ಮಡಿಕೇರಿ: ಮಾಜಿ ಯೋಧ ಸಂದೇಶ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಜೀವಿತಾ ಎಂಬಾಕೆಯನ್ನು ಶುಕ್ರವಾರ ಬಂಧನ ಮಾಡಲಾಗಿದೆ.
ಶುಕ್ರವಾರ ರಾತ್ರಿ 7 ಗಂಟೆಗೆ ಮಡಿಕೇರಿ ನಗರ ಪೊಲೀಸರು ಜೀವಿತಾಳನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದರು.ಮಾಜಿ ಯೋಧ ಸಂದೇಶ್ ಇತ್ತೀಚೆಗೆ ಡೆತ್ ನೋಟ್ ಬರೆದಿಟ್ಟು ಮಡಿಕೇರಿಯ ಪಂಪಿನ ಕೆರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಸಂದೇಶ್‌ಗೆ ಫೇಸ್‍ಬುಕ್‍ನಲ್ಲಿ ಪರಿಚಯವಾದ ವಿವಾಹಿತೆ ಜೀವಿತಾ, ಸ್ನೇಹಕ್ಕೆ ಬಿದ್ದು ಆಕೆಯಿಂದಲೇ ಹನಿಟ್ರ್ಯಾಪ್‍ಗೆ ಒಳಗಾಗಿದ್ದರು. ಆಕೆಯ ಕಾಟ ಸಹಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವಿಶೇಷ ತನಿಖಾ ತಂಡವನ್ನು ರಚಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಮೂರು ಆರೋಪಿಗಳನ್ನು ಬಂಧಿಸಲಾಗಿದೆ.