ರಾಣಿ ಅಬ್ಬಕ್ಕ ಶೌರ್ಯ, ಸ್ವಾಭಿಮಾನ ಪ್ರೇರಣೆ: ಅನಿತಾ ಸುರೇಂದ್ರ ಕುಮಾರ್

KannadaprabhaNewsNetwork |  
Published : Jan 19, 2026, 01:30 AM IST
ರಾಣಿ ಅಬ್ಬಕ್ಕ ವಿಶೇಷ ಪುರಸ್ಕಾರವನ್ನು ಎಕ್ಸಲೆಂಟ್ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್ ಅವರಿಗೆ ಪ್ರದಾನ ಮಾಡಲಾಯಿತು | Kannada Prabha

ಸಾರಾಂಶ

ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ವಿಭಾಗ ಹಾಗೂ ಎಕ್ಸಲೆಂಟ್ ವಿದ್ಯಾಸಂಸ್ಥೆ ಆಶ್ರಯದಲ್ಲಿ ಅಬ್ಬಕ್ಕ@500 ಪ್ರೇರಣಾದಾಯಿ 100 ಸರಣಿ ಉಪನ್ಯಾಸ

ಮೂಡುಬಿದಿರೆ: ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ವಿಭಾಗ ಹಾಗೂ ಎಕ್ಸಲೆಂಟ್ ವಿದ್ಯಾಸಂಸ್ಥೆ ಆಶ್ರಯದಲ್ಲಿ ಅಬ್ಬಕ್ಕ@500 ಪ್ರೇರಣಾದಾಯಿ 100 ಸರಣಿ ಉಪನ್ಯಾಸದ 99ನೇ ಕಾರ್ಯಕ್ರಮ ಎಕ್ಸಲೆಂಟ್‌ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮವನ್ನು ಅಬ್ಬಕ್ಕ ವಂಶಸ್ಥರಾದ ಧರ್ಮಸ್ಥಳದ ಅನಿತಾ ಸುರೇಂದ್ರ ಕುಮಾರ್ ಉದ್ಘಾಟಿಸಿ ಮಾತನಾಡಿ, ರಾಣಿ ಅಬ್ಬಕ್ಕರ ಶೌರ್ಯ, ಧೈರ್ಯ ಮತ್ತು ಸ್ವಾಭಿಮಾನದಿಂದ ಯುವ ಜನಾಂಗ ಪ್ರೇರಣೆ ಪಡೆಯಬೇಕು ಎಂದರು.ಉಪನ್ಯಾಸ ನೀಡಿದ ರವಿ ಅಲೆವೂರಾಯ, ರಾಣಿ ಅಬ್ಬಕ್ಕ ವಿದೇಶಿ ಆಕ್ರಮಣಕಾರರ ವಿರುದ್ಧ ನಡೆಸಿದ ಹೋರಾಟ, ಅವರ ನಾಯಕತ್ವ ಮತ್ತು ದೇಶಭಕ್ತಿಯ ಮೌಲ್ಯಗಳನ್ನು ವಿವರಿಸಿದರು.ರಾಣಿ ಅಬ್ಬಕ್ಕ ವಿಶೇಷ ಪುರಸ್ಕಾರವನ್ನು ಎಕ್ಸಲೆಂಟ್ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್ ಅವರಿಗೆ ಪ್ರದಾನ ಮಾಡಲಾಯಿತು. ಇದೇ ರಾಣಿ ಅಬ್ಬಕ್ಕ ಕುರಿತಾಗಿ ಗಮನಾರ್ಹವಾಗಿ ಸೇವೆ ಸಲ್ಲಿಸಿದ ಬಂಟ್ವಾಳ ಸಂಚಯಗಿರಿ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಅಧ್ಯಕ್ಷ ಡಾ.ಎಂ.ತುಕರಾಂ ಪೂಜಾರಿ, ಉಳ್ಳಾಲ ವೀರ ರಾಣಿ ಅಬ್ಬಕ್ಕ ಉತ್ಸವ ಸಮಿತಿ ಅಧ್ಯಕ್ಷ ದಿನಕರ್ ಉಳ್ಳಾಲ್ , ಯಕ್ಷಾಂಗಣ ಮಂಗಳೂರು ಕಾರ್ಯಾಧ್ಯಕ್ಷ ಭಾಸ್ಕರ್ ರೈ ಕುಕ್ಕುವಳ್ಳಿ, ವಿಶ್ರಾಂತ ಪ್ರಾಂಶುಪಾಲ, ಸಾಹಿತಿ ಡಾ.ಯು.ಕೆ. ಸಸಿಹಿತ್ಲು ಅವರನ್ನು ಗೌರವಿಸಲಾಯಿತು.

ಎಕ್ಸಲೆಂಟ್ ವಿದ್ಯಾ ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್ ಅಧ್ಯಕ್ಷತೆ ವಹಿಸಿದ್ದರು. ಕೆ ಆರ್ ಎಂ ಎಸ್ ಎಸ್ ರಾಜ್ಯ ಜಂಟಿ ಪ್ರಧಾನ ಕಾರ್ಯದರ್ಶಿ ಡಾ. ಮಾಧವ ಎಂ.ಕೆ. ಸ್ವಾಗತಿಸಿ ಪ್ರಸ್ತಾವನೆಗೈದರು.

ಪ್ರಕಾಶ್ ಮಲ್ಪೆ ಅವರ ನಿರ್ಮಾಣದ ಏಐ ಮಾದರಿಯ ಅಬ್ಬಕ್ಕ ಸಾಕ್ಷ್ಯಚಿತ್ರ ಪ್ರದರ್ಶನ ನಡೆಯಿತು. ಕೆ. ಸುಧಾಕರ್ ಗಂಗೊಳ್ಳಿ ಅವರ ಸಂಗ್ರಹದ ಅಪರೂಪದ 25000 ಅಂಚೆಚೀಟಿಗಳ ಪ್ರದರ್ಶನ ನಡೆಯಿತು. ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕ ವೃಂದ, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಕಾರ್ಯಕ್ರಮವು ರಾಣಿ ಅಬ್ಬಕ್ಕರ ಶೌರ್ಯ, ಮಹಿಳಾ ಶಕ್ತಿಯ ಮಹತ್ವ ಮತ್ತು ಇತಿಹಾಸಪೂರ್ಣ ಹೋರಾಟವನ್ನು ಪುನರುಚ್ಚರಿಸುವ ಮಾದರಿ ವೇದಿಕೆಯಾಗಿ ಪರಿಣಮಿಸಿತು. ಕೆಆರ್‌ಎಂಎಸ್ಎಸ್ ನ ಮಮತಾ ಶೆಟ್ಟಿ ನಿರೂಪಿಸಿದರು. ಉಪಮುಖ್ಯೋಪಾಧ್ಯಾಯರಾದ ಜಯಶೀಲಾ ವಂದಿಸಿದರು

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದ್ವಿಭಾಷಾ ನೀತಿ ತುಳು ಕಲಿಕೆಗೆ ಅಡ್ಡಿಯಾಗದು: ತಾರಾನಾಥ ಗಟ್ಟಿ ಕಾಪಿಕಾಡ್‌
ಶಾಂತಳ್ಳಿ ಶ್ರೀ ಕುಮಾರಲಿಂಗೇಶ್ವರ ದೇವಳ ಜಾತ್ರಾ ಮಹೋತ್ಸವ ಸಮಾರೋಪ