ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ನಗರದಲ್ಲಿ ಅವರು ತಮ್ಮ ಗೃಹ ಕಚೇರಿಯಲ್ಲಿ ಅಯೋಜಿಸಿದ್ದ ಬಾಗೇಪಲ್ಲಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಚೇಳೂರು, ಬಾಗೇಪಲ್ಲಿ, ಗುಡಿಬಂಡೆ ತಾಲೂಕಿನ ಹಾಲು ಒಕ್ಕೂಟದ ನಿರ್ದೇಶಕರ ಸ್ಥಾನಗಳ ಚುನಾವಣಾ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಚಿಮುಲ್ ಅಭಿವೃದ್ಧಿಗೆ ಶ್ರಮಿಸಿಚಿಕ್ಕಬಳ್ಳಾಪುರ ಜಿಲ್ಲೆಯಿಂದ 80 ಕಿ.ಮೀ ದೂರದ ಕೋಲಾರದಲ್ಲಿದ್ದ ಕೋಚಿಮುಲ್ ಅನ್ನು ಬೇರ್ಪಡಿಸಿ ಚಿಮುಲ್ ಆಗಿ ಬದಲಾಯಿಸಲು ಹರಸಾಹಪಟ್ಟಿದ್ದೇನೆ. ಚಿಕ್ಕಬಳ್ಳಾಪುರ ಜಿಲ್ಲೆಯ ಹಾಲು ಉತ್ಪಾದಕರ ಹಿತಕ್ಕಾಗಿ ಜಿಲ್ಲಾ ಕೇಂದ್ರ ಸ್ಥಾನದಲ್ಲಿ ಚಿಮುಲ್ ಒಕ್ಕೂಟವನ್ನು ಅಸ್ತಿತ್ವಕ್ಕೆ ತಂದಿದ್ದೇವೆ. ಚಿಮುಲ್ ಆಡಳಿತವನ್ನು ಮತ್ತಷ್ಟು ಅಭಿವೃದ್ಧಿ ಪಥದತ್ತ ಮುನ್ನಡೆಸುವ ಕೆಲಸ ನಾವೆಲ್ಲರೂ ಮಾಡಬೇಕಾಗಿದೆ ಎಂದರು.
ಈ ದಿಸೆಯಲ್ಲಿ ಎನ್‌ಡಿಎ ಮುಖಂಡರು, ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಜಿಲ್ಲೆ ಸೇರಿದಂತೆ ಬಾಗೇಪಲ್ಲಿ, ಚೇಳೂರು, ಗುಡಿಬಂಡೆ ವ್ಯಾಪ್ತಿಯ ಎಲ್ಲಾ ಚಿಮುಲ್ ಕ್ಷೇತ್ರಗಳ ನಿರ್ದೇಶಕ ಸ್ಥಾನಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಶೀಘ್ರದಲ್ಲೇ ಅಭ್ಯರ್ಥಿಗಳ ಪಟ್ಟಿ ಸಿದ್ಧಶೀಘ್ರದಲ್ಲಿ ನಡೆಯುವ ಚಿಮುಲ್ ಚುನಾವಣೆಯಲ್ಲಿ ನಿರ್ದೇಶಕ ಸ್ಥಾನಗಳಿಗೆ ಸ್ಪರ್ಧಿಸುವ ಆಕಾಂಕ್ಷಿ ಅಭ್ಯರ್ಥಿಗಳ ಪಟ್ಟಿಯನ್ನು ನಮ್ಮ ಎನ್‌ಡಿಎ ಪಕ್ಷದ ನಾಯಕರಾದ ಶಿಡ್ಲಘಟ್ಟ ಶಾಸಕ ಬಿ.ಎನ್.ರವಿಕುಮಾರ್, ಚಿಂತಾಮಣಿಯ ಮಾಜಿ ಶಾಸಕ ಜೆ.ಕೆ.ಕೃಷ್ಣಾರೆಡ್ಡಿ, ಬಿಜೆಪಿ ರಾಜ್ಯ ಕಾರ್ಯದರ್ಶಿ ಸಿ.ಮುನಿರಾಜುರವರ ಸಮ್ಮುಖದಲ್ಲಿ ಚರ್ಚಿಸಿ ಪರಿಶೀಲಿಸಿದ ನಂತರ ಅಂತಿಮವಾಗಿ ಅಭ್ಯರ್ಥಿಗಳನ್ನು ಅಯ್ಕೆ ಮಾಡುತ್ತೇವೆ ಎಂದು ಮುಖಂಡರಿಗೆ ಸಲಹೆ ನೀಡಿದರು. ಈ ವೇಳೆ ಜಿ.ಪಂ ಮಾಜಿ ಸದಸ್ಯ ಹರಿನಾಥರೆಡ್ಡಿ ಮಾತನಾಡಿ, ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚಿಮಲ್ ಒಕ್ಕೂಟದ ಮೂರು ನಿರ್ದೇಶಕ ಸ್ಥಾನಗಳಿಗೆ ಫೆಬ್ರವರಿಯಲ್ಲಿ ಚುನಾವಣೆ ನಡೆಯಲಿದೆ. ಜೆಡಿಎಸ್ ಹಾಗೂ ಬಿಜೆಪಿ ಮುಖಂಡರು ಕಾರ್ಯಪ್ರವೃತ್ತರಾಗಿ ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಎನ್‌ಡಿಎ ಅಭ್ಯರ್ಥಿಗಳು ಗೆಲವು ಸಾಧಿಸುವುದು ಸುಲಭ ವಾಗಲಿದೆ ಎಂದು ಹೇಳಿದರು.
