ಕ್ರೀಡೆಯಲ್ಲಿ ಭೇದ ಭಾವವಿಲ್ಲ: ನಜ್ಮಾ ಫಾರುಖಿ

KannadaprabhaNewsNetwork |  
Published : Oct 09, 2026, 02:45 AM IST
ಮೂಡುಬಿದಿರೆಯಲ್ಲಿಮೈಸೂರುವಿಭಾಗಮಟ್ಟದಕ್ರಿಕೆಟ್ ಟೂರ್ನಿಗೆ ಚಾಲನೆಕ್ರೀಡೆಯಲ್ಲಿ ಯಾವುದೇ ಭೇದಭಾವವಿಲ್ಲ: ಪೊಲೀಸ್ಆಯುಕ್ತೆ ನಜ್ಮಾ ಫಾರುಖಿ | Kannada Prabha

ಸಾರಾಂಶ

ಜಿ.ಪಂ., ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಚೇರಿ ಮಂಗಳೂರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮೂಡುಬಿದಿರೆ ಇವರ ಸಹಯೋಗದಲ್ಲಿ 2026–27ನೇಸಾಲಿನ ಮೈಸೂರು ವಿಭಾಗ ಮಟ್ಟದ ಕ್ರಿಕೆಟ್ ಪಂದ್ಯಾವಳಿಗೆ ಬುಧವಾರ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಚಾಲನೆ

ಮೂಡುಬಿದಿರೆ: ಕ್ರೀಡೆಗೆ ಲಿಂಗ, ಜಾತಿ, ಪ್ರದೇಶ ಸೇರಿದಂತೆ ಯಾವುದೇ ಭೇದಭಾವವಿಲ್ಲ. ಕ್ರೀಡೆಯು ವಿದ್ಯಾರ್ಥಿಗಳಲ್ಲಿ ಶಿಸ್ತು, ಆತ್ಮವಿಶ್ವಾಸ, ನಾಯಕತ್ವಹಾಗೂ ತಂಡ ಭಾವನೆಯನ್ನು ಬೆಳೆಸುವ ಶಕ್ತಿಯುತ ಮಾಧ್ಯಮ ಎಂದು ಮಂಗಳೂರು ನಗರ ಸಂಚಾರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತೆ ನಜ್ಮಾ ಫಾರುಖಿ ಹೇಳಿದರು.

ಜಿ.ಪಂ., ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಚೇರಿ ಮಂಗಳೂರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮೂಡುಬಿದಿರೆ ಇವರ ಸಹಯೋಗದಲ್ಲಿ 2026–27ನೇಸಾಲಿನ ಮೈಸೂರು ವಿಭಾಗ ಮಟ್ಟದ ಕ್ರಿಕೆಟ್ ಪಂದ್ಯಾವಳಿಗೆ ಬುಧವಾರ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು.

ಇಂದಿನ ಮಕ್ಕಳು ತಮ್ಮದೇ ಆದ ಕನಸುಗಳನ್ನು ಕಟ್ಟಿಕೊಂಡಿರುತ್ತಾರೆ. ಆ ಕನಸುಗಳನ್ನು ನನಸಾಗಿಸಲು ದೊರೆಯುವ ಪ್ರತಿಯೊಂದು ಅವಕಾಶವನ್ನೂ ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಮಂಗಳೂರಿನ ಕೆ.ಎಂ.ಎಫ್.ನಿರ್ದೇಶಕ ಸುಚರಿತಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಂಡು ಉತ್ತಮ ನಾಗರಿಕರಾಗಿ ರೂಪುಗೊಳ್ಳಬೇಕು. ಸತತ ಪ್ರಯತ್ನವಿದ್ದರೆ ಸಾಧನೆ ನಿಶ್ಚಿತ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ವಿರುಪಾಕ್ಷಪ್ಪ ಮಾತನಾಡಿ, ಓದಿನೊಂದಿಗೆ ಕ್ರೀಡೆಯಲ್ಲೂ ತೊಡಗಿಸಿಕೊಂಡಾಗ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನವಾಗುತ್ತದೆ. ಕ್ರೀಡೆ ಸಾಮಾಜಿಕ ಸಾಮರಸ್ಯ, ಶಿಸ್ತು ಹಾಗೂ ತಂಡ ಭಾವನೆಯನ್ನು ಕಲಿಸುತ್ತದೆ ಎಂದರು.

