ಕನ್ನಡಪ್ರಭ ವಾರ್ತೆ ಚಳ್ಳಕೆರೆ
ಮತದಾನದ ಮೂಲಕ ನಾವು ನಮ್ಮ ನಾಯಕರನ್ನು ಆಯ್ಕೆ ಮಾಡಬೇಕಿದೆ. ಚುನಾವಣೆ ಸಂದರ್ಭದಲ್ಲಿ ಮತದಾನ ಹಕ್ಕು ಪಡೆದ ಪ್ರತಿಯೊಬ್ಬರೂ ಮತದಾನದಿಂದ ದೂರ ಉಳಿಯಬಾರದು. ಪ್ರಜಾತಂತ್ರ ಉಳಿಯಬೇಕಾದರೆ ನಾವೆಲ್ಲರೂ ನಮ್ಮ ಹಕ್ಕನ್ನು ತಪ್ಪದೆ ಚಲಾಯಿಸಬೇಕು. ಮತದಾನ ಸಂದರ್ಭದಲ್ಲಿ ಯಾವುದೇ ಆಮೀಷಕ್ಕೆ ಒಳಗಾಗದೆ ಗೌರವ ಯುತವಾಗಿ ನಮ್ಮ ಹಕ್ಕನ್ನು ಚಲಾಯಿಸಬೇಕು. ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರದ ಮತದಾನ ಶೇ.72ರಷ್ಟು, 2024ರ ಲೋಕಸಭಾ ಚುನಾವಣೆಯಲ್ಲಿ ಶೇ.63ಕ್ಕೆ ಕುಸಿದಿದೆ. ಇದು ಪ್ರಜಾತಂತ್ರ ವ್ಯವಸ್ಥೆಯಲ್ಲಿ ಇದು ಉತ್ತಮ ಬೆಳವಣಿಗೆಯಾಗದು ಎಂದರು.
ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮತದಾರ ಪಟ್ಟಿಪರಿಷ್ಕರಣಾಧಿಕಾರಿ ರೇಷ್ಮ ಹಾನಗಲ್ ಮಾತನಾಡಿ, ಈ ಹಿಂದೆ 21 ವರ್ಷಕ್ಕೆ ಮತದಾನದ ಹಕ್ಕಿದ್ದು, ಜನಸಂಖ್ಯೆ ಬೆಳೆದಂತೆ ಅದನ್ನು ತಿದ್ದುಪಡಿ ಮಾಡಿ 18 ವರ್ಷಕ್ಕೆ ಮತದಾನದ ಹಕ್ಕು ನೀಡಲಾಗುತ್ತಿದೆ. ಕಾರಣ, ಯುವ ಮತದಾರರಿಗೆ ಹೆಚ್ಚು ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಚುನಾವಣಾ ಆಯೋಗ ಈ ಕ್ರಮಕ್ಕೆ ಮುಂದಾಗಿದೆ. ಇತ್ತೀಚಿನ ವರ್ಷಗಳಲ್ಲಿ ರಾಜ್ಯದ ಎಲ್ಲಾ ಕ್ಷೇತ್ರದಲ್ಲಿ ಯುವಕರು ಮತದಾರರ ಹಕ್ಕನ್ನು ಪಡೆಯುವ ನಿಟ್ಟಿನಲ್ಲಿ ಮುನ್ನಡೆ ಸಾಧಿಸಿದ್ದಾರೆ. ಪ್ರಜಾ ಪ್ರಭುತ್ವವನ್ನು ಗಟ್ಟಿಯಾಗಿ ಕಟ್ಟಲು ಯುವಕರ ಅವಶ್ಯಕತೆ ಇದೆ. ಈ ಹಿನ್ನೆಲೆಯಲ್ಲಿ ಆಯೋಗ 18 ವರ್ಷಕ್ಕೆ ಮತದಾರರ ಹಕ್ಕು ನೀಡಿ ಪ್ರಜಾಪ್ರಭುತ್ವದ ಅಡಿಗಲ್ಲನ್ನು