ಪ್ರತಿಯೊಬ್ಬರೂ ಹೆತ್ತತಾಯಿಯ ಋಣ ತೀರಿಸಿ: ಡಾ. ಅನ್ನದಾನೀಶ್ವರ ಶ್ರೀ

KannadaprabhaNewsNetwork |  
Published : Oct 06, 2025, 01:01 AM IST
ಕಾರ್ಯಕ್ರಮವನ್ನು ಮಾಜಿ ಸಚಿವ ಎಸ್.ಎಸ್. ಪಾಟೀಲ ಉದ್ಘಾಟಿಸಿದರು. | Kannada Prabha

ಸಾರಾಂಶ

ಮಾಜಿ ಸಚಿವ ಎಸ್.ಎಸ್. ಪಾಟೀಲ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳ ಸಾಧನೆಯ ಕೀರ್ತಿಗೆ ಮೊದಲು ಹೆತ್ತ ತಾಯಿ ನಂತರ ಕಲಿಸಿದ ಪ್ರಾಥಮಿಕ ಶಾಲೆ ಶಿಕ್ಷಕರು ಕಾರಣವಾಗುತ್ತಾರೆ. ದೇಶದ ಭವಿಷ್ಯ ಶಾಲಾ ತರಗತಿ ಕೋಣೆಗಳಲ್ಲಿ ಇರುತ್ತದೆ ಎಂಬುದು ಸುಳ್ಳಲ್ಲ ಎಂದರು.

ಮುಂಡರಗಿ: ಹೊತ್ತು, ಹೆತ್ತು, ಸಾಕಿ, ಸಲುಹಿದ ತಾಯಿಯ ಋಣವನ್ನು ತೀರಿಸುವುದು ಬಹುಮುಖ್ಯವಾಗಿದೆ. ತಾಯಿಯನ್ನು ಸ್ಮರಣೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಡಾ. ಅನ್ನದಾನೀಶ್ವರ ಸ್ವಾಮೀಜಿ ತಿಳಿಸಿದರು.

ಭಾನುವಾರ ಪಟ್ಟಣದ ಜೆ.ಟಿ. ಕೋಟೆ ಪ್ರೌಢಶಾಲೆಯಲ್ಲಿ ಲಿಂ. ಬಸಮ್ಮ ಶರಣಪ್ಪ ಮುರಡಿ ಅವರ ಸ್ಮರಣಾರ್ಥ ಅವ್ವ ಸಮಾಜಸೇವಾ ಹಾಗೂ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ತಾಯಿ ಕುರಿತು ವಿಶೇಷ ಉಪನ್ಯಾಸ, ಎಸ್ಎಸ್ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಸಾಧಕರಿಗೆ ಸನ್ಮಾನ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದರು. ಮಾಜಿ ಸಚಿವ ಎಸ್.ಎಸ್. ಪಾಟೀಲ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳ ಸಾಧನೆಯ ಕೀರ್ತಿಗೆ ಮೊದಲು ಹೆತ್ತ ತಾಯಿ ನಂತರ ಕಲಿಸಿದ ಪ್ರಾಥಮಿಕ ಶಾಲೆ ಶಿಕ್ಷಕರು ಕಾರಣವಾಗುತ್ತಾರೆ. ದೇಶದ ಭವಿಷ್ಯ ಶಾಲಾ ತರಗತಿ ಕೋಣೆಗಳಲ್ಲಿ ಇರುತ್ತದೆ ಎಂಬುದು ಸುಳ್ಳಲ್ಲ ಎಂದರು.

ಶಿಕ್ಷಕ, ಸಾಹಿತಿ ಡಾ. ನಿಂಗು‌ ಸೊಲಗಿ ಮಾತನಾಡಿ, ತಾಯಿ‌ ಎಂದರೆ ನಮಗೆಲ್ಲರಿಗೂ ದೇವ ಸ್ವರೂಪಿ. ಕಣ್ಣಿಗೆ ಕಾಣುವ ದೇವರೆಂದರೆ ಅದು ತಾಯಿ ಮಾತ್ರ. ಪ್ರತಿಕ್ಷಣ ಪ್ರೀತಿ ಮತ್ತು ಗೌರವವನ್ನು ತೋರಿಸಿ ಬೆಳೆಸುವವರು ಯಾರಾದರೂ ಇದ್ದರೆ ಅದು ತಾಯಿ ಮಾತ್ರ ಎಂದರು.

ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ, ಧಾರವಾಡ ಕೆಎಂಎಫ್ ನಿರ್ದೇಶಕ ಲಿಂಗರಾಜಗೌಡ ಪಾಟೀಲ ಮಾತನಾಡಿದರು. ಪ್ರತಿಷ್ಠಾನದ ಅಧ್ಯಕ್ಷ ನಾಗರಾಜ ಮುರುಡಿ ಅಧ್ಯಕ್ಷತೆ ವಹಿಸಿದ್ದರು. ವೈ.ಎನ್. ಗೌಡರ, ಸಿಂಗಟಾಲೂರು ವೀರಭದ್ರೇಶ್ವರ ದೇವಸ್ಥಾನ ಟ್ರಸ್ಟ್ ಕಮಿಟಿ ಅಧ್ಯಕ್ಷ ಕರಬಸಪ್ಪ ಹಂಚಿನಾಳ, ರವೀಂದ್ರ ಉಪ್ಪಿನಬೆಟಗೇರಿ, ದೇವಪ್ಪ ಕಂಬಳಿ, ಹೇಮಗಿರೀಶ ಹಾವಿನಾಳ, ಎಸ್.ಡಿ. ಮಕಾಂದಾರ, ರವೀಂದ್ರ ಉಪ್ಪಿನಬೆಟಗೇರಿ, ಎಸ್.ವಿ. ಪಾಟೀಲ, ಬಿ.ವಿ. ಮುದ್ದಿ ಪಾಲ್ಗೊಂಡಿದ್ದರು.7ರಂದು ಮಹರ್ಷಿ ವಾಲ್ಮೀಕಿ ಜಯಂತಿ

ನರಗುಂದ: ಪಟ್ಟಣದ ಪುರಸಭೆ ಆವರಣದಲ್ಲಿ ಅ. 7ರಂದು ಮಧ್ಯಾಹ್ನ 12 ಗಂಟೆಗೆ ಕಂದಾಯ ಇಲಾಖೆ, ತಾಪಂ, ಪುರಸಭೆ, ಸಮಾಜ ಕಲ್ಯಾಣ ಇಲಾಖೆ, ತಾಲೂಕು ವಾಲ್ಮೀಕಿ ಸಂಘದ ಆಶ್ರಯದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಜರುಗಲಿದೆ. ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಉಪಸ್ಥಿತರಿರುವರು.ಶಾಸಕ ಸಿ.ಸಿ. ಪಾಟೀಲ ಅಧ್ಯಕ್ಷತೆ ವಹಿಸುವರು. ಸರ್ಕಾರಿ ಮುಖ್ಯ ಸಚೇತಕ, ಶಾಸಕ ಸಲೀಮ್‌ ಅಹ್ಮದ್‌, ಬಾಗಲಕೋಟೆ ಲೋಕಸಭೆ ಸದಸ್ಯ ಪಿ.ಸಿ. ಗದ್ದಿಗೌಡರ, ವಿಧಾನಪರಿಷತ್‌ ಸದಸ್ಯ ಎಸ್.ವಿ. ಸಂಕನೂರ, ಪ್ರದೀಪ ಶೆಟ್ಟರ, ಪುರಸಭೆ ಅಧ್ಯಕ್ಷೆ ನೀಲಮ್ಮ ಪವಾಡೆಪ್ಪ ವಡ್ಡಿಗೇರಿ, ಉಪಾಧ್ಯಕ್ಷ ಚಂದ್ರಗೌಡ ಪಾಟೀಲ ಹಾಗೂ ತಹಸೀಲ್ದಾರ್‌ ಶ್ರೀಶೈಲ ತಳವಾರ, ತಾಪಂ ಅಧಿಕಾರಿ ಎಸ್.ಕೆ. ಇನಾಮದಾರ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಬಿ.ಎಂ. ಬಡಿಗೇರ, ಪುರಸಭೆ ಅಧಿಕಾರಿ ಸಂಗಮೇಶ ಬ್ಯಾಳಿ, ಸಿಪಿಐ ಮಂಜುನಾಥ ನಡುವಿನಮನಿ, ತಾಲೂಕು ವಾಲ್ಮೀಕಿ ಸಂಘದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಹಸೀಲ್ದಾರ್‌ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