ಹೊಸಕೋಟೆ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರೂ ಕೂಡ ಕಾನೂನನ್ನು ಗೌರವಿಸುವ ಮೂಲಕ ಸಮಾಜದ ಅಭಿವೃದ್ಧಿಗೆ ಹಾಗೂ ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಶ್ರಮಿಸಬೇಕು ಎಂದು ಹೊಸಕೋಟೆ ಜೆಎಂಎಫ್‌ಸಿ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶ ಬಸವರಾಜ ಜಿ ಸನದಿ ತಿಳಿಸಿದರು.
ಹೊಸಕೋಟೆ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರೂ ಕೂಡ ಕಾನೂನನ್ನು ಗೌರವಿಸುವ ಮೂಲಕ ಸಮಾಜದ ಅಭಿವೃದ್ಧಿಗೆ ಹಾಗೂ ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಶ್ರಮಿಸಬೇಕು ಎಂದು ಹೊಸಕೋಟೆ ಜೆಎಂಎಫ್‌ಸಿ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶ ಬಸವರಾಜ ಜಿ ಸನದಿ ತಿಳಿಸಿದರು.
ನಗರದ ಅದ್ವಿತ್ಯ ಪದವಿ ಪೂರ್ವ ಕಾಲೇಜಿನಲ್ಲಿ ವಕೀಲರ ಸಂಘ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಪ್ರತಿಯೊಬ್ಬ ಮನುಷ್ಯನಿಗೂ ಬದುಕುವ ಹಕ್ಕನ್ನು ಕೊಡಿಸುವ ಉದ್ದೇಶದಿಂದ ಪ್ರಜಾಪ್ರಭುತ್ವವ ವ್ಯವಸ್ಥೆಯನ್ನು ಜಾರಿ ಮಾಡಲಾಗಿದೆ. ಆದರೆ ದೇಶದಲ್ಲಿ ಜೀವಿಸುವ ಪ್ರತಿಯೊಬ್ಬರೂ ಕಾನೂನನ್ನು ಗೌರವಿಸಬೇಕು. ಸಮಾಜದ ಸ್ವಾಸ್ಥ್ಯ ಕಾಪಾಡುವ ರೀತಿ ಬದುಕಬೇಕು. ವಿದ್ಯಾರ್ಥಿಗಳು ಕಾಲೇಜು ಹಂತದಿಂದಲೇ ಕಾನೂನನ್ನ ಅರಿತುಕೊಳ್ಳಬೇಕು. ಸರ್ವೋಚ್ಚ ನ್ಯಾಯಾಲಯ ಹಾಗೂ ಉಚ್ಚನ್ಯಾಯಾಲಯದ ಆದೇಶದನ್ವಯ ಶಾಲಾ ಕಾಲೇಜುಗಳಲ್ಲಿ ಕಾನೂನು ಅರಿವು ಶಿಬಿರಗಳನ್ನು ಆಯೋಜಿಸುತ್ತಿದ್ದೇವೆ ಎಂದರು.
ವಕೀಲರ ಸಂಘದ ಅಧ್ಯಕ್ಷ ವೆಂಕಟಸ್ವಾಮಿ, ಜೆಎಂಎಫ್ ನ್ಯಾಯಾಲಯದ ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಚೈತ್ರ ವಿ.ಕುಲಕರ್ಣಿ, ಸಂಪನ್ಮೂಲ ವ್ಯಕ್ತಿ ಎಂ.ನಾಗರಾಜ್, ಪ್ರಾಂಶುಪಾಲ ಮೋಹನ್, ಕಾರ್ಯದರ್ಶಿ ಕೆಂಪರಾಜ್, ಸಹಾಯಕ ಸರ್ಕಾರಿ ಅಭಿಯೋಜಕ ಅಶೋಕ್ ಕುಮಾರ್, ವಕೀಲರ ಸಂಘದ ಉಪಾಧ್ಯಕ್ಷ ಕೆ.ನಾಗರಾಜ್, ಪ್ರ.ಕಾರ್ಯದರ್ಶಿ ನವೀನ್ ಕುಮಾರ್, ಜಂಟಿ ಕಾರ್ಯದರ್ಶಿ ಮುನಿರಾಜ್, ಖಜಾಂಚಿ ರವಿಕುಮಾರ್ ಹಾಜರಿದ್ದರು.
ಫೋಟೋ : 17 ಹೆಚ್‌ಎಸ್‌ಕೆ 5
ಹೊಸಕೋಟೆಯ ಅದ್ವಿತ್ಯ ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ಶಿಬಿರವನ್ನು ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶ ಬಸವರಾಜ ಜಿ ಸನದಿ, ವಕೀಲರ ಸಂಘದ ಅಧ್ಯಕ್ಷ ವೆಂಕಟಸ್ವಾಮಿ ಉದ್ಘಾಟಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.