ಇಂದಿನಿಂದ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

KannadaprabhaNewsNetwork |  
Published : May 29, 2025, 12:30 AM IST
ಕೃಷಿ | Kannada Prabha

ಸಾರಾಂಶ

ಈ ವಿನೂತನ ಕಾರ್ಯಕ್ರಮದಲ್ಲಿ ಕೃಷಿ ವಿಜ್ಞಾನ ಕೇಂದ್ರ ಮತ್ತು ಇತರ ಸಂಶೋಧನ ಕೇಂದ್ರಗಳ ವಿಜ್ಞಾನಿಗಳು, ಇಲಾಖೆಯ ಅಧಿಕಾರಿಗಳು ರೈತರ ಕಡೆ ತೆರಳಿ, ಜಿಲ್ಲೆಯ ಎಲ್ಲಾ ರೈತರಿಗೆ ಹೋಬಳಿ ಹಾಗೂ ಗ್ರಾಮ ಪಂಚಾಯಿತಿಯ ಮಟ್ಟದಲ್ಲಿ ಮಾಹಿತಿ ನೀಡುವುದು ಈ ಅಭಿಯಾನದ ಉದ್ದೇಶವಾಗಿದೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ಭಾರತೀಯ ಕೃಷಿ ಅನುಸಂಧಾನ ಪರಿಷತ್ ನವದೆಹಲಿ ಹಾಗೂ ಅದರ ವಿವಿಧ ಅಂಗ ಸಂಸ್ಥೆಗಳ ಸಂಶೋಧನ ಕೇಂದ್ರಗಳು, ದೇಶದ ಕೃಷಿ ವಿಜ್ಞಾನ ಕೇಂದ್ರಗಳು, ಕೃಷಿ ಇಲಾಖೆ ಮತ್ತು ತೋಟಗಾರಿಕೆ ಇಲಾಖೆ ಮತ್ತು ಇತರ ಅಭಿವೃದ್ಧಿ ಇಲಾಖೆಗಳ ಸಹಯೋಗದೊಂದಿಗೆ ಈ ಮುಂಗಾರು ಹಂಗಾಮಿನಲ್ಲಿ ಕೃಷಿಕರಿಗೆ ತಾಂತ್ರಿಕತೆಗಳ ಲಭ್ಯವಾಗುವಂತೆ ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ಮೇ 29ರಿಂದ ಜೂನ್ 12ರ ವರೆಗೆ ಹಮ್ಮಿಕೊಳ್ಳಲಾಗಿದೆ.ಮೇ 29ರಂದು ಬೆಳಗ್ಗೆ 10 ಗಂಟೆಗೆ ಗೋಣಿಕೊಪ್ಪ ಮತ್ತು ವಿರಾಜಪೇಟೆಯಲ್ಲಿ ನಡೆಯಲಿದೆ. ಮೇ 30ರಂದು ಬೆಳಗ್ಗೆ 10 ಗಂಟೆಗೆ ಹುದಿಕೇರಿ ಮತ್ತು ನಾಪೋಕ್ಲು, ಮೇ 31ರಂದು ಬೆಳಗ್ಗೆ 10 ಗಂಟೆಗೆ ಕೊಡ್ಲಿಪೇಟೆ ಮತ್ತು ಅಮ್ಮತ್ತಿ, ಜೂನ್ 2ರಂದು ಬೆಳಗ್ಗೆ 10 ಗಂಟೆಗೆ ಭಾಗಮಂಡಲ ಮತ್ತು ಶ್ರೀಮಂಗಲ, ಜೂನ್ 3ರಂದು ಬೆಳಗ್ಗೆ 10 ಗಂಟೆಗೆ ಕುಶಾಲನಗರ ಮತ್ತು ಮಡಿಕೇರಿ, ಜೂನ್ 4ರಂದು ಬೆಳಗ್ಗೆ 10 ಗಂಟೆಗೆ ಬಾಳೆಲೆ ಮತ್ತು ಸುಂಟಿಕೊಪ್ಪ, ಜೂನ್ 5ರಂದು ಬೆಳಗ್ಗೆ 10 ಗಂಟೆಗೆ ಸಂಪಾಜೆ ಮತ್ತು ಶಾಂತಳ್ಳಿ, ಜೂನ್ 6ರಂದು ಬೆಳಗ್ಗೆ 10 ಗಂಟೆಗೆ ಸೋಮವಾರಪೇಟೆ ಮತ್ತು ಶನಿವಾರಸಂತೆ, ಜೂನ್ 7ರಂದು ಬೆಳಗ್ಗೆ 10 ಗಂಟೆಗೆ ಮಾಲ್ದಾರೆ ಮತ್ತು ಕೂತಿ, ಜೂನ್ 9ರಂದು ಬೆಳಗ್ಗೆ 10 ಗಂಟೆಗೆ ಅವರೆಸುಂದ ಮತ್ತು ತೋಳೂರುಶೆಟ್ಟಿ, ಜೂನ್ 10ರಂದು ಬೆಳಗ್ಗೆ 10 ಗಂಟೆಗೆ ಚೆನ್ನಯ್ಯನಕೋಟೆ ಮತ್ತು ಚೌಡ್ಲು, ಜೂನ್ 11ರಂದು ಬೆಳಗ್ಗೆ 10 ಗಂಟೆಗೆ ಗೂಡ್ಲೂರು ಮತ್ತು ಕೊಡಗರಹಳ್ಳಿ, ಜೂನ್, 12 ರಂದು ಬೆಳಗ್ಗೆ 10 ಗಂಟೆಗೆ ಹೆಬ್ಬಾಲೆ ಮತ್ತು ಅರೆಯೂರು ಎಂಬಲ್ಲಿ ನಡೆಯಲಿದೆ.