18 ವರ್ಷ ಪೂರೈಸಿದ ಪ್ರತಿಯೊಬ್ಬರು ಮತಪಟ್ಟಿಗೆ ಸೇರಿ

KannadaprabhaNewsNetwork |  
Published : Sep 20, 2026, 03:00 AM IST
ಧಾರವಾಡದ ಅಂಜುಮನ್ ಸಂಸ್ಥೆಯ ಕಾಲೇಜು ಸಭಾಂಗಣದಲ್ಲಿ ಜಿಲ್ಲಾಡಳಿತವು ಆಯೋಜಿಸಿದ್ದ  ಸ್ವೀಪ್  ಸಮಿತಿ ವಿಶೇಷ ಅಭಿಯಾನ | Kannada Prabha

ಸಾರಾಂಶ

ಜಿಲ್ಲೆಯಲ್ಲಿ ವಿಶೇಷ ಮತದಾರರ ನೋಂದಣಿ ಅಭಿಯಾನ ಹಮ್ಮಿಕೊಂಡಿದ್ದು 18 ವರ್ಷ ಪೂರ್ಣಗೊಂಡಿರುವ ಪ್ರತಿಯೊಬ್ಬರು ಮತದಾರರ ಪಟ್ಟಿಗೆ ತಮ್ಮ ಹೆಸರು ಸೇರಿಸುವಂತೆ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಹೇಳಿದರು.

ಧಾರವಾಡ:

ಜಿಲ್ಲೆಯಲ್ಲಿ ವಿಶೇಷ ಮತದಾರರ ನೋಂದಣಿ ಅಭಿಯಾನ ಹಮ್ಮಿಕೊಂಡಿದ್ದು 18 ವರ್ಷ ಪೂರ್ಣಗೊಂಡಿರುವ ಪ್ರತಿಯೊಬ್ಬರು ಮತದಾರರ ಪಟ್ಟಿಗೆ ತಮ್ಮ ಹೆಸರು ಸೇರಿಸುವಂತೆ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಹೇಳಿದರು.

ಶನಿವಾರ ಅಂಜುಮನ್ ಸಂಸ್ಥೆಯ ಕಾಲೇಜು ಸಭಾಂಗಣದಲ್ಲಿ ಆಯೋಜಿಸಿದ್ದ ಸ್ವೀಪ್ ಸಮಿತಿ ವಿಶೇಷ ಅಭಿಯಾನ ಉದ್ಘಾಟಿಸಿದ ಅವರು, ಧಾರವಾಡದ ಶಿಕ್ಷಣ ಸಂಸ್ಥೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳಿರುವ ಹಿನ್ನೆಲೆಯಲ್ಲಿ ಅರ್ಹ ವಿದ್ಯಾರ್ಥಿಗಳು ಮತದಾರರ ಪಟ್ಟಿಗೆ ತಮ್ಮ ಹೆಸರು ನೋಂದಾಯಿಸಿಕೊಳ್ಳುವ ಜತೆಗೆ ತಮ್ಮ ಸುತ್ತಮುತ್ತಲಿನ ಅರ್ಹ ನಾಗರಿಕರಿಗೂ ಈ ಕುರಿತು ಮಾಹಿತಿ ನೀಡಿ, ಹೆಸರು ಸೇರ್ಪಡೆಗೆ ಪ್ರೋತ್ಸಾಹಿಸಬೇಕು ಎಂದರು.

ತಮ್ಮ ಮನೆಯಲ್ಲಿ ಯಾರಾದರೂ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿಲ್ಲದಿದ್ದರೆ, ಅಂತಹವರು ತಕ್ಷಣ ಫಾರ್ಮ್-6 ಮೂಲಕ ಅರ್ಜಿ ಸಲ್ಲಿಸುವಂತೆ ತಿಳಿಸಬೇಕು. ಯುವ ಮತದಾರರಷ್ಟೇ ಅಲ್ಲದೆ, ವಿವಿಧ ಕಾರಣಗಳಿಂದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಿಕೊಳ್ಳದ ಹಿರಿಯರು ಸೇರಿದಂತೆ ಎಲ್ಲ ಅರ್ಹ ನಾಗರಿಕರಿಗೂ ಹೆಸರು ನೋಂದಾಯಿಸಿಕೊಳ್ಳಲು ಪ್ರೇರೇಪಿಸಬೇಕು. ಮತದಾನ ಮಾಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯೂ, ಹಕ್ಕು ಕೂಡ ಆಗಿದೆ ಎಂದರು.

ಜಿಪಂ ಸಿಇಒ ಭುವನೇಶ ಪಾಟೀಲ್ ಮಾತನಾಡಿದರು. ಇದೇ ವೇಳೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಹಾಗೂ ಮತದಾರರ ಜಾಗೃತಿಗಾಗಿ ಸ್ವೀಪ್ ವತಿಯಿಂದ ಸೈಕಲ್ ಮತ್ತು ಬೈಕ್ ರ‍್ಯಾಲಿ ನಡೆಯಿತು. ಅಂಜುಮನ್ ಕಾಲೇಜಿನಿಂದ ಆರಂಭವಾದ ರ‍್ಯಾಲಿ ಸುಭಾಸ್ ರಸ್ತೆ, ಕೆಸಿಸಿ ಬ್ಯಾಂಕ್, ಸ್ವಾಮಿ ವಿವೇಕಾನಂದ ಸರ್ಕಲ್, ಜುಬ್ಲಿ ಸರ್ಕಲ್ ಮೂಲಕ ಸಾಗಿ ಮತ್ತೆ ಅಂಜುಮನ್ ಕಾಲೇಜಿನಲ್ಲಿ ಮುಕ್ತಾಯವಾಯಿತು. ಸ್ವಚ್ಛತಾ ಹಿ ಸೇವಾ ಪ್ರತಿಜ್ಞೆ ಬೋಧಿಸಲಾಯಿತು. ಅಂಜುಮನ್ ಸಂಸ್ಥೆಯ ಪ್ರಾಂಶುಪಾಲ ಎನ್. ಬಿ. ನಾಲತ್ವಾಡ ಸ್ವಾಗತಿಸಿದರು. ಸಯ್ಯದ್ ತಾಜುದ್ದೀನ್ನಿಸಾ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಗಲು ನಿರಂತರ ೭ ಗಂಟೆ ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ನೀಡಿ
ಕ್ವಾರಿ ಮಾಲೀಕರಿಗೆ ನೋಟಿಸ್ ನೀಡಿರುವವರ ಪೈಕಿ ನಾನೂ ಒಬ್ಬ-ಸಚಿವ ಲಮಾಣಿ