-ವಿಶ್ವೇಶ್ವರಯ್ಯ ವಿದ್ಯಾಸಂಸ್ಥೆಯಲ್ಲಿ ರೈತ ದಿನಾಚರಣೆ ಕಾರ್ಯಕ್ರಮ
ಕನ್ನಡಪ್ರಭ ವಾರ್ತೆ ಭದ್ರಾವತಿ
ರೈತರು ಬೆಳೆ ಬೆಳೆಯುವುದರಿಂದಲೇ ಮನುಜ ಕುಲ ಶಾಂತಿಯಿಂದ ಜೀವನ ನಡೆಸಲು ಸಾಧ್ಯ ಎಂದು ನಗರದ ಹೊಸ ಸೇತುವೆ ರಸ್ತೆ, ಸಿದ್ದಾರೂಢ ನಗರದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ವಿಶ್ವೇಶ್ವರಯ್ಯ ವಿದ್ಯಾಸಂಸ್ಥೆ ಅಧ್ಯಕ್ಷ ಬಿ. ಸಿದ್ದಬಸಪ್ಪ ಹೇಳಿದರು.ಅವರು ವಿದ್ಯಾಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ ರೈತ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಅನ್ನ ನೀಡುವ ರೈತರನ್ನು ಪ್ರತಿಯೊಬ್ಬರು ಗೌರವಿಸುವುದು ಕರ್ತವ್ಯವಾಗಿದೆ ಎಂದರು.
ಗೋಪಾಲ್ ಅವರು ಕೃಷಿ ಚಟುವಟಿಕೆಯ ನೈಜ ಚಿತ್ರಣ ತೆರೆದಿರುವ ಮೂಲಕ ರೈತರು ಎದುರಿಸುವ ಸಂಕಷ್ಟಗಳು, ಸವಾಲುಗಳನ್ನು ವಿವರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ಬಿ. ಎಲ್.ರಂಗಸ್ವಾಮಿ ವಹಿಸಿದ್ದರು.
ನೇತ್ರಾವತಿ ಸ್ವಾಗತಿಸಿ, ರೇವತಿ ಅತಿಥಿಗಳನ್ನು ಪರಿಚಯಿಸಿದರು. ರೇಣುಕಪ್ಪ ನಿರೂಪಿಸಿದರು, ಅಲಿಮಿಯ ವಂದಿಸಿದರು.
ಫೋಟೊ: ಭದ್ರಾವತಿ ನಗರದ ಹೊಸ ಸೇತುವೆ ರಸ್ತೆ, ಸಿದ್ದಾರೂಢ ನಗರದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ವಿಶ್ವೇಶ್ವರಯ್ಯ ವಿದ್ಯಾಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ ರೈತ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಗತಿಪರ ರೈತ ಎ. ಪ್ರಕಾಶ್, ಅರಳಿಹಳ್ಳಿ ಹಾಗೂ ಜಿ. ಗೋಪಾಲ್ ತಳ್ಳಿಕಟ್ಟೆ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.