ಭದ್ರಪಡಿಸಿದೆ. ಯುವ ಜನಾಂಗ ಈ ನಿಟ್ಟಿನಲ್ಲಿ ಚಿಂತನೆ ನಡೆಸಿ ತಮ್ಮ ಹಕ್ಕು ಪಡೆಯಲು ಮುಂದಾಗಬೇಕು. ಯಾವುದೇ ಸಮಸ್ಯೆ ಇದ್ದಲ್ಲಿ ತಾಲೂಕು ಮಟ್ಟದ ಚುನಾವಣೆ ಶಾಖೆ, ಗ್ರಾಮೀಣ ಭಾಗದಲ್ಲಿ ಬಿಎಲ್‌ಒಗಳನ್ನು ಭೇಟಿ ಮಾಡಬೇಕು. ಯಾವುದೇ ಕಾರಣಕ್ಕೂ ಮತದಾನದ ಹಕ್ಕು ನಿರಾಕರಣೆ ಸಲ್ಲದು ಎಂದರು.ಕಾರ್ಯಕ್ರಮದಲ್ಲಿ ವಕೀಲರ ಸಂಘದ ಉಪಾಧ್ಯಕ್ಷೆ ಬಿ.ಟಿ.ಶ್ಯಾಮಲ ಮಾತನಾಡಿ, ಪ್ರತಿಯೊಂದು ಚುನಾವಣೆಯಲ್ಲೂ ಚುನಾವಣಾ ಆಯೋಗ ಮತದಾರರನ್ನು ಜಾಗೃತಿಗೊಳಿಸುವ ಕಾರ್ಯವನ್ನು ನಿರಂತರವಾಗಿ ಮಾಡುತ್ತಾ ಬಂದಿದೆ. ಸಂವಿಧಾನ ವ್ಯವಸ್ಥೆಯಲ್ಲಿ ಮತದಾನದ ಹಕ್ಕು ತನ್ನದೇಯಾದ ವಿಶೇಷ ಮೌಲ್ಯ ಹೊಂದಿದೆ. ಚುನಾವಣೆಯ ಮತದಾನದ ಮೂಲಕ ನಾವು ಆಯ್ಕೆ ಮಾಡದೇ ಹೋದರೆ ಸಮಾಜದಲ್ಲಿ ಅಜಾಗರೂಕತೆ ಸೃಷ್ಠಿಯಾಗುತ್ತದೆ. ಯಾರ ಮೇಲೂ ಹಿಡಿತವಿರುವುದಿಲ್ಲ. ಕಾನೂನು ಬದ್ಧವಾಗಿ ನಾವೆಲ್ಲರೂ ಮತ ಚಲಾಯಿಸಿದರೆ ಮಾತ್ರ ಪ್ರಜಾತಂತ್ರದ ವ್ಯವಸ್ಥೆಯನ್ನು ಒಪ್ಪಿಕೊಂಡಾಗುತ್ತದೆ. ದಯ ಮಾಡಿ ಮತದಾನದ ಹಕ್ಕನ್ನು ಪಡೆದವರು ಮತ ಚಲಾಯಿಸದೆ ದೂರು ಉಳಿಯುವುದು ಸರಿಯಲ್ಲವೆಂದರು.
ತಹಸೀಲ್ದಾರ್ ರೇಹಾನ್ ಪಾಷ, ತಾಪಂ ಇಒ ಎಚ್.ಶಶಿಧರ, ಸಮಾಜ ಕಲ್ಯಾಣಾಧಿಕಾರಿ ದೇವಲ ನಾಯ್ಕ, ಪರಿಶಿಷ್ಟ ಪಂಗಡಗಳ ಕಲ್ಯಾಣಾಧಿಕಾರಿ ಎಂ.ಟಿ.ಶಿವರಾಜ್, ಬಿಸಿಎಂ ಅಧಿಕಾರಿ ರಮೇಶ್, ಬಿಇಒ ಕೆ.ಎಸ್.ಸುರೇಶ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಟಿ.ವೀರೇಶ್, ವಕೀಲರ ಸಂಘದ ಖಜಾಂಚಿ ಸಿ.ಎಂ.ರಾಜರಾಜೇಶ್ವರಿ, ಕಂದಾಯಾಧಿಕಾರಿ ತಿಪ್ಪೇಸ್ವಾಮಿ, ಗ್ರಾಮಲೆಕ್ಕಿಗ ಪ್ರಕಾಶ್, ಡಿ.ಶ್ರೀನಿವಾಸ್ ಮುಂತಾದವರು ಭಾಗವಹಿಸಿದ್ದರು.