ಕನ್ನಡಪ್ರಭ ವಾರ್ತೆ ಮಡಿಕೇರಿ
ಅತ್ಯುತ್ತಮ ಕರ್ತವ್ಯ ನಿರ್ವಹಣೆಗಾಗಿ ರಾಜ್ಯ ಪೊಲೀಸ್ ಇಲಾಖೆಯ ಉನ್ನತಾಧಿಕಾರಿಗಳಿಂದ ನೀಡಲ್ಪಡುವ ಪ್ರಶಸ್ತಿಯಾಗಿದ್ದು, ಇದೇ ಮೊದಲ ವರ್ಷದ ಪ್ರಶಸ್ತಿಗೆ ಕೊಡಗಿನ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಸೋಮವಾರಪೇಟೆ ಪೊಲೀಸ್ ಠಾಣಾಧಿಕಾರಿ ಮುದ್ದು ಮಹದೇವ, ವಿಶೇಷ ಮಕ್ಕಳ ಘಟಕಲ್ಯಾಣಾಧಿಕಾರಿ ಮತ್ತು ಹೆಡ್ ಕಾನ್ಸಟೇಬಲ್ ಸುಮತಿ ಅವರು ಭಾಜನರಾಗಿದ್ದಾರೆ.
ರಾಜ್ಯದಲ್ಲಿ ಅತ್ಯುತ್ತಮ ಕಾರ್ಯನಿರ್ವಹಣೆ ಮಾಡಿರುವ ಪೊಲೀಸರಿಗೆ ಪ್ರೋತ್ಸಾಹ ನೀಡಲು ಉನ್ನತಾಧಿಕಾರಿಗಳು ಪ್ರಶಸ್ತಿ ಸ್ಥಾಪಿಸಿದ್ದು, ಬುಧವಾರ ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.