ಎಲೈಟ್ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ವಿಜ್ಞಾನ ಮಾದರಿಗಳ ಪ್ರದರ್ಶನ

KannadaprabhaNewsNetwork |  
Published : Nov 22, 2026, 01:45 AM IST
20ಎಚ್ಎಸ್ಎನ್13 :  | Kannada Prabha

ಸಾರಾಂಶ

ವಿಜ್ಞಾನ ವಸ್ತುಪ್ರದರ್ಶನಗಳು ವಿದ್ಯಾರ್ಥಿಗಳು ಕಲಿತ ಜ್ಞಾನವನ್ನು ಪ್ರಾಯೋಗಿಕವಾಗಿ ಬಳಸಿಕೊಂಡು ಸ್ವಂತ ಮಾದರಿಗಳು ಹಾಗೂ ಪ್ರಯೋಗಗಳನ್ನು ರೂಪಿಸಿ ಪ್ರದರ್ಶಿಸಲು ಉತ್ತಮ ಅವಕಾಶ ಕಲ್ಪಿಸುತ್ತವೆ. ವಿಜ್ಞಾನ, ತಂತ್ರಜ್ಞಾನ ಮತ್ತು ವೈದ್ಯಕೀಯ ಕ್ಷೇತ್ರಗಳಲ್ಲಿ ಭಾರತ ಸಾಧಿಸಿರುವ ಪ್ರಗತಿ ಹಾಗೂ ಸಾಧನೆಗಳು ಹೆಮ್ಮೆಯ ಸಂಗತಿಯಾಗಿವೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲೆಯ ಕಾರ್ಯದರ್ಶಿ ಎಚ್. ಪಿ. ಕಿರಣ್ ಗೌಡ ಮಾತನಾಡಿ, ವಿಜ್ಞಾನವು ವಿದ್ಯಾರ್ಥಿಗಳಲ್ಲಿ ಆಸಕ್ತಿ, ಕುತೂಹಲ, ಕೌಶಲ್ಯ, ಸಮಯಪ್ರಜ್ಞೆ ಹಾಗೂ ವೈಜ್ಞಾನಿಕ ಮನೋಭಾವ ಬೆಳೆಸುತ್ತದೆ. ಪ್ರಸ್ತುತ ವೇಗವಾಗಿ ಬೆಳೆಯುತ್ತಿರುವ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನವನ್ನು ಸದುದ್ದೇಶದಿಂದ ಬಳಸಿಕೊಂಡರೆ ದೇಶದ ಭವಿಷ್ಯ ಮತ್ತಷ್ಟು ಉಜ್ವಲವಾಗಲಿದೆ ಎಂದು ಅಭಿಪ್ರಾಯಪಟ್ಟರು.