ಎನ್‌ಡಿಎ ಬೆಂಬಲಿತರು ಗೆಲ್ಲುವ ವಿಶ್ವಾಸ ಬಾಗೇಪಲ್ಲಿ ಕ್ಷೇತ್ರದಲ್ಲಿ ದಿನದಿಂದ ದಿನಕ್ಕೆ ಎನ್‌ಡಿಎ ಕಡೆ ಮತದಾರರು ಒಲವು ತೋರಿಸುತ್ತಿರುವುದರಿಂದ ಬಹುತೇಕ ಸ್ಥಳೀಯ ಸಂಸ್ಥೆಯ ಚುನಾವಣೆಗಳಲ್ಲಿ ಎನ್‌ಡಿಎ ಬೆಂಬಲಿತ ಅಭ್ಯರ್ಥಿ ಗೆಲವು ಸಾಧಿಸಿ ಅಧಿಕಾರದ ಗದ್ದುಗೇ ಎರುತ್ತಿದ್ದಾರೆ ಎಂದರು.ಈ ಸಂದರ್ಭದಲ್ಲಿ ಗುಡಿಬಂಡೆ ತಾಲೂಕಿನ ಕಾಂಗ್ರೆಸ್ ಮುಖಂಡರಾದ ಪಯ್ಯೂರು ವೇಣು ಗೋಪಾಲರೆಡ್ಡಿ, ಬೀಚಗಾನಹಳ್ಳಿ ವೆಂಕಟನರಸಪ್ಪ ಹಾಗೂ ಬೆಂಬಲಿಗರು ಸಂಸದ ಡಾ.ಕೆ.ಸುಧಾಕರ್ ಮತ್ತು ಜಿ.ಪಂ. ಮಾಜಿ ಸದಸ್ಯ ಹರಿನಾಥರೆಡ್ಡಿ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.ಈ ವೇಳೆ, ಜೆಡಿಎಸ್ ಜಿಲ್ಲಾ ಅಧ್ಯಕ್ಷ ಮುಕ್ತ ಮುನಿಯಪ್ಪ, ಜಿ.ಪಂ ಮಾಜಿ ಅಧ್ಯಕ್ಷ ಪಿ.ಎನ್.ಕೇಶವ ರೆಡ್ಡಿ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷರು ಅಶ್ವತ್ಥರೆಡ್ಡಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಮಂಜುನಾಥರೆಡ್ಡಿ, ಮಾಜಿ ನಿರ್ದೇಶಕ ವಿ.ವೆಂಕಟಶಿವಾರೆಡ್ಡಿ, ಮುಖಂಡರಾದ ಜೆ.ಪಿ.ಚಂದ್ರಶೇಖರರೆಡ್ಡಿ, ಪಿ.ಎ.ನಾಗರಾಜುರೆಡ್ಡಿ, ಬೀಚಗಾನಹಳ್ಳಿ ಅಶ್ವತ್ಥಪ್ಪ, ಗುಜ್ಜೇಪಲ್ಲಿ ಸುಧಾಕರರೆಡ್ಡಿ, ತಟ್ಟಹಳ್ಳಿ ಮದ್ದಿರೆಡ್ಡಿ, ಮಾಸಪಲ್ಲಿ ಶಿವಣ್ಣ, ಬೈರೆಡ್ಡಿ, ನಲ್ಲಪರೆಡ್ಡಿಪಲ್ಲಿ ಶ್ರೀನಿವಾಸರೆಡ್ಡಿ ಮತ್ತಿತರರು ಇದ್ದರು.