ಆ.27ರಂದು ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳಿಗೆ ಪರೀಕ್ಷೆ

KannadaprabhaNewsNetwork |  
Published : Aug 25, 2024, 01:49 AM IST
ಕರ್ನಾಟಕ ಲೋಕಸೇವಾ ಆಯೋಗವು ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ 'ಎ' ಮತ್ತು ಗ್ರೂಪ್ 'ಬಿ' ವೃಂದದ 384 ಹುದ್ದೆಗಳ ನೇಮಕಾತಿಗೆ ಇದೇ ಆಗಸ್ಟ್ 27 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸುತ್ತಿದ್ದು, ಯಾವುದೇ ಅಕ್ರಮ ಚಟುವಟಿಕೆಗೆ ಅವಕಾಶ ನೀಡದೆ ಜಿಲ್ಲೆಯಲ್ಲಿ ಪರೀಕ್ಷೆ ಸುಸೂತ್ರವಾಗಿ ನಡೆಸುವಂತೆ ಅಧಿಕಾರಿಗಳಿಗೆ ಡಿ.ಸಿ. ಬಿ.ಫೌಜಿಯಾ ತರನ್ನುಮ್ ಸೂಚನೆ ನೀಡಿದರು. | Kannada Prabha

ಸಾರಾಂಶ

ಕರ್ನಾಟಕ ಲೋಕಸೇವಾ ಆಯೋಗವು ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ ‘ಎ’ ಮತ್ತು ಗ್ರೂಪ್ ‘ಬಿ’ ವೃಂದದ 384 ಹುದ್ದೆಗಳ ನೇಮಕಾತಿಗೆ ಇದೇ ಆ.27ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸುತ್ತಿದ್ದು, ಯಾವುದೇ ಅಕ್ರಮ ಚಟುವಟಿಕೆಗೆ ಅವಕಾಶ ನೀಡದೆ ಜಿಲ್ಲೆಯಲ್ಲಿ ಪರೀಕ್ಷೆ ಸುಸೂತ್ರವಾಗಿ ನಡೆಸುವಂತೆ ಅಧಿಕಾರಿಗಳಿಗೆ ಡಿಸಿ ಬಿ.ಫೌಜಿಯಾ ತರನ್ನುಮ್ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ಕಲಬುರಗಿ

ಕರ್ನಾಟಕ ಲೋಕಸೇವಾ ಆಯೋಗವು ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ ‘ಎ’ ಮತ್ತು ಗ್ರೂಪ್ ‘ಬಿ’ ವೃಂದದ 384 ಹುದ್ದೆಗಳ ನೇಮಕಾತಿಗೆ ಇದೇ ಆ.27ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸುತ್ತಿದ್ದು, ಯಾವುದೇ ಅಕ್ರಮ ಚಟುವಟಿಕೆಗೆ ಅವಕಾಶ ನೀಡದೆ ಜಿಲ್ಲೆಯಲ್ಲಿ ಪರೀಕ್ಷೆ ಸುಸೂತ್ರವಾಗಿ ನಡೆಸುವಂತೆ ಅಧಿಕಾರಿಗಳಿಗೆ ಡಿಸಿ ಬಿ.ಫೌಜಿಯಾ ತರನ್ನುಮ್ ಸೂಚನೆ ನೀಡಿದರು.

ಶನಿವಾರ ತಮ್ಮ ಕಚೇರಿ‌ ಸಭಾಂಗಣದಲ್ಲಿ ಪರೀಕ್ಷೆ ಹಿನ್ನೆಲೆಯಲ್ಲಿ ಅಧಿಕಾರಿಗಳ ಪೂರ್ವಭಾವಿ ಸಭೆ ನಡೆಸಿದ ಅವರು, ಕಲಬುರಗಿ ನಗರದ ಒಟ್ಟು 35 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು,‌ 220 ವಿಕಲಚೇತನರು ಒಳಗೊಂಡಂತೆ 11 ಸಾವಿರಕ್ಕೂ ಹೆಚ್ಚಿನ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ತಿಳಿಸಿದರು.

