ದೇಶದ ಅಖಂಡತೆ ಹಾಗೂ ಸಂವಿಧಾನಕ್ಕೆ ಧಕ್ಕೆ ತರುವಂತಹ ದುಷ್ಟಶಕ್ತಿಗಳನ್ನು ನಿಗ್ರಹಿಸಬೇಕಾಗಿದ್ದು, ವಿಶ್ವಕ್ಕೆ ಮಾದರಿ ಸಂವಿಧಾನ ನೀಡಿದ ಡಾ. ಬಾಬಾಸಾಹೇಬ್ ಅಂಬೇಡ್ಕರ್ ನೆನಪಿಸಿಕೊಂಡು ಗೌರವ ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಬಸವರಾಜ ಶಿವಣ್ಣನವರ ಅಭಿಪ್ರಾಯಪಟ್ಟರು.
ಬ್ಯಾಡಗಿ: ದೇಶದ ಅಖಂಡತೆ ಹಾಗೂ ಸಂವಿಧಾನಕ್ಕೆ ಧಕ್ಕೆ ತರುವಂತಹ ದುಷ್ಟಶಕ್ತಿಗಳನ್ನು ನಿಗ್ರಹಿಸಬೇಕಾಗಿದ್ದು, ವಿಶ್ವಕ್ಕೆ ಮಾದರಿ ಸಂವಿಧಾನ ನೀಡಿದ ಡಾ. ಬಾಬಾಸಾಹೇಬ್ ಅಂಬೇಡ್ಕರ್ ನೆನಪಿಸಿಕೊಂಡು ಗೌರವ ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಬಸವರಾಜ ಶಿವಣ್ಣನವರ ಅಭಿಪ್ರಾಯಪಟ್ಟರು. ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಸೋಮವಾರ 77ನೇ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬ್ರಿಟಿಷ್ ಆಳ್ವಿಕೆಯಿಂದ ಸ್ವಾತಂತ್ರ‍್ಯವನ್ನು ಗುರುತಿಸಿದರೆ, ಗಣರಾಜ್ಯೋತ್ಸವವು ಭಾರತೀಯರಿಗೆ ಸ್ವ-ಆಡಳಿತಕ್ಕಾಗಿ ಕಾನೂನು ಚೌಕಟ್ಟನ್ನು ಸ್ಥಾಪಿಸಿತು. ಬಹುಧರ್ಮ, ಭಾಷೆ ಮತ್ತು ಸಂಸ್ಕೃತಿ ಪ್ರತಿಪಾದಿಸುವ ದೇಶ ಭಾರತ ಆಡಳಿತಾತ್ಮಕ ನಿರ್ವಹಣೆಗೆ ರಚಿಸಿಕೊಂಡ ಸಂವಿಧಾನ ಜಾರಿಗೆ ಬಂದು 77 ವರ್ಷಗಳು ತುಂಬುತ್ತಿವೆ. ಎಲ್ಲ ನಾಗರಿಕರಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ, ಚಿಂತನೆ, ಅಭಿವ್ಯಕ್ತಿ ನಂಬಿಕೆ ಮತ್ತು ಆರಾಧನೆ ಸ್ವಾತಂತ್ರ್ಯವನ್ನು, ಸ್ಥಾನಮಾನ ಮತ್ತು ಅವಕಾಶಗಳಲ್ಲಿ ಸಮಾನತೆಯನ್ನು ಖಾತರಿಪಡಿಸಿ ನಮ್ಮೆಲ್ಲರ ನಡುವೆ ಭಾತೃತ್ವ ಹುಟ್ಟಿಸುವುದೇ ಸಂವಿಧಾನದ ಮೂಲ ಆಶಯವಾಗಿದೆ ಎಂದರು.
