗಾನೂರ

KannadaprabhaNewsNetwork | Published : Mar 30, 2025 3:04 AM

ಸಾರಾಂಶ

5. ಜೀವನದಲ್ಲಿ ದೊಡ್ಡ ಸಂಪತ್ತಾಗಿರುವ ಆರೋಗ್ಯ ರಕ್ಷಣೆಗೆ ಪ್ರತಿಯೊಬ್ಬರೂ ಆದ್ಯತೆ ನೀಡಬೇಕಾಗಿದ್ದು, ಆರೋಗ್ಯ ತಪಾಸಣಾ ಶಿಬಿರಗಳ ಸದ್ಬಳಕೆಗೆ ಎಲ್ಲರೂ ಮುಂದಾಗಬೇಕು ಎಂದು ಪುರಸಭೆ ಪ್ರಭಾರಿ ಮುಖ್ಯಾಧಿಕಾರಿ ಬಸವರಾಜ ಬಳಗಾನೂರ ಹೇಳಿದರು.

ಗಜೇಂದ್ರಗಡ:ಜೀವನದಲ್ಲಿ ದೊಡ್ಡ ಸಂಪತ್ತಾಗಿರುವ ಆರೋಗ್ಯ ರಕ್ಷಣೆಗೆ ಪ್ರತಿಯೊಬ್ಬರೂ ಆದ್ಯತೆ ನೀಡಬೇಕಾಗಿದ್ದು, ಆರೋಗ್ಯ ತಪಾಸಣಾ ಶಿಬಿರಗಳ ಸದ್ಬಳಕೆಗೆ ಎಲ್ಲರೂ ಮುಂದಾಗಬೇಕು ಎಂದು ಪುರಸಭೆ ಪ್ರಭಾರಿ ಮುಖ್ಯಾಧಿಕಾರಿ ಬಸವರಾಜ ಬಳಗಾನೂರ ಹೇಳಿದರು.

ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ನಗರಾಭಿವೃದ್ಧಿ ಕೋಶ, ಜಿಲ್ಲಾಡಳಿತ ಹಾಗೂ ಪುರಸಭೆ ಸಂಯುಕ್ತಾಶ್ರಯದಲ್ಲಿ ಇಲ್ಲಿನ ಆರೋಗ್ಯ ಸಮುದಾಯ ಕೇಂದ್ರದಲ್ಲಿ ಪ್ರಧಾನಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮ ನಿರ್ಬರ್ ನಿಧಿ, ಪಿಎಂ ಸ್ವನಿಧಿಯ ಸಮೃದ್ಧಿ ಯೋಜನೆ ಉತ್ಸವ ಕಾರ್ಯಕ್ರಮ ಅಂಗವಾಗಿ ನಡೆದ ಬೀದಿ ಬದಿ ವ್ಯಾಪಾರಿಗಳ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದರು.

ಬೀದಿ ಬದಿ ವ್ಯಾಪಾರಿಗಳ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರಗಳು ಅನೇಕ ಯೋಜನೆ ಜಾರಿಗೆ ತಂದಿದ್ದು, ಯೋಜನೆಗಳ ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸದೃಢವಾಗುವುದರ ಜತೆಗೆ ಆರೋಗ್ಯ ತಪಾಸಣಾ ಕಾರ್ಯಕ್ರಮಗಳಲ್ಲಿ ಆರೋಗ್ಯ ತಪಾಸಣೆ ಮೂಲಕ ಆರೋಗ್ಯ ಕಾಪಾಡಿಕೊಳ್ಳಲು ಬೀದಿ ಬದಿ ವ್ಯಾಪಾರಸ್ಥರು ಮುಂದಾಗಬೇಕು ಎಂದರು.

ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಕೆ.ಎ. ಹಾದಿಮನಿ ಮಾತನಾಡಿ, ಆಧುನಿಕ ಜೀವನ ಶೈಲಿಯ ಪದ್ಧತಿಯಿಂದ ಬಹುಪಾಲು ಜನರಲ್ಲಿ ಬಿಪಿ, ಶುಗರ್, ಹೃದ್ರೋಗ ಹಾಗೂ ಕಿಡ್ನಿ ಕಾಯಿಲೆಗಳು ಸಾಮಾನ್ಯವಾಗಿ ವರದಿ ಆಗುತ್ತಿವೆ. ಬಡ ಜನರು ಆರ್ಥಿಕವಾಗಿ ಸದೃಢರಾಗಲು ನೀರು, ಊಟ ಬಿಟ್ಟು ಬಿಡುವಿಲ್ಲದ ವ್ಯಾಪಾರ, ವಹಿವಾಟಿನಲ್ಲಿ ತೊಡಗಿಸಿಕೊಂಡು ಹಣಗಳಿಕೆ ಮಾಡುತ್ತಿದ್ದಾರೆ. ಆದರೆ ಆರೋಗ್ಯದ ಕಡೆ ಗಮನ ನೀಡುತ್ತಿಲ್ಲ. ಹೀಗಾಗಿ ಪ್ರತಿಯೊಬ್ಬರು ಸಹ ಆರೋಗ್ಯವೇ ದೇವರು ಎನ್ನುವ ಮನಸ್ಥಿತಿಗೆ ಬರಬೇಕಿದೆ. ಆರೋಗ್ಯ ಸರಿಯಾಗಿದ್ದರೆ ಎಲ್ಲವು ಸರಿಯಾಗಿ ನಡೆಯುತ್ತದೆ ಎಂದರು.

ಈ ವೇಳೆ ಆರೋಗ್ಯ ತಪಾಸಣಾ ಶಿಬಿರದಲ್ಲಿ ೧೫೦ಕ್ಕೂ ಅಧಿಕ ಬೀದಿ ಬದಿ ವ್ಯಾಪಾರಸ್ಥರು ಆರೋಗ್ಯ ತಪಾಸಣೆ ಮಾಡಿಸಿಕೊಂಡರು.

ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಅನೀಲ ತೋಟದ, ಸಮುದಾಯ ಅಧಿಕಾರಿ ಬಿ.ಮಲ್ಲಿಕಾರ್ಜುನಗೌಡ, ಡಾ. ದಾನಮ್ಮ ಹುಲಕುಂದ, ಡಾ.ಶ್ವೇತಾ ಹೊಸಳ್ಳಿ, ಆರೋಗ್ಯ ನಿರೀಕ್ಷಣಾಧಿಕಾರಿ ಮನೋಹರ ಕಣ್ಣಿ, ಉಮಾ ಚವ್ಹಾಣ, ವೀರಣ್ಣ ಚಿತ್ರಗಾರ, ಸುಕನ್ಯಾ ರಣದೇವ ಸೇರಿದಂತೆ ಇತರರು ಇದ್ದರು.

Share this article