ಪರೀಕ್ಷೆ ಸುಗಮವಾಗಿ ನಡೆಯುವ ದೃಷ್ಠಿಯಿಂದ 11 ಜನ ರೂಟ್ ಅಧಿಕಾರಿ, 35 ಜನ‌ ಸ್ಥಳೀಯ ಪರಿವೀಕ್ಷಣಾಧಿಕಾರಿ ಹಾಗೂ ಪ್ರತಿ ನಾಲ್ಕು ಕೇಂದ್ರಕ್ಕೆ ಓರ್ವ ಗ್ರೂಪ್ ‘ಎ’ ದರ್ಜೆಯ ಜಿಲ್ಲಾ ಮಟ್ಟದ ಅಧಿಕಾರಿಯನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ ಎಂದರು.

ಮೊಬೈಲ್, ಎಲೆಕ್ಟ್ರಾನಿಕ್ ಗ್ಯಾಜೆಟ್ಸ್ ನಿಷೇಧ:

ಪರೀಕ್ಷಾ ಕೇಂದ್ರದ ವ್ಯಾಪ್ತಿಯಲ್ಲಿ ಮೊಬೈಲ್, ಎಲೆಕ್ಟ್ರಾನಿಕ್ ವಾಚ್, ಕ್ಯಾಲ್ಕುಲೇಟರ್, ಪೇಜರ್ ಸೇರಿದಂತೆ ಎಲ್ಲಾ ಬಗೆಯ ಎಲೆಕ್ಟ್ರಾನಿಕ್ ವಸ್ತುಗಳನ್ನು ತೆಹೆದುಕೊಂಡು ಹೋಗುವುದು ನಿಷೇಧಿಸಲಾಗಿದೆ.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಡಿಸಿಪಿ (ಕ್ರೈಂ ಮತ್ತು ಸಂಚಾರ) ಪ್ರವೀಣ ನಾಯಕ್, ಸಹಾಯಕ ಆಯುಕ್ತೆ ರೂಪಿಂದರ್‌ ಸಿಂಗ್ ಕೌರ್, ಡಿಡಿಪಿ‌ಐ ಸೂರ್ಯಕಾಂತ ಮದಾನೆ ಸೇರಿದಂತೆ ವೀಕ್ಷಕರು, ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಇದ್ದರು.

ಸಿಸಿ ಟಿವಿ ಕಣ್ಗಾವಲಿನಲ್ಲಿ ಪರೀಕ್ಷೆ

ಪರೀಕ್ಷೆಯು ಸಿಸಿ ಟಿವಿ ಕಣ್ಗಾವಲಿನಲ್ಲಿ ನಡೆಯಲಿದ್ದು, ಪ್ರವೇಶ ಪತ್ರದಲ್ಲಿ ತಿಳಿಸಿರುವಂತೆ ಡ್ರೆಸ್ ಕೋಡ್ ನಿಯಮ ಅಭ್ಯರ್ಥಿಗಳು ಪಾಲಿಸಬೇಕು. ಪ್ರತಿ ಕೇಂದ್ರಕ್ಕೆ ಫ್ರಿಸ್ಕಿಂಗ್ ಮಾಡಲು ಅಗತ್ಯ ಪೊಲೀಸ್ ಸಿಬ್ಬಂದಿಯನ್ನು ಒದಗಿಸುವಂತೆ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಿದ ಜಿಲ್ಲಾಧಿಕಾರಿಗಳು, ಎಲೆಕ್ಟ್ರಾನಿಕ್ ಉಪಕರಣ ಬಳಸಿ ನಕಲು‌ ಮಾಡುವುದಕ್ಕೆ ಕಡಿವಾಣ ಹಾಕಲು ಈ ಬಾರಿ ಪೊಲೀಸರ ಜೊತೆಗೆ ಇಎನ್‌ಟಿ ತಜ್ಞ ವೈದ್ಯರು ಸಹ ಫ್ರಿಸ್ಕಿಂಗ್ ಮಾಡಲಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಯಣ್ಣನ ವೀರಭೂಮಿ ಶೀಘ್ರ ಲೋಕಾರ್ಪಣೆ
ಅಕ್ರಮ ಬಾಂಗ್ಲಾ ವಲಸಿಗರನ್ನು ಹೊರಗಟ್ಟಿ