ಕನ್ನಡಪ್ರಭ ವಾರ್ತೆ ಪೀಣ್ಯ ದಾಸರಹಳ್ಳಿ
ಜನಸಂದಣಿ ಜಾಗದಲ್ಲಿ ಅಳವಡಿಕೆ:
ಬಾಗಲಗುಂಟೆ ಬಿಬಿಎಂಪಿ ಪ್ರಧಾನ ಕಚೇರಿ ಬಳಿ, ಕಮ್ಮಗೊಂಡನಹಳ್ಳಿ ಬಸ್ ನಿಲ್ದಾಣ, ಮಲ್ಲಸಂದ್ರ ಪೈಪ್‌ಲೈನ್, ಶ್ರೀರಾಮ ದೇವಸ್ಥಾನ, 8ನೇ ಮ್ಯೆಲಿ, ದಾಸರಹಳ್ಳಿ, ಹೀಗೆ ಕ್ಷೇತ್ರದಾದ್ಯಂತ ಜನಸಂದಣಿಯಿರುವ ಸ್ಥಳಗಳಲ್ಲಿ ಹೆಚ್ಚಾಗಿ ಫ್ಲೆಕ್ಸ್ ಅಳಡಿಸಲಾಗುತ್ತಿದೆ. ವಿವಿಧ ರಾಜಕೀಯ ಪಕ್ಷಗಳ ರಾಜಕಾರಣಿಗಳ ಬೆಂಬಲಿಗರು, ಮುಖಂಡರ ಭಾವಚಿತ್ರವಿರುವ ಫ್ಲೆಕ್ಸ್, ಬ್ಯಾನರ್ ಹಾಕಿ ನಗರದ ಸೌಂದರ್ಯಕ್ಕೆ ಧಕ್ಕೆ ಉಂಟು ಮಾಡುತ್ತಿದ್ದಾರೆ.ಕಾಂಗ್ರೆಸ್ ಪಕ್ಷದ ಮುಖಂಡರೊಬ್ಬರು ತಮ್ಮ ಹುಟ್ಟುಹಬ್ಬದ ಅಚರಣೆಗೆ ಕ್ಷೇತ್ರದಾದ್ಯಂತ ಬ್ಯಾನರ್ ಪ್ಲೆಕ್ಸ್ ಅಳವಡಿಸಿ ಕ್ಷೇತ್ರದ ಅಂದವನ್ನು ಕೆಡಿಸಿದ್ದಾರೆ. ಅಷ್ಟೇ ಅಲ್ಲದೆ ಇವರ ವಿರುದ್ಧ ಬಿಬಿಎಂಪಿ ಅಧಿಕಾರಿಗಳಾಗಲಿ, ಪೊಲೀಸರಾಗಲಿ ಕ್ರಮ ಕೈಗೊಳ್ಳುತ್ತಿಲ್ಲ.
ಸಾರ್ವಜನಿಕರಿಂದ ಬಿಬಿಎಂಪಿಗೆ ದೂರು
ಅನಧಿಕೃತ, ಅಪಾಯಕಾರಿ ಫ್ಲೆಕ್ಸ್, ಬ್ಯಾನರ್‌ಗಳ ಬಗ್ಗೆ ಸಾರ್ವಜನಿಕರು ಬಿಬಿಎಂಪಿ ದಾಸರಹಳ್ಳಿ ವಲಯದ ಅಧಿಕಾರಿಗಳಿಗೆ ಸಾಕಷ್ಟು ಹಲವು ಬಾರಿ ದೂರು ನೀಡಿದ್ದಾರೆ. ಆದರೆ, ಅಧಿಕಾರಿಗಳು ಮೌನಕ್ಕೆ ಶರಣಾಗಿದ್ದಾರೆ. ಅಧಿಕಾರಿಗಳು ಆಗೊಮ್ಮೆ ಈಗೊಮ್ಮೆ ಅನಧಿಕೃತ ಪ್ರಚಾರ ಸಾಮಗ್ರಿ ತೆರವುಗೊಳಿಸಿದರೂ ಮರುದಿನ ಅದೇ ಜಾಗದಲ್ಲಿ ಬ್ಯಾನರ್, ಫ್ಲೆಕ್ಸ್‌ಗಳು ನೇತಾಡುತ್ತಿರುತ್ತವೆ. ಇನ್ನಾದರೂ ಪಾಲಿಕೆ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಫ್ಲೆಕ್ಸ್, ಬ್ಯಾನರ್, ಪೋಸ್ಟರ್ ಅಳವಡಿಕೆ ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.