ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ತಾಲೂಕಿನ ಬೆಳಗೊಳ ಗ್ರಾಮದ ಸ್ವೀಪರ್ ಕಾಲೋನಿಯಲ್ಲಿ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ವತಿಯಿಂದ ಆಯೋಜಿಸಿದ್ದ ಮತದಾನ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.
ಮತದಾನ ನಿಮ್ಮ ಹಕ್ಕು. ಮತದಾನ ಒಂದು ಶಕ್ತಿ. ಹಾಗಾಗಿ ಪ್ರತಿಯೊಬ್ಬ ಪ್ರಜೆಗೂ ಮತದಾನ ಮಾಡಲು ಹಕ್ಕು ನೀಡಿದೆ. ಅಂತಹ ಪವಿತ್ರವಾದ ಹಕ್ಕನ್ನು ಏ.26 ರಂದು ನಡೆಯಲಿರುವ ಲೋಕ ಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಭಾಗವಹಿಸಿ ತಪ್ಪದೇ ಮತ ಚಲಾಯಿಸಿ ಎಂದು ಸಲಹೆ ನೀಡಿದರು.ಈ ವೇಳೆ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಜ್ಯೋತಿ, ಆಶಾ ಕಾರ್ಯಕರ್ತೆ ಜಯಂತಿ, ಸಾವಿತ್ರಿ ಅಂಗನವಾಡಿ ಕಾರ್ಯಕರ್ತೆ ಸುನಿತಾ ಸೇರಿದಂತೆ ಗ್ರಾಮಸ್ಥರು ಇದ್ದರು.ಮತದಾನ ಜಾಗೃತಿ ಅಭಿಯಾನ
ತಾಪಂ ಇಒ ಮಂಜುನಾಥ್ ಮಾತನಾಡಿ, ಯಾವುದೇ ಆಮಿಷಕ್ಕೆ ಮರುಳಾಗದೇ ವಿವೇಚನೆಯಿಂದ ನಮ್ಮಮತ ನಮ್ಮಹಕ್ಕು, ಮತ ಚಲಾಯಿಸುವುದು ನಮ್ಮೆಲ್ಲರ ಹಕ್ಕು. ಮತ ಚಲಾಯಿಸಿ ಪ್ರಜಾಪ್ರಭುತ್ವ ಗೆಲ್ಲಿಸಿ ಎಂದರು.ಭಾರತ್ ಚುನಾವಣಾ ಆಯೋಗ, ಜಿಲ್ಲಾ ಸ್ವೀಪ್ ಹಾಗೂ ತಾಲೂಕು ಸ್ವೀಪ್ ಸಮಿತಿಯಿಂದ ನಡೆದ ಕಾರ್ಯಕ್ರಮಕ್ಕೆ ಪಿಡಿಒ ಎನ್.ಸುಧಾ ಚಾಲನೆ ನೀಡಿದರು. ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕು. ಕಾರ್ಮಿಕರಿಗೆ ವೇತನ ಸಹಿತ ರಜೆ ಇದೆ. ಹಾಗಾಗಿ ಮತ ಹಾಕುವುದನ್ನು ಮರೆಯಬೇಡಿ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಮದ್ದೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ತಾಲೂಕಿನ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ನಡೆಯುತ್ತಿರುವ 2ನೇ ಹಂತದ ತರಬೇತಿ ಶಿಬಿರದ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಪಟ್ಟಣದ ಎಚ್.ಕೆ.ವೀರಣ್ಣಗೌಡ ಕಾಲೇಜಿನಲ್ಲಿ ನಡೆಯುತ್ತಿರುವ ಶಿಬಿರಕ್ಕೆ ಜಿಪಂ ಸಿಇಒ ಶೇಕ್ ತನ್ವೀರ್ ಆಸಿಫ್ ಅವರೊಂದಿಗೆ ಭೇಟಿ ನೀಡಿ ತರಬೇತಿ ಶಿಬಿರದ ವ್ಯವಸ್ಥೆ ಕುರಿತು ಪರಿಶೀಲಿಸಿದರು.