ಭ್ರಷ್ಟಾಚಾರ ನಿರ್ಮೂಲನೆಗೆ ಎಲ್ಲರೂ ಶ್ರಮಿಸಿ-ಬಿರಾದಾರ

KannadaprabhaNewsNetwork |  
Published : Nov 07, 2025, 03:00 AM IST
3ಎಚ್‌ವಿಆರ್1 | Kannada Prabha

ಸಾರಾಂಶ

ಭ್ರಷ್ಟಾಚಾರ ಸಮಾಜಕ್ಕೆ ಅಂಟಿಕೊಂಡ ದೊಡ್ಡ ಕಳಂಕ, ಭ್ರಷ್ಟಾಚಾರ ನಿರ್ಮೂಲನೆಗೆ ಎಲ್ಲರೂ ಶ್ರಮಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷ ದೇವೇಂದ್ರಪ್ಪ ಎನ್. ಬಿರಾದಾರ ಹೇಳಿದರು.

ಹಾವೇರಿ: ಭ್ರಷ್ಟಾಚಾರ ಸಮಾಜಕ್ಕೆ ಅಂಟಿಕೊಂಡ ದೊಡ್ಡ ಕಳಂಕ, ಭ್ರಷ್ಟಾಚಾರ ನಿರ್ಮೂಲನೆಗೆ ಎಲ್ಲರೂ ಶ್ರಮಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷ ದೇವೇಂದ್ರಪ್ಪ ಎನ್. ಬಿರಾದಾರ ಹೇಳಿದರು.

ಜಿಪಂ ಸಭಾಂಗದಲ್ಲಿ ಇತ್ತೀಚೆಗೆ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಹಾವೇರಿ ಕರ್ನಾಟಕ ಲೋಕಾಯುಕ್ತ ಘಟಕದ ಸಹಯೋಗದಲ್ಲಿ ಜರುಗಿದ ಭ್ರಷ್ಟಾಚಾರ ವಿರುದ್ಧ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಭ್ರಷ್ಟಾಚಾರ ಎಲ್ಲಿ, ಯಾವಾಗ, ಹೇಗೆ ಆರಂಭವಾಯಿತು? ಇದರ ನಿರ್ಮೂಲನೆ ಸಾಧ್ಯವೇ? ಇದರಲ್ಲಿ ನಮ್ಮ ಕರ್ತವ್ಯ ಹಾಗೂ ಜವಾಬ್ದಾರಿ ಏನು? ಎಂದು ನಾವು ಆತ್ಮಾವಲೋಕನ ಮಾಡಿಕೊಳ್ಳಬೇಕು. ಇಂದು ಜನನ ಪ್ರಮಾಣಪತ್ರದಿಂದ ಹಿಡಿದು ಮರಣ ಪ್ರಮಾಣಪತ್ರ ಪಡೆಯುವರೆಗೂ ಭ್ರಷ್ಟಾಚಾರ ನಡೆಯುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಮಾತನಾಡಿ, ಅಧಿಕಾರಿಗಳು, ಸಿಬ್ಬಂದಿ ತಮ್ಮ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಬೇಕು. ಸಾರ್ವಜನಿಕರಿಗೆ ಸರ್ಕಾರಿ ಸೇವೆಯನ್ನು ಕಾಲಮಿತಿಯೊಳಗೆ ಒದಗಿಸಬೇಕು. ಭ್ರಷ್ಟಾಚಾರ ಮುಕ್ತ ಆಡಳಿತ ನೀಡಬೇಕು ಎಂದು ಕರೆ ನೀಡಿದರು.

ಕರ್ನಾಟಕ ಲೋಕಾಯುಕ್ತ ದಾವಣಗೆರೆ ಪೊಲೀಸ್ ಅಧೀಕ್ಷಕ ಎಂ.ಎಸ್. ಕೌಲಾಪುರೆ ಪ್ರತಿಜ್ಞಾವಿಧಿ ಬೋಧಿಸಿದರು. ಹಾವೇರಿ ಪೊಲೀಸ್ ಉಪ ಅಧೀಕ್ಷಕ ಮಧುಸೂದನ ಸಿ. ಪ್ರಾಸ್ತಾವಿಕವಾಗಿ ಮಾತನಾಡಿದರು.

ಪೊಲೀಸ್ ವರಿಷ್ಠಾಧಿಕಾರಿ ಯಶೋದಾ ವಂಟಗೋಡಿ, ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀಶೈಲಜಾ ಎಚ್.ಎ. ಹಾಗೂ ಜಿಪಂ ಉಪ ಕಾರ್ಯದರ್ಶಿ ಡಾ. ಪುನಿತ್ ಉಪಸ್ಥಿತರಿದ್ದರು.

ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ್ ಎಲ್. ಸ್ವಾಗತಿಸಿದರು. ಪಂಚಾಯತ್ ರಾಜ್‌ನ ಸಹಾಯಕ ನಿರ್ದೇಶಕ ನಾಗರಾಜ ಹಡಗಲಿ ಕಾರ್ಯಕ್ರಮ ನಿರೂಪಿಸಿದರು. ಹಾವೇರಿ ಕರ್ನಾಟಕ ಲೋಕಾಯುಕ್ತ ಪೊಲೀಸ್ ನಿರೀಕ್ಷಕ ವಿಶ್ವನಾಥ ಕಬ್ಬೂರಿ ವಂದಿಸಿದರು.

PREV

Recommended Stories

ಕಸದಿಂದ ಲಕ್ಷ ಮನೆಗೆ ವಿದ್ಯುತ್ ಪೂರೈಕೆ: ಕರಿಗೌಡ
‘ಶಕ್ತಿ’ಯಿಂದ ಮಹಿಳೆಯರ ಸಾರಿಗೆಯ ವ್ಯವಸ್ಥೆಯಲ್ಲಿ ಗಮನಾರ್ಹ ಬದಲಾವಣೆ