ಮೌಲ್ಯದೊಂದಿಗೆ ಸಂವಿಧಾನ ಜಾರಿ: ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್.ಪಾಟೀಲ ಮಾತನಾಡಿ, ಇಂದು ಪ್ರಜಾಪ್ರಭುತ್ವ ಮೌಲ್ಯಗಳನ್ನು ಎತ್ತಿ ಹಿಡಿಯುವ ಮಹತ್ವದ ದಿನವಾಗಿದ್ದು, ಎಲ್ಲಾ ನಾಗರಿಕರಿಗೆ ರಾಷ್ಟ್ರದ ಕಡೆಗೆ ಅವರ ಹಕ್ಕುಗಳು, ಕರ್ತವ್ಯ ಮತ್ತು ಜವಾಬ್ದಾರಿಗಳ ನೆನಪಿಸುತ್ತದೆ. ಸ್ವಾತಂತ್ರ‍್ಯ, ಸಮಾನತೆ, ಸಹೋದರತ್ವ, ಏಕತೆ, ಭ್ರಾತೃತ್ವ ಸ್ವಾತಂತ್ರ‍್ಯ ಭಾರತದ ಸಂವಿಧಾನದಲ್ಲಿ ಇರುವ 5 ಪ್ರಮುಖ ಮೌಲ್ಯಗಳಾಗಿವೆ. ಭಾರತದ ಗಣರಾಜ್ಯ ಮಹೋತ್ಸವ ಅರ್ಥಪೂರ್ಣವಾಗಿ ನಾವು ನೀವೆಲ್ಲರೂ ಆಚರಿಸೋಣ, ಸಂವಿಧಾನ ಶಿಲ್ಪಿ ಅಂಬೇಡ್ಕರ್ ಬರೆದ ಭಾರತದ ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ ಎಂದರು.ತಹಸೀಲ್ದಾರ್ ಸಂದೇಶ: ಭಾರತದ ಸಂವಿಧಾನ ಅಂಗೀಕಾರಗೊಂಡ ದಿನವಿದು, ಭಾರತ ದೇಶದಲ್ಲಿ ಸಂವಿಧಾನ ಜಾರಿಗೆ ಬಂದ ಮೇಲೆಯೇ ದೇಶದ ಪ್ರತಿಯೊಬ್ಬರಿಗೂ ಮೂಲಭೂತ ಹಕ್ಕುಗಳಾದ ಸಮಾನತೆ, ಸ್ವತಂತ್ರ, ಧರ್ಮ, ಸಂಸ್ಕೃತಿ, ಶಿಕ್ಷಣ ಮತ್ತು ಇತರೆ ಹಕ್ಕುಗಳು ಸಿಕ್ಕಿರುವುದು, ಸಂವಿಧಾನದಲ್ಲಿ ಮೂಲಭೂತ ಹಕ್ಕುಗಳಂತೆ ಮೂಲಭೂತ ಕರ್ತವ್ಯಗಳಿವೆ. ದೇಶದ ಸಂಪನ್ಮೂಲಗಳನ್ನು ಕಾಪಾಡುವುದು, ರಾಷ್ಟ್ರಗೀತೆ, ರಾಷ್ಟ್ರಧ್ವಜವನ್ನು ಗೌರವಿಸುವುದು, ಸರ್ಕಾರದ ನಿಯಮಗಳು, ಸಂವಿಧಾನದ ಆದರ್ಶಗಳನ್ನು ಪಾಲಿಸುವ ಜವಾಬ್ದಾರಿ ನಮ್ಮ ಮೇಲಿವೆ ಎಂದು ತಹಸೀಲ್ದಾರ್ ಸಂದೇಶ ನೀಡಿದರು. ವೇದಿಕೆಯಲ್ಲಿ ಕೆಸಿಸಿ ಬ್ಯಾಂಕ್ ನಿರ್ದೇಶಕ ಚನ್ನಬಸಪ್ಪ ಹುಲ್ಲತ್ತಿ, ಆಶ್ರಯ ಸಮಿತಿ ಅಧ್ಯಕ್ಷ ಅಬ್ದುಲ್ ಮುನಾಫ್ ಎರೇಶೀಮಿ, ಗ್ಯಾರಂಟಿ ಯೋಜನೆ ತಾಲೂಕಾಧ್ಯಕ್ಷ ಶಂಭನಗೌಡ ಪಾಟೀಲ, ಟಿಈಓ ಕೆ.ಎಂ. ಮಲ್ಲಿಕಾರ್ಜುನ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಜಿ. ಕೋಟಿ, ಸಿಪಿಐ ಚಿಕ್ಕಣ್ಣನವರ, ಮುಖ್ಯಾಧಿಕಾರಿ ವಿನಯಕುಮಾರ, ಮುಖಂಡರಾದ ಬೀರಣ್ಣ ಬಣಕಾರ, ಎಸ್.ಎಸ್. ಅಂಬಲಿ, ಲಕ್ಷ್ಮೀ ಜಿಂಗಾಡೆ, ಮಂಜುನಾಥ ಬೋವಿ, ಸುಮಂಗಲ ರಾರಾವಿ, ದುರ್ಗೇಶ ಗೋಣೆಮ್ಮನವರ, ರಮೇಶ ಸುತ್ತಕೋಟಿ, ಮಂಜುನಾಥ ಉಪ್ಪಾರ ಇನ್ನಿತರರಿದ್ದರು. ಎಂ.ಎಫ್. ಕರಿಯಣ್ಣನವರ (ಮಾಸಣಗಿ) ಕಾರ್ಯಕ್ರಮ ನಿರ್ವಹಿಸಿದರು. ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು, ವಿವಿಧ ಕ್ಷೇತ್ರಗಳಲ್ಲಿನ ಕ್ರೀಡಾ ಸಾಧಕರನ್ನು ವೇದಿಕೆಯಲ್ಲಿ ಸನ್ಮಾನಿಸಲಾಯಿತು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.