ಪ್ರತಿಯೊಬ್ಬರು ಪರಿಸರ ಸಂರಕ್ಷಣೆಗೆ ಮುಂದಾಗಿ

KannadaprabhaNewsNetwork |  
Published : Jul 03, 2024, 01:17 AM IST
ಪರಿಸರ ಜಾಗೃತಿ ಹಾಗೂ ಸಸಿ ನೆಡುವ ಕಾರ್ಯಕ್ರಮ | Kannada Prabha

ಸಾರಾಂಶ

ಕೊಪ್ಪ ವಲಯದ ಕೆಸವೆ ಕಾರ್ಯಕ್ಷೇತ್ರದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ನಡೆದ ಪರಿಸರ ಜಾಗೃತಿ ಹಾಗೂ ಸಸಿ ನೆಡುವ ಕಾರ್ಯಕ್ರಮ ನಡೆಯಿತು.

ಪರಿಸರ ಜಾಗೃತಿ ಕಾರ್ಯಕ್ರಮದಲ್ಲಿ ಮೇಲ್ವಿಚಾರಕ ರವಿಕುಮಾರ್‌ ಸಲಹೆಕನ್ನಡಪ್ರಭ ವಾರ್ತೆ ಕೊಪ್ಪ

ಪರಿಸರ ಸಂರಕ್ಷಣೆಯಿಂದ ಜೀವರಾಶಿಗಳು ಉಳಿಯಲಿದ್ದು, ಪ್ರತಿಯೊಬ್ಬರು ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಪ್ಪ ವಲಯದ ಮೇಲ್ವಿಚಾರಕ ರವಿಕುಮಾರ್ ಹೇಳಿದರು.

ಕೊಪ್ಪ ವಲಯದ ಕೆಸವೆ ಕಾರ್ಯಕ್ಷೇತ್ರದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ನಡೆದ ಪರಿಸರ ಜಾಗೃತಿ ಹಾಗೂ ಸಸಿ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರಸ್ತುತ ವರ್ಷದಲ್ಲಿ ಮಲೆನಾಡು ಭಾಗದಲ್ಲೂ ಅತಿಯಾದ ತಾಪಮಾನ ಕಂಡಿದ್ದೇವೆ. ಇದರ ಸಮತೋಲನಕ್ಕಾಗಿ ಪ್ರತಿಯೊಬ್ಬರೂ ಒಂದು ಸಸಿ ನೆಟ್ಟು ಅದನ್ನು ಪೋಷಿಸುವ ನಿರ್ಧಾರ ಕೈಗೊಂಡಾಗ ಪರಿಸರ ಉಳಿಯುತ್ತದೆ ಎಂದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಲಾ ಮುಖ್ಯ ಶಿಕ್ಷಕಿ ರೂಪ, ಶಾಲಾ ಮಕ್ಕಳಿಂದಲೇ ಪರಿಸರ ಜ್ಞಾನ ಬೆಳೆಯಬೇಕೆನ್ನುವ ಸದುದ್ದೇಶದಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ನಮ್ಮ ಶಾಲೆಯಲ್ಲಿ ಕಾರ್ಯಕ್ರಮವನ್ನು ನಡೆಸಿರುವುದು ಸ್ವಾಗತಾರ್ಹ ಎಂದ ಅವರು ಮಕ್ಕಳಿಗೆ ಪರಿಸರ ಜಾಗೃತಿಯ ಕುರಿತು ಮಾಹಿತಿ ನೀಡಿದರು.

ಸಿದ್ಧರಮಠ ಅರಣ್ಯ ಗಸ್ತುಪಾಲಕ ನವೀನ್ ಮಾತನಾಡಿ, ಅರಣ್ಯ ಉಳಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಅರಣ್ಯ ಸಂರಕ್ಷಣೆ, ಪ್ರಾಣಿ ಸಂಕುಲಗಳ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿರುವುದರಿಂದ ಪರಿಸರ ಉಳಿಸಿ ಅರಣ್ಯವನ್ನು ರಕ್ಷಿಸುವ ಕೆಲಸ ಮಾಡಬೇಕು ಎಂದರು.

ಈ ವೇಳೆ ಒಕ್ಕೂಟದ ಅಧ್ಯಕ್ಷೆ ಪ್ರಮೀಳಾ, ವಿಪತ್ತು ಘಟಕದ ಕ್ಯಾಪ್ಟನ್ ದೇವೇಂದ್ರ, ಶೌರ್ಯ ವಿಪತ್ತು ಘಟಕದ ಸದಸ್ಯರು, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರು, ಸದಸ್ಯರು, ಸ್ಥಳೀಯ ಸೇವಾ ಪ್ರತಿನಿಧಿ, ಸದಸ್ಯರು, ಸಹ ಶಿಕ್ಷಕ ರಮೇಶ್ ಹಾಗೂ ಶಾಲಾ ವಿದ್ಯಾರ್ಥಿಗಳು, ಮೆಸ್ಕಾಂ ಯಮನಪ್ಪ ಮುಂತಾದವರಿದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