ಕನ್ನಡಪ್ರಭ ವಾರ್ತೆ ಹಾಸನನಗರದ ಹೇಮಾವತಿ ನಗರದಲ್ಲಿರುವ ಎಲೈಟ್ ಶಾಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ‘ಎಲೈಟ್ ಸೈನ್ಸ್ ಸ್ಪೆಕ್ಟ್ರಾ-೨೦೨೬’ ವಿಜ್ಞಾನ ವಸ್ತುಪ್ರದರ್ಶನ ವಿದ್ಯಾರ್ಥಿಗಳ ಸೃಜನಶೀಲತೆ, ವೈಜ್ಞಾನಿಕ ಚಿಂತನೆ ಹಾಗೂ ಆವಿಷ್ಕಾರ ಮನೋಭಾವಕ್ಕೆ ವೇದಿಕೆಯಾಯಿತು.ಕಾರ್ಯಕ್ರಮವನ್ನು ಅರಸೀಕೆರೆಯ ಕೆ.ಪಿ.ಎಸ್. ಶಾಲೆಯ ಶಿಕ್ಷಣ ತಜ್ಞ ಡಾ. ಸಚ್ಚಿದಾನಂದ ಉದ್ಘಾಟಿಸಿ ಮಾತನಾಡಿ, ವಿಜ್ಞಾನ ವಸ್ತುಪ್ರದರ್ಶನಗಳು ವಿದ್ಯಾರ್ಥಿಗಳು ಕಲಿತ ಜ್ಞಾನವನ್ನು ಪ್ರಾಯೋಗಿಕವಾಗಿ ಬಳಸಿಕೊಂಡು ಸ್ವಂತ ಮಾದರಿಗಳು ಹಾಗೂ ಪ್ರಯೋಗಗಳನ್ನು ರೂಪಿಸಿ ಪ್ರದರ್ಶಿಸಲು ಉತ್ತಮ ಅವಕಾಶ ಕಲ್ಪಿಸುತ್ತವೆ. ವಿಜ್ಞಾನ, ತಂತ್ರಜ್ಞಾನ ಮತ್ತು ವೈದ್ಯಕೀಯ ಕ್ಷೇತ್ರಗಳಲ್ಲಿ ಭಾರತ ಸಾಧಿಸಿರುವ ಪ್ರಗತಿ ಹಾಗೂ ಸಾಧನೆಗಳು ಹೆಮ್ಮೆಯ ಸಂಗತಿಯಾಗಿವೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲೆಯ ಕಾರ್ಯದರ್ಶಿ ಎಚ್. ಪಿ. ಕಿರಣ್ ಗೌಡ ಮಾತನಾಡಿ, ವಿಜ್ಞಾನವು ವಿದ್ಯಾರ್ಥಿಗಳಲ್ಲಿ ಆಸಕ್ತಿ, ಕುತೂಹಲ, ಕೌಶಲ್ಯ, ಸಮಯಪ್ರಜ್ಞೆ ಹಾಗೂ ವೈಜ್ಞಾನಿಕ ಮನೋಭಾವ ಬೆಳೆಸುತ್ತದೆ. ಪ್ರಸ್ತುತ ವೇಗವಾಗಿ ಬೆಳೆಯುತ್ತಿರುವ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನವನ್ನು ಸದುದ್ದೇಶದಿಂದ ಬಳಸಿಕೊಂಡರೆ ದೇಶದ ಭವಿಷ್ಯ ಮತ್ತಷ್ಟು ಉಜ್ವಲವಾಗಲಿದೆ ಎಂದು ಅಭಿಪ್ರಾಯಪಟ್ಟರು.ಶಾಲೆಯ ಖಜಾಂಚಿ ಸಪ್ನ ಕಿರಣ್ ಮಾತನಾಡಿ, ವಿಜ್ಞಾನ ವಸ್ತುಪ್ರದರ್ಶನಗಳು ಮಕ್ಕಳ ಕಲ್ಪನಾಶಕ್ತಿ ಮತ್ತು ಸೃಜನಶೀಲತೆಯನ್ನು ಹೊರತರುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಪೋಷಕರು ಮಕ್ಕಳ ಇಂತಹ ಪ್ರತಿಭೆಗಳಿಗೆ ಪ್ರೋತ್ಸಾಹ ಹಾಗೂ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. ನಂತರ ಶಾಲೆಯ ಆಡಳಿತಾಧಿಕಾರಿ ಕೆ. ಎಂ. ನಾಗರಾಜು, ವಿದ್ಯಾರ್ಥಿಗಳು ಹಾಗೂ ಪೋಷಕರು ಕೂಡ ವಿಜ್ಞಾನ ವಸ್ತುಪ್ರದರ್ಶನದ ಬಗ್ಗೆ ಮಾತನಾಡಿದರು.ಪ್ರದರ್ಶನದಲ್ಲಿ ವಿವಿಧ ವಿಜ್ಞಾನ ವಲಯಗಳು, ಕಂಪ್ಯೂಟರ್ ಜೋನ್, ಎಐ ಮತ್ತು ರೊಬೊಟಿಕ್ಸ್ ಜೋನ್, ಗಣಿತ ವಿಭಾಗ, ಆರ್ಟ್‌ ಗ್ಯಾಲರಿ, ಕ್ರಾಫ್ಟ್ ಗ್ಯಾಲರಿ, ಟೆರಾರಿಯಂ ಮೂಲಕ ಪರಿಸರ ಸಂರಕ್ಷಣೆಯ ಕಿರು ಕಲಾಕೃತಿಗಳು, ಸೋಷಿಯಲ್ ಜೋನ್, ಗೇಮ್ ಜೋನ್ ಹಾಗೂ ಫುಡ್ ಜೋನ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಸುಮಾರು ೫೦೦ ಮಾದರಿಗಳನ್ನು ಪ್ರದರ್ಶಿಸಲಾಯಿತು. ವಿದ್ಯಾರ್ಥಿಗಳು ತಯಾರಿಸಿದ ವೈವಿಧ್ಯಮಯ ಮಾದರಿಗಳು ಮತ್ತು ವಿನೂತನ ಪ್ರಯೋಗಗಳು ಪೋಷಕರು ಹಾಗೂ ಸಾರ್ವಜನಿಕರ ಗಮನ ಸೆಳೆದವು.ಕಾರ್ಯಕ್ರಮದಲ್ಲಿ ಶಾಲೆಯ ಆಡಳಿತಾಧಿಕಾರಿ ಕೆ.ಎಂ. ನಾಗರಾಜು, ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಂಜಲಿ ಕೊಲೆ ಪ್ರಕರಣ: ಗಿರೀಶ್ ಅಪರಾಧಿ; 25ಕ್ಕೆ ಶಿಕ್ಷೆ ಪ್ರಕಟ
ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಜೀವನ ನಡೆಸಿ