ಪೋಷಣ್ ಅಭಿಯಾನ ಕಾರ್ಯಕ್ರಮ ಉದ್ಘಾಟನೆ । ಗುಣಮಟ್ಟದ ಆಹಾರ ಪದಾರ್ಥಗಳ ಬಳಕೆಗೆ ಸಲಹೆ
ಬಳಿಕ ಮಾತನಾಡಿದ ಅವರು, ಬಾಲ್ಯದಿಂದಲೇ ಮಕ್ಕಳಿಗೆ ಪೌಷ್ಟಿಕಯುಕ್ತ ಆಹಾರ ನೀಡಿದಲ್ಲಿ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯ. ಈ ನಿಟ್ಟಿನಲ್ಲಿ ಅಪೌಷ್ಟಿಕತೆ, ರಕ್ತಹೀನತೆ, ನಿವಾರಣೆಗೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದು ಕರೆ ನೀಡಿದರು.
ಅಪೌಷ್ಟಿಕತೆ ನಿವಾರಣೆಗೆಂದು ಪ್ರಧಾನಿ ನರೇಂದ್ರ ಮೋದಿ ಅವರು ಜಾರಿಗೆ ತಂದ ಪ್ರಮುಖ ಕಾರ್ಯಕ್ರಮಗಳ ಪೈಕಿ ಪೋಷಣ್ ಅಭಿಯಾನ ಕೂಡ ಒಂದಾಗಿದೆ. ಹಾಸನ ಜಿಲ್ಲೆಯಲ್ಲಿ ಈ ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದ್ದು, ಅಪೌಷ್ಟಿಕ ಮಕ್ಕಳ ಸಂಖ್ಯೆ ಕೂಡ ಕಡಿಮೆ ಆಗಿದೆ. ಆದರೆ ಮುಂದಿನ ದಿನಗಳಲ್ಲಿ ಸಂಖ್ಯೆ ಶೂನ್ಯ ತಲುಪಿಸಬೇಕು. ಈ ನಿಟ್ಟಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಶ್ರಮವಹಿಸಬೇಕು ಎಂದರು.ಹೊರಗಿನ ಆಹಾರಕ್ಕಿಂತ ಮನೆಯಲ್ಲೇ ತಯಾರಿಸಿದ ಗುಣಮಟ್ಟದ ಆಹಾರ ಪದಾರ್ಥಗಳ ಬಳಕೆ ಉತ್ತಮ ಆರೋಗ್ಯಕ್ಕೆ ಸಹಕಾರಿ. ಆದಷ್ಟು ಅಕ್ಕಿ, ಸಕ್ಕರೆ, ಸೇರಿದಂತೆ ಬಿಳಿ ಉತ್ಪನ್ನಗಳ ಆಹಾರ ಪದಾರ್ಥಗಳ ಬಳಕೆ ಕಡಿಮೆ ಮಾಡಿ ತಮ್ಮ ಆರೋಗ್ಯ ಕಾಪಾಡಿಕೊಳ್ಳುವಂತೆ ಕರೆ ನೀಡಿದರು.
ರಕ್ತ ಹೀನತೆ, ಅಪೌಷ್ಟಿಕತೆ, ಅನಾರೋಗ್ಯ ಹೋಗಲಾಡಿಸಲು ಇಂದಿಗೂ ಆಗಿಲ್ಲ. ಮಾನವ ಜೀವಿಸಲು ಆರೋಗ್ಯಕರ ಆಹಾರ ಪದಾರ್ಥಗಳ ಸೇವನೆ ಅತಿ ಅಗತ್ಯ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಆರೋಗ್ಯಕರ ಆಹಾರ ಪದಾರ್ಥ ಬಳಸುವಂತೆ ಕರೆ ನೀಡಿದ ಅವರು, 2023ಕ್ಕೆ ಅಪೌಷ್ಟಿಕತೆ ಮುಕ್ತ ಭಾರತ ದೇಶ ನಿರ್ಮಾಣಕ್ಕೆ ಎಲ್ಲರ ಸಹಕಾರ ಅಗತ್ಯ ಎಂದರು.
ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಶ್ವೇತಾ, ತಾ ಪಂ. ಅಭಿವೃದ್ಧಿ ಅಧಿಕಾರಿ ಗಿರೀಶ್, ಶಿಶು ಅಭಿವೃದ್ಧಿ ಅಧಿಕಾರಿ ಜ್ಯೋತಿ ಲಕ್ಷ್ಮಿ ಹಾಗೂ ಇತರ ಅಧಿಕಾರಿಗಳು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಇದ್ದರು.