ಕನ್ನಡಪ್ರಭ ವಾರ್ತೆ ಹನೂರು
ಕನ್ನಡ ರಾಜ್ಯೋತ್ಸವವನ್ನು ಪ್ರತಿಯೊಬ್ಬರು ಆಚರಿಸುವ ಮೂಲಕ ಕನ್ನಡ ನೆಲ ಜಲ ಭಾಷೆಗೆ ಒತ್ತು ನೀಡಬೇಕು. ಪ್ರತಿಯೊಬ್ಬರೂ ಕನ್ನಡತನವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಮುಂದಾಗಬೇಕು ಎಂದು ಮಲೆ ಮಹದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಇ ರಘು ಹೇಳಿದರು.ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಕನ್ನಡಾಂಬೆಗೆ ಪುಷ್ಪ ನಮನ ಸಲ್ಲಿಸಿ ನಂತರ ಮಾತನಾಡಿದರು.
ನವಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ರಾಜ್ಯದ ಎಲ್ಲೆಡೆ ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ. ಹಬ್ಬದಂತೆ ಆಚರಣೆ ಮಾಡುವ ಜೊತೆಗೆ ಪ್ರತಿಯೊಬ್ಬರೂ ಯುವ ಪೀಳಿಗೆಗೆ ಕನ್ನಡ ನಾಡಿನ ಇತಿಹಾಸ ಸಂಸ್ಕೃತ ಕಲೆ, ಭಾಷೆ ಬಗ್ಗೆ ಅರಿವು ಮೂಡಿಸುವುದು ನಮ್ಮ ಕರ್ತವ್ಯವಾಗಿದೆ. ಕನ್ನಡಾಂಬೆಯ ಮಕ್ಕಳಾದ ನಾವು ಕರ್ನಾಟಕದ ಹಿರಿಮೆಯನ್ನು ಎತ್ತಿ ಮೆರೆಯುತ್ತೇವೆ. ಕನ್ನಡ ನಾಡು ಹಲವು ವೈವಿಧ್ಯಮಗಳ ನಾಡಾಗಿದ್ದು ಇಲ್ಲಿನ ಪ್ರತಿಯೊಬ್ಬರೂ ರಾಷ್ಟ್ರ ಅಭಿಮಾನದ ಜತೆಗೆ ಕನ್ನಡ ನಾಡು ನುಡಿ ಜಲ ಭಾಷೆ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಮುಂದಾಗಬೇಕು ಎಂದು ಹೇಳಿದರು.ಅದ್ಭುತ ಕನ್ನಡ ನಾಡು ಉದಯವಾಗಲು ಶ್ರಮಿಸಿದ ಪ್ರತಿಯೊಬ್ಬರ ಶ್ರಮದಾನದಿಂದ ಕನ್ನಡ ನಾಡು ಏಕೀಕರಣ ಮಾಡುವ ಮೂಲಕ ಹಲವು ಹೋರಾಟಗಾರರು ಕನ್ನಡ ಭಾಷೆ ಉಳಿವಿಗಾಗಿ ಶ್ರಮಿಸಿದ ಪ್ರತಿಯೊಬ್ಬರಿಗೂ ಧನ್ಯವಾದ ತಿಳಿಸಬೇಕು. ಜತೆಗೆ ನವೆಂಬರ್ ಒಂದರಂದು ಕನ್ನಡ ರಾಜ್ಯೋತ್ಸವ ಆಚರಿಸುವ ಬದಲು ವರ್ಷವಿಡೀ ಕನ್ನಡ ಬಗ್ಗೆ ಪ್ರತಿಯೊಬ್ಬರು ಭಾಷಾಭಿಮಾನ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.
ಉಪ ಕಾರ್ಯದರ್ಶಿ ಚಂದ್ರಶೇಖರ್, ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಿಬ್ಬಂದಿ ಜನಾರ್ಧನ್, ಸರಗೂರು ಮಹದೇವಸ್ವಾಮಿ, ಇತರರು ಇದ್ದರು.