- ಡಿಸಿ ಕಚೇರಿ ಸಭಾಂಗಣದಲ್ಲಿ ಕಂದಾಯ ದಿನಾಚರಣೆ- - -
ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಯೊಂದಿಗೆ ಆಚರಿಸಲಾದ ಕಂದಾಯ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ರೈತರ ಜಮೀನಿನ ಪಹಣಿಗೆ ಆಧಾರ್ ಜೋಡಣೆ ಮಾಡುವ ಕೆಲಸ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ನಡೆಯುತ್ತಿದೆ. ಸರ್ಕಾರಿ ಭೂಮಿ ಒತ್ತುವರಿ ಆಗದಂತೆ ತಡೆಗಟ್ಟಲು ಲ್ಯಾಂಡ್ ಬೀಟ್ ತಂತ್ರಾಂಶ ಅಭಿವೃದ್ಧಿಪಡಿಸಲಾಗಿದೆ. ಇವೆರಡರಲ್ಲಿಯೂ ಜಿಲ್ಲೆ ಮೊದಲ ಸ್ಥಾನದಲ್ಲಿದೆ. ಇತರೆ ಇಲಾಖೆಗಳಿಗಿಂತಲೂ ಕಂದಾಯ ಇಲಾಖೆಯ ಜವಾಬ್ದಾರಿ ಹೆಚ್ಚಿದೆ. ರೈತರು ಹಾಗೂ ಸಾರ್ವಜನಿಕರಿಗೆ ಹೆಚ್ಚಿನ ಸೇವೆ ಹಾಗೂ ಸೌಲಭ್ಯಗಳನ್ನು ಕಲ್ಪಿಸುವ ಇಲಾಖೆಯಾಗಿದೆ ಎಂದರು.ಕಂದಾಯ ಇಲಾಖೆ ಆಧುನಿಕತೆಯತ್ತ ದಾಪುಗಾಲಿಟ್ಟಿದ್ದು, ಡಿಜಿಟಲೀಕರಣ ಆಗುತ್ತಿದೆ. ಆದ್ದರಿಂದ ಕಂದಾಯ ಇಲಾಖೆಯಲ್ಲಿನ ಎಲ್ಲ ಸಿಬ್ಬಂದಿ ತಾಂತ್ರಿಕ ನೈಪುಣ್ಯತೆ ಹೆಚ್ಚಿಸಿಕೊಳ್ಳಬೇಕು. ಆ ಮೂಲಕ ಸಾರ್ವಜನಿಕರಿಗೆ ಗುಣಮಟ್ಟ ಹಾಗೂ ತ್ವರಿತವಾಗಿ ಸಮರ್ಪಕ ಸೇವೆ ನೀಡಲು ಶ್ರಮಿಸಬೇಕಿದೆ. ಹೊಸ ಹೊಸ ತಂತ್ರಜ್ಞಾನಗಳನ್ನು ಇಲಾಖೆ ಅಳವಡಿಸಿಕೊಳ್ಳುವ ಮೂಲಕ ಜನರಿಗೆ ಸುಲಭವಾಗಿ ಸೇವೆ ನೀಡುವಲ್ಲಿ ಸಾಕಷ್ಟು ಬದಲಾವಣೆ ಆಗುತ್ತಿದೆ ಎಂದು ತಿಳಿಸಿದರು.
- - -
-1ಕೆಡಿವಿಜಿ43ಃ:ದಾವಣಗೆರೆಯಲ್ಲಿ ಕಂದಾಯ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಕೇಕ್ ಕತ್ತರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.