ಮೊರಾರ್ಜಿ ವಸತಿ ಶಾಲೆಯಲ್ಲಿ ವಿಶ್ವವಿಕಲಚೇತನರ ದಿನಾಚರಣೆ
ಅತೀಯಾದ ಪ್ಲಾಸ್ಟಿಕ್ ವಸ್ತುಗಳ ಬಳಕೆಯಿಂದ ಪರಿಸರದ ಮೇಲೆ ಅಗಾದ ಪರಿಣಾಮ ಬೀರುತ್ತಿದೆ. ಪ್ಲಾಸ್ಟಿಕ್ ವಸ್ತುಗಳ ಬಳಕೆ ನಿಯಂತ್ರಣ ಅನಿವಾರ್ಯ. ಆದ್ದರಿಂದ ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಪಣ ತೊಡಬೇಕು ಎಂದು ನರಸಿಂಹರಾಜಪುರ ಹಿರಿಯ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ರಘುನಾಥಗೌಡ ಕರೆ ನೀಡಿದರು.
ತಾಲೂಕಿನ ಬೇಗಾರು ಪಂಚಾಯಿತಿ ಬೇಗಾರು ಮೊರಾರ್ಜಿ ವಸತಿ ಶಾಲೆಯಲ್ಲಿ ವಿಶ್ವವಿಕಲಚೇತನರ ದಿನಾಚರಣೆ ಪರಿಸರ ಕಾನೂನು ಸಾಕ್ಷರಥಾ ಕಾರ್ಯಾಗಾರದ ಅಂಗವಾಗಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಪ್ಲಾಸ್ಟಿಕ್ ವಸ್ತುಗಳ ಅತೀಯಾದ ಬಳಕೆಯಿಂದ ಪರಿಸರ ಮಾಲಿನ್ಯ ಉಂಟಾಗುತ್ತಿರುವ ಜೊತೆಗೆ ಜನರ ಆರೋಗ್ಯದ ಮೇಲೂ ಪರಿಣಾಮ ಬೀರುತ್ತಿದೆ. ನಾವು ಪರಿಸರ ಕಾಳಜಿ, ಪರಿಸರ ಪ್ರಜ್ಞೆ ಬೆಳೆಸಿಕೊಳ್ಳಬೇಕು. ಜನರಲ್ಲಿ ಪರಿಸರ ಮಾಲಿನ್ಯದ ಬಗ್ಗೆ ಜಾಗೃತಿ ಮೂಡಿಸಬೇಕು. ಎಲ್ಲೆಂದರಲ್ಲಿ ಪ್ಲಾಸ್ಟಿಕ್ ವಸ್ತುಗಳನ್ನು ಎಸೆಯುವುದು, ತ್ಯಾಜ್ಯಗಳನ್ನು ಎಸೆಯುವುದನ್ನು ನಿಲ್ಲಿಸಬೇಕು.
ವಕೀಲ ಕೆ.ಪ್ರದೀಪ್ ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಬಗ್ಗೆ ವಲಯಾರಣ್ಯಧಿಕಾರಿ ಮಧುಕರ್ ಪರಿಸರ ಕಾನೂನಿನ ಬಗ್ಗೆ, ಆರೋಗ್ಯ ಇಲಾಖೆ. ಬೇಬಿ ಹದಿಹರೆಯದ ಆರೋಗ್ಯ, ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಕುರಿತು ಉಪನ್ಯಾಸ ನೀಡಿದರು. ವಕೀಲರ ಸಂಘದ ಅಧ್ಯಕ್ಷ ಮಹೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಶೃಂಗೇರಿ ತಾಲೂಕಿನ ಬೇಗಾರು ಮೊರಾರ್ಜಿ ವಸತಿ ಶಾಲಾವರಣದಲ್ಲಿ ಆಯೋಜಿಸಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ನ್ಯಾ.ರಘುನಾಥಗೌಡ ಉದ್ಘಾಟಿಸಿದರು.