ಕನ್ನಡಪ್ರಭ ವಾರ್ತೆ ರಾಮನಗರ
ಕಾನೂನಿನ ನೆರವು ಕೋರಿ ಬರುವವರಿಗೆ, ಸಕಾಲದಲ್ಲಿ ಚಾಲ್ತಿಯಲ್ಲಿರುವ ಪ್ರಕರಣಗಳಿಗೆ ಕಾನೂನಿನ ನೆರವನ್ನು ನೀಡಬೇಕು. 1987ರಲ್ಲಿ ರಚನೆಯಾದ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಉಚಿತ ಕಾನೂನು ನೆರವು, ವಿದ್ಯಾ ಪ್ರಸಾರ ಮತ್ತು ಜನತಾ ನ್ಯಾಯಾಲಯ ಎಂಬ ಮೂರು ಅಂಗಗಳಿವೆ ಎಂದು ತಿಳಿಸಿದರು.
ಉಚಿತ ಕಾನೂನು ನೆರವಿನಡಿ, ಮೂರು ಲಕ್ಷಕ್ಕಿಂತ ಕಡಿಮೆ ಆದಾಯವುಳ್ಳ ಜನರಿಗೆ ಉಚಿತ ಕಾನೂನಿನ ನೆರವು ನೀಡಬೇಕು, ವಿದ್ಯಾ ಪ್ರಸಾರದಡಿ ನುರಿತ ವಕೀಲರ ಮೂಲಕ ಎಲ್ಲಾ ರೀತಿಯ ಕಾನೂನಿನ ಕುರಿತು ಪ್ರತಿ ಹಳ್ಳಿಯ ಜನರಿಗೂ ಕಾನೂನಿನ ಅರಿವು ಮೂಡಿಸಬೇಕು ಹಾಗೂ ಜನತಾ ನ್ಯಾಯಾಲಯದ ಮೂಲಕ ಕುಟುಂಬದಲ್ಲಿನ ಸಂಬಂಧಗಳನ್ನು ಗಟ್ಟಿ ಮಾಡಿ ನೆಮ್ಮದಿಯ ಜೀವನವನ್ನು ನಡೆಸಲು ಜನರಿಗೆ ಕಾನೂನಿನ ಜಾಗೃತಿ ಮೂಡಿಸಬೇಕು ಎಂದರು.ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪಿ.ಆರ್.ಸವಿತಾ ಮಾತನಾಡಿ, ಬಡವರು, ನಿರ್ಗತಿಕರು, ದುರ್ಬಲ ವರ್ಗದ ಜನರಿಗೆ ಅನುಕೂಲ ಕಲ್ಪಿಸಿಕೊಡಲು ರಾಷ್ಟ್ರೀಯ ಕಾನೂನನ್ನು ಜಾರಿ ಮಾಡಲಾಯಿತು. ಮಹಿಳೆಯರಿಗೆ, ಮಕ್ಕಳಿಗೆ, ಪರಿಶಿಷ್ಟ ಜಾತಿ - ಪರಿಶಿಷ್ಟ ಪಂಗಡದವರಿಗೆ, ವಿಶೇಷ ಚೇತನರಿಗೆ, ಕಾರ್ಮಿಕ ವರ್ಗದವರಿಗೆ, ಮಾನವ ಕಳ್ಳ ಸಾಕಾಣಿಕೆಗೆ ಒಳಗಾದವರಿಗೆ ಮತ್ತು ಜೈಲಿನಲ್ಲಿರುವ ಆರೋಪಿಗಳಿಗೆ ಮತ್ತು ಮೂರು ಲಕ್ಷಕ್ಕಿಂತ ಕಡಿಮೆ ಆದಾಯವುಳ್ಳ ಜನರಿಗೆ ಉಚಿತ ಕಾನೂನಿನ ನೆರವು ದೊರೆಯಲಿದೆ ಹಾಗೂ ಒಂದು ಗ್ರಾಮವನ್ನು ಗುರುತಿಸಿ ವ್ಯಾಜ್ಯ ಮುಕ್ತ ಗ್ರಾಮವನ್ನಾಗಿ ಮಾಡುವುದು ನಮ್ಮ ಧ್ಯೇಯವಾಗಿದೆ ಎಂದು ಹೇಳಿದರು.
ರಾಮನಗರದ ಎಂ.ಎಚ್. ಸಮೂಹ ಶಿಕ್ಷಣ ಸಂಸ್ಥೆಗಳ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಎಂ.ಎಚ್. ಅಣ್ಣಯ್ಯ ಉದ್ಘಾಟಿಸಿದರು.