ಕುಂದಾಪುರ: ಶಿಕ್ಷಣ ಕ್ಷೇತ್ರದಲ್ಲಿ ನಿರಂತಕ ಹೊಸ ಪ್ರಯೋಗಗಳಿಂದ ಖ್ಯಾತವಾಗಿರುವ ಇಲ್ಲಿನ ಸುಣ್ಣಾರಿಯ ಎಕ್ಸಲೆಂಟ್ ಶಿಕ್ಷಣ ಸಂಸ್ಥೆ ಇದೀಗ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ರಾಜ್ಯದಲ್ಲೇ ಮೊದಲ ಬಾರಿಗೆ ಕೃತಕ ಬುದ್ಧಿಮತ್ತೆ ಆಧಾರಿತ ಪ್ರವೇಶ ಪರೀಕ್ಷಾ ವ್ಯವಸ್ಥೆಯನ್ನು ಪರಿಚಯಿಸುತ್ತಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಂ. ಮಹೇಶ್ ಹೆಗ್ಡೆ ತಿಳಿಸಿದರು. ಕಾಲೇಜಿನಲ್ಲಿ ಸುದ್ದಿಗೋಷ್ಠಿಯಲ್ಲಿ ವಿವರಗಳನ್ನು ನೀಡಿದ ಅವರು, ಕಳೆದ 14 ವರ್ಷಗಳಿಂದ ವಿವಿಧ ಪ್ರವೇಶ ಪರೀಕ್ಷೆಗಳಿಗೆ ಗುಣಮಟ್ಟದ ತರಬೇತಿ ನೀಡುತ್ತಿರುವ ತಮ್ಮ ಸಂಸ್ಥೆ, ಈ ಬಾರಿ ಸಿಇಟಿ, ನೀಟ್, ಜೆಇಇ ಮೇನ್ಸ್ ಮತ್ತು ಅಡ್ವಾನ್ಸ್ಡ್, ಸಿಎ ಹಾಗೂ ಸಿಎಸ್ ಪರೀಕ್ಷೆಗಳಲ್ಲಿ ಕುಂದಾಪುರ ತಾಲೂಕಿನಲ್ಲಿ ಮುಂಚೂಣಿ ಸಾಧನೆ ಮಾಡಿದೆ. ಶೈಕ್ಷಣಿಕ ಸಾಧನೆಯ ಜತೆಗೆ ಕ್ರೀಡಾ ಕ್ಷೇತ್ರದಲ್ಲಿಯೂ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಸಂಸ್ಥೆಯ ಗುರುತಿಸಿಕೊಂಡಿದೆ ಎಂದರು.ಶಿಕ್ಷಣವನ್ನು ಕೇವಲ ವ್ಯವಹಾರವಾಗಿ ಪರಿಗಣಿಸದೆ, ಸಮಾಜಕ್ಕೆ ಮರಳಿ ಕೊಡುಗೆ ನೀಡುವ ಆಶಯದೊಂದಿಗೆ ಸಂಸ್ಥೆ ಕಾರ್ಯನಿರ್ವಹಿಸುತ್ತಿದೆ. ಈ ಬದ್ಧತೆಯಿಂದಾಗಿಯೇ ಹೊರಜಿಲ್ಲೆಗಳ ಪೋಷಕರಿಂದ ಈ ಸಂಸ್ಥೆಗೆ ತಮ್ಮ ಮಕ್ಕಳ ಪ್ರವೇಶಾತಿಗೆ ಬೇಡಿಕೆ ಹೆಚ್ಚುತ್ತಿದೆ ಎಂದು ಹೇಳಿದರುಈ ಹಿಂದೆ ವಿದ್ಯಾರ್ಥಿವೇತನ ಮತ್ತು ಪ್ರವೇಶಾತಿ ಪರೀಕ್ಷೆಗಳನ್ನು ನಡೆಸಲು ವಿವಿಧ ಊರುಗಳಿಗೆ ತೆರಳಿ ಪರೀಕ್ಷೆ ಆಯೋಜಿಸುವುದು ಅಥವಾ ವಿದ್ಯಾರ್ಥಿಗಳನ್ನೇ ಸಂಸ್ಥೆಗೆ ಕರೆಯುವುದು ಅನಿವಾರ್ಯವಾಗಿತ್ತು. ಇದರಿಂದ ವಿದ್ಯಾರ್ಥಿ - ಪೋಷಕರಿಗೆ ಪ್ರಯಾಣದ ಖರ್ಚು, ಸಮಯದ ವ್ಯಯ ಆಗುತ್ತಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯದ ಯಾವುದೇ ಭಾಗದ ವಿದ್ಯಾರ್ಥಿಯೂ ತಮ್ಮಲ್ಲಿ ಪ್ರವೇಶಾತಿಯಿಂದ ವಂಚಿತರಾಗಬಾರದು ಎಂಬ ಆಶಯದೊಂದಿಗೆ ಎಐ ಆಧಾರಿತ ಪ್ರವೇಶ ಪರೀಕ್ಷಾ ವ್ಯವಸ್ಥೆಯನ್ನು ರೂಪಿಸಲಾಗಿದೆ ಎಂದವರು ಹೇಳಿದರು.ಈ ವ್ಯವಸ್ಥೆಯಡಿ ಎಕ್ಸಲೆಂಟ್ ಪಿಯು ಕಾಲೇಜಿನ ಪ್ರಥಮ ವರ್ಷದ ಪ್ರವೇಶಾತಿ ಬಯಸುವ ವಿದ್ಯಾರ್ಥಿಗಳು ದಿನದ 24 ಗಂಟೆಗಳಲ್ಲಿಯೂ ತಮಗೆ ಅನುಕೂಲವಾದ ಸಮಯದಲ್ಲಿ ಪರೀಕ್ಷೆ ಬರೆಯಬಹುದು. ಇದರಿಂದ ವಿದ್ಯಾರ್ಥಿಗಳಿಗೆ ಪ್ರಯಾಣದ ಸಮಯ ಮತ್ತು ಹಣ ಉಳಿತಾಯದ ಜತೆಗೆ ಪರೀಕ್ಷಾ ಪ್ರಕ್ರಿಯೆಯೂ ಸುಲಭವಾಗಲಿದೆ.
ಹೆಚ್ಚಿನ ಮಾಹಿತಿಗಾಗಿ: ಮೊಬೈಲ್: 6361329550 ವೆಬ್‌ಸೈಟ್: https://excellentpucollege.comನ್ನು ಸಂಪರ್ಕಿಸಬಹುದು1 ಕೋಟಿ ರು. ವಿದ್ಯಾರ್ಥಿವೇತನ: ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 600ಕ್ಕೂ ಅಧಿಕ ಅಂಕ ಗಳಿಸುವ ಪ್ರತಿಭಾವಂತ ವಿದ್ಯಾರ್ಥಿಗಳ ಶೈಕ್ಷಣಿಕ ವೆಚ್ಚವನ್ನು ಭರಿಸುವ ಮೂಲಕ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯು ಪ್ರತಿವರ್ಷ ಸುಮಾರು 1 ಕೋಟಿ ರು.ಗಳವರೆಗೆ ವಿದ್ಯಾರ್ಥಿವೇತನ ನೀಡುತ್ತಿದೆ ಎಂದು ಎಂ. ಮಹೇಶ್ ಹೆಗ್ಡೆ ಹೇಳಿದರು.