ಈ ವಿನೂತನ ಕಾರ್ಯಕ್ರಮದಲ್ಲಿ ಕೃಷಿ ವಿಜ್ಞಾನ ಕೇಂದ್ರ ಮತ್ತು ಇತರ ಸಂಶೋಧನ ಕೇಂದ್ರಗಳ ವಿಜ್ಞಾನಿಗಳು, ಇಲಾಖೆಯ ಅಧಿಕಾರಿಗಳು ರೈತರ ಕಡೆ ತೆರಳಿ, ಜಿಲ್ಲೆಯ ಎಲ್ಲಾ ರೈತರಿಗೆ ಹೋಬಳಿ ಹಾಗೂ ಗ್ರಾಮ ಪಂಚಾಯಿತಿಯ ಮಟ್ಟದಲ್ಲಿ ಮಾಹಿತಿ ನೀಡುವುದು ಈ ಅಭಿಯಾನದ ಉದ್ದೇಶವಾಗಿದೆ.ಇಲ್ಲಿಯ ರೈತರನ್ನು ಒಗ್ಗೂಡಿಸಿ ನೂತನ ತಂತ್ರಜ್ಞಾನಗಳು, ಹೊಸ ತಳಿಗಳ ಮತ್ತು ಬೀಜಗಳ ನಿಖರವಾದ ಹವಾಮಾನ ಮಾಹಿತಿ ಮತ್ತು ಸರ್ಕಾರದ ನಾನಾ ಲಾಭದಾಯಕ ಯೋಜನೆಗಳು, ಕೃಷಿಯಲ್ಲಿ ಹೆಚ್ಚು ಲಾಭವನ್ನು ಹೇಗೆ ಪಡೆಯಬಹುದು ಎಂಬ ಬಗ್ಗೆ ಮಾಹಿತಿ ನೀಡಲಾಗುವುದು. ರೈತರು ನೀಡುವ ಪ್ರಕ್ರಿಯೆಗಳನ್ನು ಸಂಗ್ರಹಿಸಿ ಅವರ ಹೊಸ ಆವಿಷ್ಕಾರಗಳನ್ನು ಸಂಶೋಧನೆ ಮತ್ತು ಪ್ರಸಾರ ಚಟುವಟಿಕೆಗಳಲ್ಲಿ ಬಳಸಲಾಗುತ್ತದೆ. ಬೆಳೆ, ಮಣ್ಣು ಮತ್ತು ಲಭ್ಯವಿರುವ ಸಂಪನ್ಮೂಲಗಳ ಆಧಾರದ ಮೇಲೆ ತಜ್ಞರಿಂದ ಸಲಹೆಗಳನ್ನು ನೀಡಲಾಗುತ್ತದೆ. ಜೊತೆಗೆ ಸರ್ಕಾರದ ವಿವಿಧ ಯೋಜನೆಗಳ ಲಾಭ ಪಡೆಯುವ ವಿಧಾನಗಳ ಕುರಿತು ಸಂಪೂರ್ಣ ಮಾಹಿತಿ ನೀಡಲಾಗುತ್ತದೆ.ಕೊಡಗು ಜಿಲ್ಲೆಯ ಆಯಾಯ ಹೋಬಳಿಯ ರೈತ ಸಂಪರ್ಕ ಕೇಂದ್ರಗಳ ಮೂಲಕ ವಿಕಸಿತ ಕೃಷಿ ಸಂಕಲ್ಪ ಅಭಿಯಾನದ ತಂಡ ಭೇಟಿ ನೀಡುವ ಬಗ್ಗೆ ಅಲ್ಲಿನ ರೈತರಿಗೆ ಮುಂಚಿತವಾಗಿ ಮಾಹಿತಿ ನೀಡಲಾಗುತ್ತದೆ. ವಿಕಸಿತ ಕೃಷಿ ಸಂಕಲ್ಪ ಅಭಿಯಾನದ ತಂಡ ಆಯಾಯ ಗ್ರಾಮಗಳಿಗೆ/ ಹೋಬಳಿಗೆ ಬಂದಾಗ ಈ ಕಾರ್ಯಕ್ರಮದಲ್ಲಿ ರೈತರು ಭಾಗವಹಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡು ಕಾರ್ಯಕ್ರಮದ ಲಾಭವನ್ನು ಪಡೆದು ಕೃಷಿಯನ್ನು ಲಾಭದಾಯಕವಾಗಿಸಿಕೊಳ್ಳಬಹುದು ಎಂದು ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಣಸೆ, ಹಲಸು, ನೇರಳೆಗೆ ಮಂಡಳಿ ರಚಿಸಿ: ದೇವೇಗೌಡ
ಗುಮ್ಮ ಬಂದ ಗುಮ್ಮ, ಮಕ್ಕಳಿಗೆ ಹೊಡೆಯೋ ಗುಮ್ಮ!