ಸರ್ಕಾರದ ಸಾಧನೆ ಬಿಂಬಿಸುವ ವಸ್ತು ಪ್ರದರ್ಶನಕ್ಕೆ ಚಾಲನೆ

KannadaprabhaNewsNetwork |  
Published : Jul 16, 2025, 12:45 AM IST
14 ದೇವನಹಳ್ಳಿ 01 | Kannada Prabha

ಸಾರಾಂಶ

ದೇವನಹಳ್ಳಿ: ಪಟ್ಟಣದ ಟೌನ್ ಬಸ್ ನಿಲ್ದಾಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಜು.೧೩ ರಿಂದ ೧೬ರವರೆಗೆ ಹಮ್ಮಿಕೊಂಡಿರುವ ಸರ್ಕಾರದ ಎರಡು ವರ್ಷದ ಸಾಧನೆ ಹಾಗೂ ಸರ್ಕಾರದ ಯೋಜನೆಗಳನ್ನು ಬಿಂಬಿಸುವ ವಸ್ತು ಪ್ರದರ್ಶನಕ್ಕೆ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಸಿ.ಜಗನ್ನಾಥ ಚಾಲನೆ ನೀಡಿದರು.

ದೇವನಹಳ್ಳಿ: ಪಟ್ಟಣದ ಟೌನ್ ಬಸ್ ನಿಲ್ದಾಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಜು.೧೩ ರಿಂದ ೧೬ರವರೆಗೆ ಹಮ್ಮಿಕೊಂಡಿರುವ ಸರ್ಕಾರದ ಎರಡು ವರ್ಷದ ಸಾಧನೆ ಹಾಗೂ ಸರ್ಕಾರದ ಯೋಜನೆಗಳನ್ನು ಬಿಂಬಿಸುವ ವಸ್ತು ಪ್ರದರ್ಶನಕ್ಕೆ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಸಿ.ಜಗನ್ನಾಥ ಚಾಲನೆ ನೀಡಿದರು.

ಶಕ್ತಿ ಯೋಜನೆಯು ಹೊಸ ಮೈಲಿಗಲ್ಲು ಸ್ಥಾಪಿಸಿದ್ದು, ಮಹಿಳಾ ಪ್ರಯಾಣಿಕರ ಸಂಖ್ಯೆ ಇಂದು ೫೦೦ ಕೋಟಿ ಉಚಿತ ಟಿಕೆಟ್ ವಿತರಣೆಯನ್ನು ತಲುಪಿದೆ. ಹಾಗಾಗಿ ದೇವನಹಳ್ಳಿ ಟೌನ್ ಬಸ್ ನಿಲ್ದಾಣದಲ್ಲಿ ಬಸ್ ಗಳಿಗೆ ವಿಶೇಷ ಅಲಂಕಾರ ಮಾಡಿ ಪೂಜೆ ಸಲ್ಲಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿರುವ ಮಹಿಳೆಯರಿಗೆ ಸಿಹಿ ಹಂಚಿ ಸಂಭ್ರಮಿಸಲಾಯಿತು.

ಪುರಸಭೆ ಅಧ್ಯಕ್ಷ ಮುನಿಕೃಷ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಸಿ ಮಂಜುನಾಥ್, ಬಮೂಲ್ ನಿರ್ದೇಶಕ ಎಸ್.ಪಿ ಮುನಿರಾಜು, ದೇವನಹಳ್ಳಿ ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯರಾದ ಲಕ್ಷ್ಮೀ ನಾರಾಯಣಪ್ಪ, ಅನಂತಕುಮಾರಿ, ಮುಖಂಡರಾದ ಅಣ್ಣೇಶ್ವರ ಚಂದ್ರಶೇಖರ್, ಚಿನ್ನಪ್ಪ, ರವಿಕುಮಾರ್, ಅತ್ತಿಬೆಲೆ ನರಸಪ್ಪ, ಸಿಂಗ್ರಹಳ್ಳಿ ಆನಂದ್, ಬಾಲಸುಬ್ರಹ್ಮಣ್ಯ, ದೇವನಹಳ್ಳಿ ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ರಾಧಾಮಣಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಶಿಕಲಾ, ತಾಲೂಕು ಪ್ರಧಾನ ಕಾರ್ಯದರ್ಶಿ ಮಾಧವಿ, ಪುರಸಭೆ ಮುಖ್ಯಾಧಿಕಾರಿ ದೊಡ್ಡಮಲ್ಲಯ್ಯ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪನಿರ್ದೇಶಕರಾದ ಅಶೋಕ್ ಕುಮಾರ್ ಡಿ., ತಾಪಂ ಇಒ ಶ್ರೀನಾಥ್ ಗೌಡ, ಪುರಸಭೆ ಹಿರಿಯ ಆರೋಗ್ಯ ನಿರೀಕ್ಷಕಿ ಶ್ರೀ ದೇವಿ, ನಗರ ಸಾರಿಗೆ ಅಧಿಕಾರಿಗಳು ಉಪಸ್ಥಿತರಿದ್ದರು.

(ಫೋಟೋ ಕ್ಯಾಫ್ಷನ್‌)

ಸರ್ಕಾರದ ಎರಡು ವರ್ಷದ ಸಾಧನೆ ಹಾಗೂ ಸರ್ಕಾರದ ಯೋಜನೆಗಳನ್ನು ಬಿಂಬಿಸುವ ವಸ್ತು ಪ್ರದರ್ಶನಕ್ಕೆ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷ ಸಿ.ಜಗನ್ನಾಥ ಚಾಲನೆ ನೀಡಿದರು.

PREV

Latest Stories

ಡಿಕೆಶಿ ಪರ ದಾವಣಗೆರೆಯಲ್ಲಿ 101 ತೆಂಗಿನಕಾಯಿ ಸೇವೆ
ಬೆಂಗಳೂರು-ತುಮಕೂರುಪ್ರಯಾಣ, ಜನ ಹೈರಾಣ
ಸ್ಮಾರ್ಟ್‌ ಮೀಟರ್‌ ವಿವಾದ: ಸಚಿವಜಾರ್ಜ್ ವಿರುದ್ಧ ಬಿಜೆಪಿ ದೂರು