ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ತಾಲೂಕಿನ ಮುಂಡುಗದೊರೆ ಗ್ರಾಮದ ರಾಮಮಂದಿರ ವೃತ್ತದ ಬಳಿ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹಾಗೂ ಅರಕೆರೆ ಸಮುದಾಯ ಆರೋಗ್ಯ ಕೇಂದ್ರದಿಂದ ಏರ್ಪಡಿಸಿದ್ದ ಮತದಾನದ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಏ.26 ರಂದು ನಡೆಯುವ ಲೋಕಸಭಾ ಚುನಾವಣೆಯನ್ನು ಎಲ್ಲ ಹಬ್ಬಗಳಂತೆ ಆಚರಿಸುವಂತೆ ಪ್ರಜಾಪ್ರಭುತ್ವದ ಹಬ್ಬವನ್ನು ವಿಭಿನ್ನ ರೀತಿಯಲ್ಲಿ ಆಚರಣೆ ಮಾಡಬೇಕು. ಯುವ ಸಮೂಹ ಸೇರಿದಂತೆ ಪ್ರತಿಯೊಬ್ಬರು ಮತಗಟ್ಟೆಗೆ ಆಗಮಿಸಿ ಮತದಾನ ಮಾಡಬೇಕು. ಮತದಾನ ಪ್ರತಿಯೊಬ್ಬರ ಹಕ್ಕು ಮತ್ತು ಕರ್ತವ್ಯವಾಗಿದ್ದು, ಹಾಗಾಗಿ ಮತದಾನ ಮಾಡಿ, ಪ್ರಜಾ ಪ್ರಭುತ್ವ ಗಟ್ಟಿಗೊಳಿಸಿ ಎಂದು ಸಲಹೆ ನೀಡಿದರು.ಇದೇ ವೇಳೆ ಮತದಾನದ ಜಾಗೃತಿಯ ವಿವಿಧ ಸಂದೇಶ ಫಲಕಗಳೊಂದಿಗೆ ಜಾಗೃತಿ ಮೂಡಿಸಿ ಪ್ರತಿಜ್ಞಾ ವಿಧಿ ಬೋಧಿಸಿದರು.
ಮಳವಳ್ಳಿ: ತಾಲೂಕಿನ ಬಂಡೂರು ಗ್ರಾಮದಲ್ಲಿ ಶುಕ್ರವಾರ ಲೋಕಸಭಾ ಚುನಾವಣೆ ಅಂಗವಾಗಿ ತಾಲೂಕು ಸ್ವೀಪ್ ಸಮಿತಿ, ಗ್ರಾಮ ಪಂಚಾಯಿತಿ ಸಹಯೋಗದೊಂದಿಗೆ ಮತದಾನ ಜಾಗೃತಿ ಜಾಥಾ ನಡೆಯಿತು.
ಮತದಾನದ ಬಗ್ಗೆ ಜನರಿಗೆ ಮನವರಿಕೆ ಮಾಡಿ ಕೊಡುವುದು ಸಮಾಜ ಸೇವೆ ಕೆಲಸವಾಗಿದೆ. ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಮಹಿಳಾ ಸ್ವ-ಸಹಾಯ ಒಕ್ಕೂಟದ ಸಹಯೋಗದೊಂದಿಗೆ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ಹೇಳಿದರು.
ಪಿಡಿಒ ಗಂಗಾಧರ್, ತಾಲೂಕು ಐಇಸಿ ಸಂಯೋಜಕ ಎಚ್.ಸುನಿಲ್ ಕುಮಾರ್. ಎನ್ಆರ್ ಎಲ್ಎಂ ಒಕ್ಕೂಟದ ಸಿಬ್ಬಂದಿ ಮಂಜುನಾಥ್, ಮಹದೇವ, ನಿಂಗರಾಜು, ಎಸ್ಡಿಎ ಮಲ್ಲೇಶ್, ಗ್ರಾ.ಪಂ.ಸಿಬ್ಬಂದಿ, ಸ್ತ್ರೀಶಕ್ತಿ ಸಂಘಗಳ ಪದಾಧಿಕಾರಿಗಳು, ಆಶಾ ಕಾರ್ಯಕರ್ತೆರು ಭಾಗವಹಿಸಿದ್ದರು.