ಎಕ್ಸಲೆಂಟ್ ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್ ಮಾತನಾಡಿ, ಹುಡುಗಿಯರ ಕ್ರಿಕೆಟಿಗೂ ಹೆಚ್ಚಿನ ಪ್ರೋತ್ಸಾಹ ನೀಡುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಎಕ್ಸಲೆಂಟ್ ವಿದ್ಯಾ ಸಂಸ್ಥೆಯಲ್ಲಿ ಬಾಲಕಿಯರ ಕ್ರಿಕೆಟ್ ತಂಡ ರೂಪಿಸುವುದಾಗಿ ಪ್ರಕಟಿಸಿದರು.

ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ಮಾತನಾಡಿ, ಕ್ರೀಡೆಯಿಂದ ಹೊಂದಾಣಿಕೆ, ಆತ್ಮವಿಶ್ವಾಸ, ಭರವಸೆ, ಪ್ರಯತ್ನ ಹಾಗೂ ಒಗ್ಗಟ್ಟಿನ ಮಹತ್ವವನ್ನು ಕಲಿಯಬಹುದು ಎಂದರು.

ಸಹಾಯಕ ಪೊಲೀಸ್‌ ಆಯುಕ್ತೆ ನಜ್ಮಾಫಾರುಖಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ವಿಷ್ಣುನಾರಾಯಣ ಹೆಬ್ಬಾರ್ ಅವವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.

ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಚರಿತೇಶ್ ಶೆಟ್ಟಿ, ಮೂಡುಬಿದಿರೆ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಗ್ರೇಡ್–1ರ ಅಧ್ಯಕ್ಷ ನವೀನ್ ಚಂದ್ರ ಅಂಬೂರಿ, ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ತ್ಯಾಗಂ, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಸುಧೀರ್ ಕುಮಾರ್ ಸಹಿತ ಇಲಾಖೆಯ ಅಧಿಕಾರಿಗಳು, ವಿವಿಧ ಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರು ಇದ್ದರು.

ದಕ್ಷಿಣ ಕನ್ನಡ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ವಿಷ್ಣು ನಾರಾಯಣ ಹೆಬ್ಬಾರ್‌ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಮುಖ್ಯೋಪಾಧ್ಯಾಯ ಶಿವಪ್ರಸಾದ್‌ ಭಟ್‌ ಸ್ವಾಗತಿಸಿದರು. ಉಡುಪಿ ಕ್ರಿಕೆಟ್‌ ತಡದ ಕೋಚ್‌ ಅಡ್ವಿನ್ಮೆಂಡೋನ್ಸಾ ಮೊದಲ ದಿನದ ಪಂದ್ಯಾಟದ ಅನುಭವಗಳನ್ನು ಹಂಚಿಕೊಂಡರು. ಸತೀಶ್‌ ನಿರೂಪಿಸಿದರು.

ಪಂದ್ಯಾವಳಿಯಲ್ಲಿ ಮೈಸೂರು ವಿಭಾಗದ ವಿವಿಧ ಜಿಲ್ಲೆಗಳಿಂದ ಆಯ್ಕೆಯಾದ 20 ತಂಡಗಳು ಪಾಲ್ಗೊಂಡಿವೆ. ಕಲ್ಲಬೆಟ್ಟುವಿನ ಎಕ್ಸಲೆಂಟ್‌ ಆಂಗ್ಲ ಮಾಧ್ಯಮ ಶಾಲೆ ಪಂದ್ಯಾವಳಿಯ ಸ್ಥಳೀಯ ಆತಿಥ್ಯ ವಹಿಸಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶ್ರೀಶಾ ಸೌಹಾರ್ದ ಸೊಸೈಟಿ ನಿವ್ವಳ ಲಾಭದಲ್ಲಿ ಶೇ.35ರಷ್ಟು ಏರಿಕೆ
10ರಂದು ಮಾ ‘ರನ್ ಆ್ಯಂಡ್ ರೈಡ್ ಫಾರ್ ಡಿಗ್ನಿಟಿ’