ಕನ್ನಡಪ್ರಭ ವಾರ್ತೆ ಮದ್ದೂರು
ಪಟ್ಟಣದ ತಾಪಂ ಕಚೇರಿ ಆವರಣದಲ್ಲಿ ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಪಂ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯಿಂದ ಆಯೋಜಿಸಿದ್ದ ವಿಶೇಷ ಚೇತನರಿಂದ ಮತದಾನ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದರು.
ಏ.26ರಂದು ಲೋಕಸಭಾ ಚುನಾವಣೆ ನಡೆಯಲಿದೆ. ಚುನಾವಣೆಯಲ್ಲಿ 18 ವರ್ಷ ತುಂಬಿದ ಎಲ್ಲರೂ ನಿರ್ಭೀತಿಯಿಂದ ತಮ್ಮ ಹಕ್ಕು ಚಲಾಯಿಸುವ ಮೂಲಕ ಯೋಗ್ಯ ಅಭ್ಯರ್ಥಿ ಆಯ್ಕೆ ಮಾಡಬೇಕು ಎಂದರು.ಇತ್ತೀಚಿನ ದಿನಗಳಲ್ಲಿ ವಿದ್ಯಾವಂತರೆ ಮತದಾನ ಪ್ರಕ್ರಿಯೆಯಿಂದ ದೂರವಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ನಗರ ಪ್ರದೇಶಗಳಿಗಿಂತ ಗ್ರಾಮೀಣ ಭಾಗದ ಜನರು ಉತ್ಸಾಹದಿಂದ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಇತರರಿಗೆ ಮಾದರಿಯಾಗಿದ್ದಾರೆ. ಇದರಿಂದ ಯೋಗ್ಯ ಅಭ್ಯರ್ಥಿ ಆಯ್ಕೆಗೆ ಸಹಕಾರಿಯಾಗುತ್ತದೆ ಎಂದರು.
ಈ ವೇಳೆ ಪುರಸಭೆ ಮುಖ್ಯ ಅಧಿಕಾರಿ ಕರಿಬಸವಯ್ಯ, ನರೇಗಾ ಯೋಜನೆಯ ಸಹಾಯಕ ನಿರ್ದೇಶಕ ಮಂಜುನಾಥ, ಸಿಬ್ಬಂದಿ ಚಿದಾನಂದ, ಬಸವರಾಜು, ಶಿವಕುಮಾರ್, ಸಂಯೋಜಕ ಅಂಬರಹಳ್ಳಿ ಸ್ವಾಮಿ ಮತ್ತಿತರರು ಪಾಲ್ಗೊಂಡಿದ್ದರು.ಕೇಂದ್ರ ಸರ್ಕಾರದ ಯೋಜನೆಗಳ ಕುರಿತು ಕರಪತ್ರ ಹಂಚಿ ಅರಿವು
ಪಟ್ಟಣದ ವಿನಾಯಕ ಟೈಲರಿಂಗ್ ತರಬೇತಿ ಕೇಂದ್ರಕ್ಕೆ ಮಹಿಳಾ ಕಾರ್ಯಕರ್ತೆಯರೊಂದಿಗೆ ಭೇಟಿಕೊಟ್ಟು ಮಂಗಳ ಮಹಿಳೆಯರಿಗೆ ಕರಪತ್ರಗಳನ್ನು ಸರ್ಕಾರಗಳ ಯೋಜನೆಗಳ ಕುರಿತು ಮಾಹಿತಿ ನೀಡಿದರು.ನಂತರ ಮಾತನಾಡಿದ ಅವರು, ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಬಳಿಕ ದೇಶದ ನಾರಿ ಶಕ್ತಿಯನ್ನು ರಾಷ್ಟ್ರ ಶಕ್ತಿಯನ್ನಾಗಿ ಅಭಿವೃದ್ಧಿ ಪಡಿಸಿದ್ದಾರೆ. ನಾರಿ ಶಕ್ತಿ ವಂದನ ಅಧಿನಿಯಮದಡಿ ಮಹಿಳಾ ಮೀಸಲಾತಿ ಕಲ್ಪಿಸಿದ್ದಾರೆ. ಲಕ್ ಪತಿ ದೀದಿ, ಮಾತೃವಂದನ ಯೋಜನೆ, ಬೇಟಿ ಬಚಾವೋ ಬೇಟಿ ಪಡಾವೋ, ಸುಕನ್ಯಾ ಸಮೃದ್ದಿ ಯೋಜನೆ, ಉಜ್ವಲ್ ಯೋಜನೆ ನೀಡುವ ಮೂಲಕ ಮಹಿಳೆಯರ ಶಕ್ತಿಯನ್ನು ಹೆಚ್ಚಿಸಿದ್ದಾರೆ ಎಂದರು.